Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಸ್ಲೀಪ್ ಡಿವೋರ್ಸ್’: ಉತ್ತಮ ಆರೋಗ್ಯಕ್ಕಾಗಿ ಪ್ರತ್ಯೇಕವಾಗಿ ಮಲಗಲು ಮುಂದಾಗುತ್ತಿರುವ ದಂಪತಿಗಳು!

21/03/2026 9:53 PM

ಬಹಾಮಾಸ್ ಬಳಿಯ ‘ಶಾರ್ಕ್’ಗಳಲ್ಲಿ ಕೊಕೇನ್ ಮತ್ತು ಕೆಫೀನ್ ಅಂಶ ಕಂಡುಬಂದಿದೆ ; ಅಧ್ಯಯನ

21/03/2026 9:53 PM

ಭಾವನಾತ್ಮಕವಾಗಿ ‘ಅಪಕ್ವ ಪೋಷಕ’ರನ್ನು ನಿಭಾಯಿಸುವುದು ಹೇಗೆ? ಮನಶ್ಶಾಸ್ತ್ರಜ್ಞರು ನೀಡಿದ 3 ಸೂತ್ರಗಳಿವು

21/03/2026 9:49 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದಲ್ಲಿ `ನಿರ್ಜೀವ ಜನನ’ದ ಬಗ್ಗೆ `ಆಡಿಟ್ ನಡೆಸುವುದು ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ
KARNATAKA

ರಾಜ್ಯದಲ್ಲಿ `ನಿರ್ಜೀವ ಜನನ’ದ ಬಗ್ಗೆ `ಆಡಿಟ್ ನಡೆಸುವುದು ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

By kannadanewsnow5719/09/2025 6:57 AM

ಬೆಂಗಳೂರು: ರಾಜ್ಯದಲ್ಲಿ ಪ್ರಸವ ಪೂರ್ವದ ಮರಣ ಪ್ರಮಾಣ ತಗ್ಗಿಸುವ ನಿಟ್ಟಿನಲ್ಲಿ ರಾಜ್ಯಮಟ್ಟದ ನಿರ್ಜೀವ ಜನನ (ಸ್ಟಿಲ್ ಬರ್ಥ್) ಆಡಿಟ್ ಸಮಿತಿ ರಚಿಸಿ ‘ನಿರ್ಜೀವ ಜನನ ಕಣ್ಣಾವಲು ಮತ್ತು ಪ್ರತಿಕ್ರಿಯೆ (ಎಸ್ಬಿಎಸ್ಆರ್)’ ವ್ಯವಸ್ಥೆ ಜಾರಿಗೊಳಿಸಲು ಸರಕಾರ ಆಡಳಿತಾತ್ಮಕ ಅನುಮೋದನೆ ನೀಡಿ ಆದೇಶ ಹೊರಡಿಸಿದೆ.

ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, ರಾಜ್ಯದಲ್ಲಿ ನಿರ್ಜೀವ ಜನನಗಳನ್ನು ಗುರುತಿಸಿ, ಕಾರಣಗಳನ್ನು ವರ್ಗೀಕರಿಸಿ ಮತ್ತು ತಡೆಗಟ್ಟುವ ಕ್ರಮಗಳನ್ನು ಕೈಗೊಳ್ಳಲು ರಾಜ್ಯ ಮಟ್ಟದ ನಿರ್ಜೀವ ಜನನ (Still Birth) ಆಡಿಟ್ ಸಮಿತಿಯನ್ನು ರಚಿಸಿ, Still birth Surveillance and Response (SBSR) ರ ವ್ಯವಸ್ಥೆಯನ್ನು ಜಾರಿಗೊಳಿಸಲು ಈ ಕೆಳಕಂಡಂತೆ ಅನುಮೋದನೆ ನೀಡಿದೆ.

(1) ಆಸ್ಪತ್ರೆ ಮಟ್ಟ: ಆಸ್ಪತ್ರೆಯ ನೋಡಲ್ ಅಧಿಕಾರಿಗಳು ನಿರ್ಜೀವ ಜನನದ 24 ಗಂಟೆಗಳ ಒಳಗಾಗಿ ಆಡಿಟ್ ನಡೆಸಿ, ವರದಿಯನ್ನು ಜಿಲ್ಲಾ ಮತ್ತು ರಾಜ್ಯ ಮಟ್ಟದ ನೋಡಲ್ ಅಧಿಕಾರಿಗಳಿಗೆ ಕೂಡಲೇ ಸಲ್ಲಿಸುವುದು.

(2) ಜಿಲ್ಲಾ ಮಟ್ಟದಲ್ಲಿ MDSR ಸಮಿತಿಯಿಂದ :

ಪ್ರತಿ ತಿಂಗಳು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಅಧ್ಯಕ್ಷತೆಯಲ್ಲಿ (MDSR ಸಮಿತಿ) ಜಿಲ್ಲೆಗಳಲ್ಲಿ ಸಂಭವಿಸಿರುವ ಎಲ್ಲಾ ನಿರ್ಜೀವ ಜನನಗಳನ್ನು ಪರಿಶೀಲಿಸುವುದು.

ಪ್ರತಿ ತ್ರೈಮಾಸಿಕದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ (MDSR ಸಮಿತಿ) ಆಯ್ಕೆ ಪ್ರಕರಣಗಳನ್ನು ಪರಿಶೀಲಿಸುವುದು.

ಜಿಲ್ಲಾ ನೋಡಲ್ ಅಧಿಕಾರಿ (RCHO) ನಿರ್ಜೀವ ಜನನಗಳನ್ನು ಜಿಲ್ಲಾ ಆರೋಗ್ಯ ಸಂಘದ ಸಭೆಯ ಅಜೆಂಡಾದಲ್ಲಿ ಸೇರಿಸುವುದನ್ನು ಖಚಿತಪಡಿಸಿಕೊಳ್ಳುವುದು.

ನಿರ್ಜೀವ ಜನನಕ್ಕೆ ಕಾರಣಗಳನ್ನು ಗುರುತಿಸಿ, ಅವುಗಳನ್ನು ಸರಿಪಡಿಸುವಿಕೆಗೆ ಅವಶ್ಯವಿರುವ ಮಾರ್ಗದರ್ಶನ, ಅನುದಾನ, ಆಗಿಂದಾಗ್ಗೆ ಅನುಸರಣೆ ಹಾಗೂ ಮೇಲ್ವಿಚಾರಣೆ ಕುರಿತು ಚರ್ಚಿಸುವುದು.

(3) ರಾಜ್ಯ ಮಟ್ಟದ ನಿರ್ಜೀವ ಜನನ (Still Birth) ಆಡಿಟ್ ಸಮಿತಿ: ರಾಜ್ಯ ಮಟ್ಟದಲ್ಲಿ ಉಪ ನಿರ್ದೇಶಕರು (ತಾಯಿ ಆರೋಗ್ಯ), ಇವರು ನೋಡಲ್ ಅಧಿಕಾರಿಯಾಗಿರುತ್ತಾರೆ. ಕೆಳಗಿನ ಸದಸ್ಯರೊಂದಿಗೆ, ನಿರ್ದೇಶಕರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶನಾಲಯ, ಬೆಂಗಳೂರು, ರವರ ನೇತೃತ್ವದಲ್ಲಿ ನಿರ್ಜೀವ ಜನನದ (Still Birth) ಆಡಿಟ್ ಸಮಿತಿಯನ್ನು ರಚಿಸುವುದು.

ಸದಸ್ಯರು:

ಯೋಜನಾ ನಿರ್ದೇಶಕರು (RCH), ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶನಾಲಯ.

ವೈದ್ಯಕೀಯ ಅಧೀಕ್ಷಕರು, ವಾಣಿ ವಿಲಾಸ್ ಆಸ್ಪತ್ರೆ, BMCRI, ಬೆಂಗಳೂರು.

ಉಪ ನಿರ್ದೇಶಕರು (ತಾಯಿ ಆರೋಗ್ಯ) – ಸದಸ್ಯ ಕಾರ್ಯದರ್ಶಿ.

ಉಪ ನಿರ್ದೇಶಕರು (ಮಕ್ಕಳ ಆರೋಗ್ಯ).

ಸರ್ಕಾರಿ ಮತ್ತು ಖಾಸಗಿ ವಲಯದ ನುರಿತ ಸ್ತ್ರೀರೋಗ ಹಾಗೂ ಮಕ್ಕಳ ತಜ್ಞರು.

ಸಮಿತಿಯ ಕಾರ್ಯಗಳು:

ತಡೆಗಟ್ಟಬಹುದಾದ ಪ್ರಕರಣಗಳು ಮತ್ತು ಜಿಲ್ಲಾ/ವೈದ್ಯಕೀಯ ಕಾಲೇಜು ಆಸ್ಪತ್ರೆಗಳಲ್ಲಿ ಸಂಭವಿಸಿದ ನಿರ್ಜೀವ ಜನನ ಪ್ರಕರಣಗಳ ಬಗ್ಗೆ ಜಿಲ್ಲೆಯಿಂದ ಬಂದಿರುವ ವರದಿಯನ್ನು ಪರಿಶೀಲಿಸುವುದು.

ಹೆಚ್ಚು ನಿರ್ಜೀವ ಜನನ ದರ ಹೊಂದಿದ ಜಿಲ್ಲೆಗಳಲ್ಲಿ ಮತ್ತು ತಡೆಗಟ್ಟಬಹುದಾದ ಆಯ್ಕ ಪ್ರಕರಣಗಳಿಗೆ ನಿರ್ಜೀವ ಜನನ (Still birth) ಕುರಿತು ರಾಜ್ಯ ಮಟ್ಟದ ಆಡಿಟ್ ನಡೆಸುವುದು.

ಆರೋಗ್ಯ ವ್ಯವಸ್ಥೆಯ ನ್ಯೂನತೆಗಳನ್ನು ಗುರುತಿಸಿ, ತಿದ್ದುಪಡಿ ಕ್ರಮಗಳನ್ನು ಶಿಫಾರಸ್ಸು ಮಾಡುವುದು.

ತ್ರೈಮಾಸಿಕ ವರದಿಗಳ ಮೂಲಕ ರಾಜ್ಯ ಮಟ್ಟದ ಶಿಫಾರಸುಗಳನ್ನು ಸಲ್ಲಿಸುವುದು.

It is mandatory to conduct an audit on 'stillbirths' in the state: Important order from the government
Share. Facebook Twitter LinkedIn WhatsApp Email

Related Posts

ಇದು ‘ಕೆಎನ್ಎನ್ ಸುದ್ದಿ’ ಫಲಶೃತಿ: ಚಾಮರಾಜನಗರದಲ್ಲಿ ವಿವಾದಕ್ಕೆ ಕಾರಣವಾಗಿದ್ದ ‘ಫ್ಲೆಕ್ಸ್’ ತೆರವು

21/03/2026 9:16 PM1 Min Read

ಮಂಡ್ಯದಲ್ಲಿ ‘IPS ಅಧಿಕಾರಿ’ಯ ‘ಫ್ಲೆಕ್ಸ್’ ಹವಾ: ರಾಜಕಾರಣಿಗಳನ್ನೇ ಮೀರಿಸಿದ ‘ಎಸ್ಪಿ ಶೋಭರಾಣಿ’!

21/03/2026 7:49 PM2 Mins Read

ಸಾಗರದ ಮಣ್ಣಿನ ಸೌಹಾರ್ದದ ಕಂಪನ್ನು ಹೆಚ್ಚಿಸಿದ ರಂಜಾನ್: ಮಾಜಿ ಸದಸ್ಯ ಜಾಕಿರ್ ನಿವಾಸಕ್ಕೆ ಶಾಸಕ ಬೇಳೂರು ಭೇಟಿ

21/03/2026 7:40 PM2 Mins Read
Recent News

‘ಸ್ಲೀಪ್ ಡಿವೋರ್ಸ್’: ಉತ್ತಮ ಆರೋಗ್ಯಕ್ಕಾಗಿ ಪ್ರತ್ಯೇಕವಾಗಿ ಮಲಗಲು ಮುಂದಾಗುತ್ತಿರುವ ದಂಪತಿಗಳು!

21/03/2026 9:53 PM

ಬಹಾಮಾಸ್ ಬಳಿಯ ‘ಶಾರ್ಕ್’ಗಳಲ್ಲಿ ಕೊಕೇನ್ ಮತ್ತು ಕೆಫೀನ್ ಅಂಶ ಕಂಡುಬಂದಿದೆ ; ಅಧ್ಯಯನ

21/03/2026 9:53 PM

ಭಾವನಾತ್ಮಕವಾಗಿ ‘ಅಪಕ್ವ ಪೋಷಕ’ರನ್ನು ನಿಭಾಯಿಸುವುದು ಹೇಗೆ? ಮನಶ್ಶಾಸ್ತ್ರಜ್ಞರು ನೀಡಿದ 3 ಸೂತ್ರಗಳಿವು

21/03/2026 9:49 PM

ಡೇಟಿಂಗ್ ಲೋಕದ ಹೊಸ ವಿಲನ್ ‘ಘೋಸ್ಟ್‌ಲೈಟಿಂಗ್’: ಇದು ‘ಘೋಸ್ಟಿಂಗ್‌’ಗಿಂತಲೂ ಹೆಚ್ಚು ಅಪಾಯಕಾರಿ ಏಕೆ?

21/03/2026 9:46 PM
State News
KARNATAKA

ಇದು ‘ಕೆಎನ್ಎನ್ ಸುದ್ದಿ’ ಫಲಶೃತಿ: ಚಾಮರಾಜನಗರದಲ್ಲಿ ವಿವಾದಕ್ಕೆ ಕಾರಣವಾಗಿದ್ದ ‘ಫ್ಲೆಕ್ಸ್’ ತೆರವು

By kannadanewsnow0921/03/2026 9:16 PM KARNATAKA 1 Min Read

ವರದಿ: ರಾಮಸಮುದ್ರ ಎಸ್.ವೀರಭದ್ರಸ್ವಾಮಿ, ಚಾಮರಾಜನಗರ ಚಾಮರಾಜನಗರ: ಮಂಡ್ಯ ಜಿಲ್ಲೆಯಲ್ಲಿ ಎಸ್ಪಿಯವರ ಫ್ಲೆಕ್ಸ್ ವಿವಾದ ಸೃಷ್ಟಿಸಿದ ಬೆನ್ನಲ್ಲೇ, ಚಾಮರಾಜನಗರದಲ್ಲೂ ಅಂತಹದ್ದೇ ಘಟನೆ…

ಮಂಡ್ಯದಲ್ಲಿ ‘IPS ಅಧಿಕಾರಿ’ಯ ‘ಫ್ಲೆಕ್ಸ್’ ಹವಾ: ರಾಜಕಾರಣಿಗಳನ್ನೇ ಮೀರಿಸಿದ ‘ಎಸ್ಪಿ ಶೋಭರಾಣಿ’!

21/03/2026 7:49 PM

ಸಾಗರದ ಮಣ್ಣಿನ ಸೌಹಾರ್ದದ ಕಂಪನ್ನು ಹೆಚ್ಚಿಸಿದ ರಂಜಾನ್: ಮಾಜಿ ಸದಸ್ಯ ಜಾಕಿರ್ ನಿವಾಸಕ್ಕೆ ಶಾಸಕ ಬೇಳೂರು ಭೇಟಿ

21/03/2026 7:40 PM

ಚಾಮರಾಜನಗರ: ಪ್ಲೆಕ್ಸ್ ಗಳಲ್ಲಿ ಪ್ರಚಾರಕ್ಕಿಳಿದ್ರಾ ಜಿಲ್ಲಾ ಮಟ್ಟದ ಅಧಿಕಾರಿಗಳು.!?

21/03/2026 7:32 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.