ಸಾಗರ, ಹೊಸನಗರ, ಸೊರಬ ವ್ಯಾಪ್ತಿಯಲ್ಲಿ ‘ಗಣೇಶೋತ್ಸವ’ದ ವೇಳೆ ಈ ಸುಕ್ಷತಾ ನಿಯಮ ಪಾಲನೆ ಕಡ್ಡಾಯ: ಮೆಸ್ಕಾಂ ಇಇ

ಶಿವಮೊಗ್ಗ: ಜಿಲ್ಲೆಯ ಸಾಗರ, ಹೊಸನಗರ, ಸೊರಬ ತಾಲ್ಲೂಕಿನಲ್ಲಿ ಸಾರ್ವಜನಿಕ ಗಣೇಶೋತ್ಸವಕ್ಕೆ ತಾತ್ಕಾಲಿಕ ವಿದ್ಯುತ್‌ ಸಂಪರ್ಕ ಪಡೆಯಲು ಆಯಾ ಉಪವಿಭಾಗಾಧಿಕಾರಿಗಳನ್ನು ಸಂಪರ್ಕಿಸುವಂತೆ ಮೆಸ್ಕಾಂ ಕಾರ್ಯನಿರ್ವಾಹಕ ಅಭಿಯಂತರರಾದಂತ ವೆಂಕಟೇಶ ತಿಳಿಸಿದ್ದಾರೆ. ಈ ಸಂಬಂಧ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಅವರು, ಸಂಬಂಧಪಟ್ಟ ಸ್ಥಳೀಯ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ವಿಳಂಬವಿಲ್ಲದೇ, ನಿಯಮಾವಳಿಗಳ ಅನ್ವಯ ತಾತ್ಕಾಲಿಕ ವಿದ್ಯುತ್ ಸಂಪರ್ಕವನ್ನು ಕಲ್ಪಿಸುವಂತೆ ಉಪವಿಭಾಗೀಯ ಅಧಿಕಾರಿಗಳಿಗೆ ಸೂಚಿಸಿರುವುದಾಗಿ ತಿಳಿಸಿದ್ದಾರೆ. ಹಬ್ಬದ ಸಂಭ್ರಮದ ಜತೆಗೆ ಸುರಕ್ಷತೆ ಬಗ್ಗೆಯೂ ಸಾವರ್ಜನಿಕರು ಕಾಳಜಿ ವಹಿಸಬೇಕು. ಗಣೇಶೋತ್ಸವಕ್ಕೆ ಬೆಳಕಿನ ವ್ಯವಸ್ಥೆ, ದೀಪಾಲಂಕಾರಕ್ಕೆ … Continue reading ಸಾಗರ, ಹೊಸನಗರ, ಸೊರಬ ವ್ಯಾಪ್ತಿಯಲ್ಲಿ ‘ಗಣೇಶೋತ್ಸವ’ದ ವೇಳೆ ಈ ಸುಕ್ಷತಾ ನಿಯಮ ಪಾಲನೆ ಕಡ್ಡಾಯ: ಮೆಸ್ಕಾಂ ಇಇ