ಬೆಂಗಳೂರು: ಗೌರಿ ಗಣೇಶ ಹಬ್ಬದ ಸಂದರ್ಭದಲ್ಲಿ ಆಯೋಜಕರು ಪ್ರಸಾದವನ್ನು ಸಾರ್ವಜನಿಕರಿಗೆ ವಿತರಣೆ ಮಾಡುವ ವೇಳೆಯಲ್ಲಿ ಯಾವುದೇ ಅನಾಹುತ ನಡೆಯದಂತೆ ರಾಜ್ಯ ಸರ್ಕಾರ ಎಚ್ಚರಿಕೆ ವಹಿಸಿದೆ. ಮುಂಜಾಗ್ರತಾ ಕ್ರಮವಾಗಿ ಗಣೇಶೋತ್ಸವದ ವೇಳೆ ಪ್ರಸಾದ ವಿನಿಯಮಕ್ಕೆ ಈ ನಿಮಯವನ್ನು ಪಾಲಿಸುವುದು ಕಡ್ಡಾಯಗೊಳಿಸಿ ಆದೇಶಿಸಿದೆ.
ಈ ಕುರಿತಂತೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯ ಆಯುಕ್ತರು ಆದೇಶ ಹೊರಡಿಸಿದ್ದು, ದಿನಾಂಕ:06.09.2024 ಮತ್ತು 07.09.2024ರಂದು ಗೌರಿ ಗಣೇಶ ಹಬ್ಬವಿರುವುದರಿಂದ ಗಣೇಶ ಮೂರ್ತಿಗಳ ಪ್ರತಿಷ್ಟಾಪನೆ ಮಾಡಿದ ಸ್ಥಳಗಳಲ್ಲಿ ಹೆಚ್ಚಿನ ಸಂಖ್ಯೆಯ ಭಕ್ತಾದಿಗಳು ಪಾಲ್ಗೊಂಡು ಪುಸಾದ ರೂಪದಲ್ಲಿ ವಿತರಿಸಲಾಗುವ ಆಹಾರ ಪದಾರ್ಥಗಳನ್ನು ಸೇವಿಸುವ ಹಿನ್ನೆಲೆಯಲ್ಲಿ ಪುಸಾದದ ನೈರ್ಮಲ್ಯತೆ, ಗುಣಮಟ್ಟ ಮತ್ತು ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಬೇಕು ಅಂತ ತಿಳಿಸಿದೆ.
ಈ ದೃಷ್ಟಿಯಿಂದ ಗಣೇಶ ಮೂರ್ತಿಗಳ ಪ್ರತಿಷ್ಠಾಪನೆಗಾಗಿ ಸ್ಥಳೀಯ ಸಂಸ್ಥೆಗಳಿಂದ ಅನುಮತಿ ನೀಡುವ ಸಂದರ್ಭದಲ್ಲಿ FSSAI ನೊಂದಣಿ/ಪರವಾನಗಿ ಪಡೆದಿರುವ ವ್ಯಕ್ತಿ/ಸಂಸ್ಥೆಗಳಿಂದ ಮಾತ್ರ ಅಲ್ಲಿ ವಿನಿಯೋಗವಾಗುವ ಪುಸಾದವನ್ನು ಸಿದ್ಧಪಡಿಸಲಾಗುತ್ತಿದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಅಗತ್ಯ ನಿರ್ದೇಶನಗಳನ್ನು ನೀಡುವಂತೆ ತಿಳಿಸಿದ್ದಾರೆ.
ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು
‘AI ಕೌಶಲ’ ಕುರಿತು ರಾಜ್ಯ ಸರ್ಕಾರದ ಜತೆ ಒಡಂಬಡಿಕೆಗೆ ‘ಮೈಕ್ರೋಸಾಫ್ಟ್’ ಒಲವು: ಸಚಿವ ಎಂ.ಬಿ ಪಾಟೀಲ
267 ಅರಣ್ಯ ವೀಕ್ಷಕರಿಗೆ ನೇಮಕಾತಿ ಪತ್ರ ಹಸ್ತಾಂತರ: 50 ಅರಣ್ಯ ಸಿಬ್ಬಂದಿಗೆ ಮುಖ್ಯಮಂತ್ರಿಗಳ ಪದಕ ಪ್ರದಾನ