ಬಾಗಲಕೋಟೆ : ರಾಜ್ಯದಲ್ಲಿ ಆರ್ ಎಸ್ ಎಸ್ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಸಚಿವ ಪ್ರಿಯಾಂಕ ಖರ್ಗೆ ಸಿಎಂ ಸಿದ್ದರಾಮಯ್ಯ ಗೆ ಪತ್ರ ಬರೆದಿರುವ ವಿಚಾರಕ್ಕೆ ಸಂಬಂಧಪಟ್ಟಂತೆ ಇದೀಗ ರಾಜ್ಯಸಭಾ ಸದಸ್ಯ ನಾರಾಯಣ ಭಾಂಡಗೆ ಪ್ರಿಯಾಂಕ ಖರ್ಗೆ ವಿರುದ್ಧ ವಾಗ್ದಾಳಿ ನಡೆಸಿದ್ದು, ಪ್ರಿಯಾಂಕ ಅನ್ನೋ ಹೆಸರು ಗಂಡು ಅಥವಾ ಹೆಣ್ಣು ಎನ್ನುವುದರ ಕುರಿತು ನನಗೆ ಗೊತ್ತಾಗ್ತಿಲ್ಲ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಬಾಗಲಕೋಟೆಯಲ್ಲಿ ಮಾತನಾಡಿದ ಅವರು, ಪ್ರಿಯಾಂಕ ಖರ್ಗೆ ಮಾತನಾಡುವ ಮಾತುಗಳು ಅವರಿಗೆ ಸಂಬಂಧ ಇಲ್ಲದೆ ಇರುವುದನ್ನು ಮಾತನಾಡುತ್ತಾರೆ. ಆರ್ ಎಸ್ ಎಸ್ ಬ್ಯಾನ್ ಮಾಡಲು ಕಾಂಗ್ರೆಸ್ ಪಕ್ಷದ ಅಜ್ಜ ಮುತ್ತಜ್ಜರಿಗೆ ಸಾಧ್ಯ ಆಗಿಲ್ಲ. 1962ರಲ್ಲಿ ದೆಹಲಿಯಲ್ಲಿ ಜನವರಿ 26ರಂದು ಆರ್ ಎಸ್ ಎಸ್ ಕಾರ್ಯಕ್ರಮಕ್ಕೆ ನೆಹರು ಅವಕಾಶ ಮಾಡಿಕೊಟ್ಟಿದ್ದರು. ನೀವು ಅದನ್ನು ಬ್ಯಾನ್ ಮಾಡಲು ಹೊರಟಿದ್ದೀರಾ ಎಂದು ಆಕ್ರೋಶ ಹೊರ ಹಾಕಿದ್ದಾರೆ.