ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಅವರು ಈಗಾಗಲೇ ಜೈಲುವಾಸ ಅನುಭವಿಸುತ್ತಿದ್ದಾರೆ. ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾಗ ಕನ್ನಡ ಚಿತ್ರರಂಗದ ಹಲವಾರು ಕಲಾವಿದರು ಅವರನ್ನು ಭೇಟಿ ಮಾಡಿದ್ದರು. ಇದೀಗ ಮೊದಲ ಬಾರಿಗೆ ನಟ ಪ್ರೇಮ್ ಅವರು ದರ್ಶನ್ ಅವರ ಪ್ರಕರಣದ ಕುರಿತು ಪ್ರತಿಕ್ರಿಯೆ ನೀಡಿದ್ದು, ದರ್ಶನ್ ಸಾಯಿಸಿದ್ದಾರೆ ಅನ್ನೋದು ಎಲ್ಲೂ ಪ್ರೂವ್ ಆಗಿಲ್ಲ ಅಲ್ವಾ? ಎಂದು ಅವರ ಪರವಾಗಿ ಬ್ಯಾಟ್ ಬೀಸಿದ್ದಾರೆ.
ರೇಣುಕಾಸ್ವಾಮಿ ಪ್ರಕರಣದ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿ, ರೇಣುಕಾಸ್ವಾಮಿ ಮಾಡಿದ್ದು ಒಳ್ಳೆಯ ಕೆಲಸ ಅಲ್ಲ.ಈ ಪ್ರಕರಣದಿಂದ ದರ್ಶನ್ ಬೇಗ ಆಚೆ ಬರಲಿ ಎಂದಿದ್ದಾರೆ. ಅವರು ಕಾಮನ್ ಮ್ಯಾನ್ ಅಲ್ಲ. ಇಂಡಸ್ಟ್ರಿಗೆ ದರ್ಶನ್ (Darshan) ಅವರ ಕಾಂಟ್ರಿಬ್ಯೂಷನ್ ತುಂಬಾ ಇದೆ. ಅವರ ಮೇಲೆ ನಿರ್ಮಾಪಕರು ಕೋಟಿಗಟ್ಟಲೇ ಬಂಡವಾಳ ಹೂಡಿದ್ದಾರೆ. ಕನ್ನಡ ಇಂಡಸ್ಟ್ರಿಯಲ್ಲಿ ಇರುವ ಕೆಲವೇ ಸೂಪರ್ ಸ್ಟಾರ್‌ಗಳಲ್ಲಿ ದರ್ಶನ್ ಕೂಡ ಒಬ್ಬರು ಸೂಪರ್ ಸ್ಟಾರ್. ಹಾಗಾಗಿ ಚಿತ್ರರಂಗಕ್ಕೆ ಕೊಡುಗೆ ಬೇಕಿದೆ ಎಂದರು.
ನಮಗೂ ಆ ಫೋಟೋಗಳ ಬಗ್ಗೆ ಗೊತ್ತಿಲ್ಲ. ಸದ್ಯ ಈ ಕೇಸ್ ಕಾನೂನಿನ ಚೌಕಟ್ಟಿನಲ್ಲಿದೆ. ಇದರ ಬಗ್ಗೆ ನಾವೇನು ಮಾತನಾಡೋಕೆ ಆಗಲ್ಲ. ರೇಣುಕಾಸ್ವಾಮಿ ಕುಟುಂಬದ ಬಗ್ಗೆ ನಮಗೂ ನೋವಿದೆ. ಆದರೆ ರೇಣುಕಾಸ್ವಾಮಿ ಮಾಡಿದ್ದು ಒಳ್ಳೆಯ ಕೆಲಸ ಅಲ್ಲ. ದರ್ಶನ್ ಸಾಯಿಸಿದ್ದಾರೆ ಅನ್ನೋದು ಎಲ್ಲೂ ಪ್ರೂವ್ ಆಗಿಲ್ಲ ಅಲ್ವಾ ಎಂದಿದ್ದಾರೆ. ರೇಣುಕಾಸ್ವಾಮಿ ಮಾಡಿರುವ ಅಶ್ಲೀಲ ಮೆಸೇಜ್‌ಗಳು ಸರಿ ಇದೆಯಾ ಎಂದು ಪ್ರೇಮ್ ಪ್ರಶ್ನೆ ಮಾಡಿದ್ದಾರೆ. ಈ ಮೂಲಕ ದರ್ಶನ್ ಪರ ಪ್ರೇಮ್ ಬ್ಯಾಟಿಂಗ್ ಮಾಡಿದ್ದಾರೆ.
ಚಿತ್ರಮಂದಿರದಲ್ಲಿ ಜನ ತುಂಬೋ ಅಂತದ್ದು ಆಗಿರಬಹುದು. ಯಾವುದೇ ವಿಚಾರ ಆಗಿದ್ರು ಯಾವಾಗಲೂ ಅವರು ಉನ್ನತ ಸ್ಥಾನದಲ್ಲಿ ಇರುತ್ತಿದ್ದರು. ಸಿನಿಮಾಗೆ ದರ್ಶನ್ ಬೇಕು. ಈ ಕೇಸ್ ಏನಾಗಿದೆ ಅಂತ ಗೊತ್ತಿಲ್ಲ. ಅದು ಏನೇ ಆಗಿರಲಿ ಅವರು ನಿರಪರಾಧಿಯಾಗಿ ಆಚೆ ಬರಲಿ. ಅವರಿಗೆ ಬೇಲ್ ಬೇಗ ಸಿಗಲಿ ಎಂದು ಆಶಿಸುತ್ತೇನೆ ಎಂದಿದ್ದಾರೆ.