ಮಂಡ್ಯ : ಕಳೆದ ವರ್ಷ ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಹುಲಿ ಉಗರು ಪ್ರಕರಣದಲ್ಲಿ ಕೆಲವು ದಿನಗಳ ಕಾಲ ಜೈಲುವಾಸ ಅನುಭವಿಸಿದ್ದರು. ಆದರೆ ಇದೀಗ ಸಂತೋಷ್ ಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಹಳ್ಳಿಕಾರ್ ಎಂಬ ಬಿರುದು ಸಂಬಂಧ ಮತ್ತೆ ವಿವಾದ ತಾರಕಕ್ಕೇರಿದೆ. ವರ್ತೂರು ಸಂತೋಷ್ ವಿರುದ್ದ ಹಳ್ಳಿಕಾರ್ ಸಂರಕ್ಷಕರು ಸಿಡಿದೆದ್ದಿದ್ದಾರೆ. ಸಂತೋಷ್ ವಿರುದ್ದ ಕಾನೂನು ಸಮರಕ್ಕೆ ಮುಂದಾಗಿದ್ದಾರೆ.
BREAKING: ಬಿಲ್ಕಿಸ್ ಬಾನೋ ಪ್ರಕರಣ:ಸೋದರಳಿಯನ ಮದುವೆಗೆ ಹಾಜರಾಗಲು ಆರೋಪಿಗೆ 10 ದಿನ ‘ಪೆರೋಲ್’
ಹಳ್ಳಿಕಾರ್ ಒಡೆಯ ಎಂದು ಕರೆಸಿಕೊಳ್ತಿರೋದು, ಬಿಂಬಿಸಿಕೊಳ್ತಿರುವುದು ಸರಿಯಲ್ಲ. ಇದು ಹಳ್ಳಿಕಾರ್ ಜನಾಂಗಕ್ಕೆ ಅಪಮಾನವಾಗಿದೆ. ತಲಾತಲಾಂತರದಿಂದ ಹಳ್ಳಿಕಾರ್ ಸಂರಕ್ಷಣೆ ಮಾಡ್ತಿರುವ ರೈತರ ಭಾವನೆಗೂ ಧಕ್ಕೆ, ಅವಮಾನ ಆಗಿದೆ. ಗೂಗಲ್ ನಲ್ಲಿಯೂ ಛೇರ್ ಮೇನ್ ಆಫ್ ಆಲ್ ಇಂಡಿಯಾ ಹಳ್ಳಿಕಾರ್ ಕನ್ಸರ್ವೇಶನ್ ಎಂದು ರಾಂಗ್ ಮೆಸೇಜ್ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ.
ಈ 4 ರಾಶಿಯವರಿಗೂ ಕೂಡ ಲಾಟರಿ ಹೊಡೆಯುತ್ತದೆ ಅಷ್ಟಲಕ್ಷ್ಮೀ ದೇವಿಯ ಪುತ್ರರಾಗುತ್ತಾರೆ..
ಇದರಿಂದ ಮುಂದಿನ ಪೀಳಿಗೆಗೆ ತಪ್ಪು ಸಂದೇಶ ಹೋಗುತ್ತೆ. ವರ್ತೂರ್ ಸಂತೋಷನಿಂದಲೇ ಹಳ್ಳಿಕಾರ್ ತಳಿ ಹುಟ್ಟಿತು ಎಂದು ಬಿಂಬಿತವಾಗಬಹುದು. ಆದ್ದರಿಂದ ಕಾನೂನಾತ್ಮಕವಾಗಿ ಹೋರಾಟ ಮಾಡ್ತೇನೆ. ಎಲ್ಲಾ ದಾಖಲಾತಿಗಳನ್ನ ಸಂಗ್ರಹಿಸುತ್ತಿದ್ದು ಶೀಘ್ರ ಕಾನೂನು ಸಮರ ಸಾರುತ್ತೇವೆ. ಗೂಗಲ್ ವಿರುದ್ದ ಕಾನೂನು ಹೋರಾಟ ಮಾಡ್ತೇವೆ ಎಂದು ಹಳ್ಳಿಕಾರ್ ಸಂರಕ್ಷಕ ರವಿ ಪಟೇಲ್ ಎಚ್ಚರಿಕೆ ನೀಡಿದ್ದಾರೆ.
BREAKING:ಮುಂಬೈ-ಮಾರಿಷಸ್ ವಿಮಾನದಲ್ಲಿ ಅಸಮರ್ಪಕ ಎಸಿ:ಉಸಿರಾಟದ ಸಮಸ್ಯೆಯಿಂದ ಬಳಲಿದ ಪ್ರಯಾಣಿಕರು