ಬೆಂಗಳೂರು: ಗ್ರೇಟರ್ ಬೆಂಗಳೂರು ರಚಿಸುವ ಮೂಲಕ ಬೆಂಗಳೂರನ್ನು ಒಡೆಯುವ ಕೆಲಸಕ್ಕೆ ಕೈ ಹಾಕಿರುವುದು ಖಂಡಿತ ಸರಿಯಲ್ಲ ಎಂಬುದು ಎಲ್ಲರ ಒಮ್ಮತದ ಅಭಿಪ್ರಾಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ.
ಮಾಧ್ಯಮ ಪ್ರತಿನಿಧಿಗಳ ಜೊತೆ ಇಂದು ಮಾತನಾಡಿದ ಅವರು, ರಾಜ್ಯ ಸರಕಾರ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬೃಹತ್ ಬೆಂಗಳೂರು ಮಹಾನಗರಪಾಲಿಕೆಯನ್ನು ಗ್ರೇಟರ್ ಬೆಂಗಳೂರು ಮಾಡಲು ಹೊರಟಿದ್ದಾರೆ. ಈ ತೀರ್ಮಾನದ ಕುರಿತ ಸಾಧಕ- ಬಾಧಕಗಳ ವಿಷಯದಲ್ಲಿ ನಗರದ ಪ್ರಮುಖರ ಜೊತೆ ಚರ್ಚೆ ಮಾಡಿದ್ದೇವೆ ಎಂದರು.
ಬೆಂಗಳೂರನ್ನು ಒಡೆಯುವುದು ನಗರದ ಅಭಿವೃದ್ಧಿಯ ದೃಷ್ಟಿಯಿಂದಲೂ ಒಳ್ಳೆಯದಲ್ಲ ಎಂದ ಅವರು, ಯಾವುದೇ ಕಾರಣಕ್ಕೆ ಇದಕ್ಕೆ ಅವಕಾಶ ಕೊಡಬಾರದು ಎಂದು ಸಭೆಯಲ್ಲಿ ಚರ್ಚೆ ಆಗಿದೆ ಎಂದು ವಿವರಿಸಿದರು.
ಮಾರ್ಚ್ 3ರಿಂದ ಅಧಿವೇಶನ ಆರಂಭ ಆಗಲಿದೆ. ಬಜೆಟ್ ಮಂಡನೆ ಆಗಲಿದೆ. ಸದನದಲ್ಲಿ ಯಾವ ವಿಚಾರ ಕೈಗೆತ್ತಿಕೊಳ್ಳಬೇಕು, ಯಾವ ವಿಷಯಗಳನ್ನು ಚರ್ಚಿಸಬೇಕೆಂಬ ನಿಟ್ಟಿನಲ್ಲಿ ಕೂಡ ನಮ್ಮೆಲ್ಲ ಶಾಸಕರು, ವಿಪಕ್ಷ ನಾಯಕರು ಚರ್ಚೆ ಮಾಡಿದ್ದೇವೆ ಎಂದು ತಿಳಿಸಿದರು.
BREAKING: ಬೆಂಗಳೂರಲ್ಲಿ ಮಹಿಳೆ ಮೇಲೆ ‘ಗ್ಯಾಂಗ್ ರೇಪ್’ ನಡೆಸಿದ ಆರೋಪಿಗಳು ಅರೆಸ್ಟ್
ಸಾಗರ ವಕೀಲರ ಸಂಘದ ಚುನಾವಣೆಯಲ್ಲಿ ಗಿರೀಶ್ ಗೌಡ ಭರ್ಜರಿ ಗೆಲುವು, ಅಧ್ಯಕ್ಷರಾಗಿ ಆಯ್ಕೆ