Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ನಾಳೆ ಭಾರತ್ ಬಂದ್ : ದೇಶಾದ್ಯಂತ 30 ಕೋಟಿ ಕಾರ್ಮಿಕರಿಂದ ಪ್ರತಿಭಟನೆ |Bharath Bandh

11/02/2026 6:04 AM

ಬೆಂಗಳೂರು ನಗರದಾದ್ಯಂತ 25 ಲಕ್ಷ ಆಸ್ತಿಗಳ ಡಿಜಿಲೀಕರಣ : ಉಚಿತ `ಇ-ಖಾತಾ’ ಅಭಿಯಾನ ಪ್ರಾರಂಭ.!

11/02/2026 5:58 AM

BIG NEWS : ಆಸ್ತಿ, ವಾಹನ ಖರೀದಿ ಸೇರಿ ಈ ಎಲ್ಲಾ ಬಿಲ್ ಪಾವತಿಗೆ `ಪ್ಯಾನ್ ಕಾರ್ಡ್’ ಕಡ್ಡಾಯ : ಏ.1 ರಿಂದ ಹೊಸ ರೂಲ್ಸ್ ಜಾರಿ.!

11/02/2026 5:56 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನನ್ನ ರಾಜಕೀಯ ಅಂತ್ಯ ತೀರ್ಮಾನ ಮಾಡೋರು ಜನರು. ಬೇರೆ ಯಾರೂ ಅಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್
KARNATAKA

ನನ್ನ ರಾಜಕೀಯ ಅಂತ್ಯ ತೀರ್ಮಾನ ಮಾಡೋರು ಜನರು. ಬೇರೆ ಯಾರೂ ಅಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್

By kannadanewsnow0721/06/2024 12:24 PM

ಬೆಂಗಳೂರು,: “ನನ್ನ ರಾಜಕೀಯ ಅಂತ್ಯ ತೀರ್ಮಾನ ಮಾಡೋರು ಜನರು. ಬೇರೆ ಯಾರೂ ಅಲ್ಲ. ಜನರೇ ನನ್ನ ಹಿಂದಿರುವ ಶಕ್ತಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು.

ವಿಧಾನಸೌಧದ ಆವರಣದಲ್ಲಿ ಶುಕ್ರವಾರ ನಡೆದ ಅಂತರಾಷ್ಟ್ರೀಯ ಯೋಗದಿನ ಕಾರ್ಯಕ್ರಮದ ಬಳಿಕ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದರು.

ಚನ್ನಪಟ್ಟಣದಿಂದ ಸ್ಪರ್ಧೆ ಮಾಡಿದರೆ ಡಿ.ಕೆ. ಶಿವಕುಮಾರ್ ಅವರ ರಾಜಕೀಯ ಭವಿಷ್ಯ ಅಂತ್ಯವಾಗಲಿದೆ ಎಂಬ ಸಿ.ಪಿ.ಯೋಗೇಶ್ವರ್ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ನಮ್ಮ ರಾಜಕೀಯ ಅಂತ್ಯ ತೀರ್ಮಾನ ಮಾಡುವವರು ಜನರು. ಯೋಗೇಶ್ವರ್ ಮಾತಿಗೆ ಪ್ರತಿಕ್ರಿಯೆ ನೀಡಲು ನನ್ನ ಬಳಿ ಸಮಯವಿಲ್ಲ. ನಾನೂ ರಾಮನಗರ ಜಿಲ್ಲೆಯವನು. “ನಿಮ್ಮ ಋಣ ತೀರಿಸಲು ಬದ್ಧನಿದ್ದೇನೆ, ಶಕ್ತಿ ಕೊಡಿ ಎಂದು ಆ ಕ್ಷೇತ್ರದ ಜನರ ಬಳಿ ಕೇಳಿಕೊಂಡಿದ್ದೇನೆ. ನನ್ನ ಮೇಲೆ ವಿಶ್ವಾಸವಿದ್ದರೆ ಬೆಂಬಲ ನೀಡುತ್ತಾರೆ” ಎಂದು ತಿಳಿಸಿದರು.

ಸ್ವಪ್ರತಿಷ್ಠೆಗಾಗಿ ದೇಶದ ಸಂಪತ್ತು ಹಾಳು ಮಾಡುತ್ತಿದ್ದಾರೆ ಎಂಬ ಸುರೇಶ್ ಕುಮಾರ್ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಚನ್ನಪಟ್ಟಣದಲ್ಲಿ ಉಪಚುನಾವಣೆ ನಡೆದರೆ ಕನಕಪುರದಲ್ಲಿ ಯಾಕೆ ಉಪಚುನಾವಣೆ ನಡೆಯುತ್ತದೆ. ನಾನು ಕನಕಪುರದ ಶಾಸಕ. ಪಕ್ಷದ ಅಧ್ಯಕ್ಷನಾಗಿ ನನ್ನ ಮೇಲೆ ಜವಾಬ್ದಾರಿ ಇದೆ. ಇದೂ ನನ್ನದೇ ಕ್ಷೇತ್ರ, ನನ್ನದೇ ನಾಯಕತ್ವ. ಸಿದ್ದರಾಮಯ್ಯ ಹಾಗೂ ನಾನು ಸೇರಿ ಚುನಾವಣೆ ನಡೆಸುತ್ತೇವೆ” ಎಂದರು.

ಯೋಗ ನಮ್ಮ ದೇಶದ ಆಸ್ತಿ:

ಯೋಗಕ್ಕೆ ಐದು ಸಾವಿರ ವರ್ಷಗಳ ಇತಿಹಾಸವಿದ್ದು, ದೇಶ ಮಾತ್ರವಲ್ಲದೇ ಇಡೀ ವಿಶ್ವ ನಮ್ಮ ಧರ್ಮ, ಸಂಸ್ಕೃತಿ, ಪದ್ಧತಿಯಾಗಿರುವ ಯೋಗವನ್ನು ಒಪ್ಪಿದೆ. ಅನೇಕ ಹಿರಿಯರು, ಋಷಿಗಳು ಇದಕ್ಕೆ ಕೊಡುಗೆ ನೀಡಿದ್ದು, ಯೋಗಕ್ಕೆ ಯಾವುದೇ ಜಾತಿ, ಕುಲ, ಧರ್ಮದ ಎಲ್ಲೆ ಇಲ್ಲ. ನನಗೆ ಯೋಗಾಭ್ಯಾಸವಿಲ್ಲ. ಶಾಲಾ ದಿನಗಳಲ್ಲಿ ಅಥ್ಲೆಟಿಕ್ಸ್ ನಲ್ಲಿ ಭಾಗವಹಿಸುತ್ತಿದ್ದೆ. ನನ್ನ ಮನೆಯಲ್ಲಿ ಯೋಗಭ್ಯಾಸ ಮಾಡುತ್ತಾರೆ. ಯೋಗ ಈ ದೇಶದ ಆಸ್ತಿ. ಯೋಗಕ್ಕೆ ಪ್ರೋತ್ಸಾಹ ಹಾಗೂ ಪ್ರಚಾರ ನೀಡಬೇಕಾಗಿರುವುದು ನಮ್ಮ ಕರ್ತವ್ಯ. ಸಚಿವ ದಿನೇಶ್ ಗುಂಡೂರಾವ್ ಅವರ ನೇತೃತ್ವದಲ್ಲಿ ಹತ್ತು ದಿನಗಳ ಕಾಲ ಈ ಕಾರ್ಯಕ್ರಮ ಆಯೋಜಿಸಲಾಗಿದೆ. ನೀವು ಆರೋಗ್ಯವಂತರಾಗಿರಬೇಕು, ಮಾನಸಿಕವಾಗಿ ಶಕ್ತಿಶಾಲಿಯಾಗಬೇಕು ಎಂಬ ಉದ್ದೇಶದಿಂದ ಸರ್ಕಾರ ಈ ಕಾರ್ಯಕ್ರಮ ಆಯೋಜಿಸಿದೆ. ಹಿರಿಯರು, ಕಿರಿಯರು ಸೇರಿದಂತೆ ಎಲ್ಲಾ ವರ್ಗದ ಜನರು ಯೋಗಾಭ್ಯಾಸ ಮಾಡಿ ಆರೋಗ್ಯವಂತರಾಗಿರಲಿ ಎಂದು ಮನವಿ ಮಾಡುತ್ತೇನೆ.

It is the people who will decide my political end. None other than Deputy CM DK Shivakumar ನನ್ನ ರಾಜಕೀಯ ಅಂತ್ಯ ತೀರ್ಮಾನ ಮಾಡೋರು ಜನರು
Share. Facebook Twitter LinkedIn WhatsApp Email

Related Posts

ಬೆಂಗಳೂರು ನಗರದಾದ್ಯಂತ 25 ಲಕ್ಷ ಆಸ್ತಿಗಳ ಡಿಜಿಲೀಕರಣ : ಉಚಿತ `ಇ-ಖಾತಾ’ ಅಭಿಯಾನ ಪ್ರಾರಂಭ.!

11/02/2026 5:58 AM4 Mins Read

ರಾಜ್ಯದಲ್ಲಿ ಈ ಶೈಕ್ಷಣಿಕ ವರ್ಷ ಪ್ರಾರಂಭಕ್ಕೂ ಮುನ್ನ 8 ಸಾವಿರ ಶಿಕ್ಷಕರ ನೇಮಕಾತಿ : ಸಚಿವ ಮಧುಬಂಗಾರಪ್ಪ

11/02/2026 5:54 AM1 Min Read

BIG NEWS : ರಾಜ್ಯಾದ್ಯಂತ ನಾಳೆ ‘ಬಿಸಿಯೂಟ’ ನೌಕರರ ಮುಷ್ಕರ : ಪರ್ಯಾಯ ವ್ಯವಸ್ಥೆಗೆ ಸರ್ಕಾರ ಆದೇಶ.!

11/02/2026 5:15 AM1 Min Read
Recent News

BREAKING : ನಾಳೆ ಭಾರತ್ ಬಂದ್ : ದೇಶಾದ್ಯಂತ 30 ಕೋಟಿ ಕಾರ್ಮಿಕರಿಂದ ಪ್ರತಿಭಟನೆ |Bharath Bandh

11/02/2026 6:04 AM

ಬೆಂಗಳೂರು ನಗರದಾದ್ಯಂತ 25 ಲಕ್ಷ ಆಸ್ತಿಗಳ ಡಿಜಿಲೀಕರಣ : ಉಚಿತ `ಇ-ಖಾತಾ’ ಅಭಿಯಾನ ಪ್ರಾರಂಭ.!

11/02/2026 5:58 AM

BIG NEWS : ಆಸ್ತಿ, ವಾಹನ ಖರೀದಿ ಸೇರಿ ಈ ಎಲ್ಲಾ ಬಿಲ್ ಪಾವತಿಗೆ `ಪ್ಯಾನ್ ಕಾರ್ಡ್’ ಕಡ್ಡಾಯ : ಏ.1 ರಿಂದ ಹೊಸ ರೂಲ್ಸ್ ಜಾರಿ.!

11/02/2026 5:56 AM

ರಾಜ್ಯದಲ್ಲಿ ಈ ಶೈಕ್ಷಣಿಕ ವರ್ಷ ಪ್ರಾರಂಭಕ್ಕೂ ಮುನ್ನ 8 ಸಾವಿರ ಶಿಕ್ಷಕರ ನೇಮಕಾತಿ : ಸಚಿವ ಮಧುಬಂಗಾರಪ್ಪ

11/02/2026 5:54 AM
State News
KARNATAKA

ಬೆಂಗಳೂರು ನಗರದಾದ್ಯಂತ 25 ಲಕ್ಷ ಆಸ್ತಿಗಳ ಡಿಜಿಲೀಕರಣ : ಉಚಿತ `ಇ-ಖಾತಾ’ ಅಭಿಯಾನ ಪ್ರಾರಂಭ.!

By kannadanewsnow5711/02/2026 5:58 AM KARNATAKA 4 Mins Read

ಬೆಂಗಳೂರು : ಬೆಂಗಳೂರು ನಗರದಾದ್ಯಂತ ಇದುವರೆಗೂ 25 ಲಕ್ಷ ಆಸ್ತಿಗಳನ್ನು ಡಿಜಿಟಲೀಕರಣ ಮಾಡಲಾಗಿದೆ. 9 ಲಕ್ಷ ಇ – ಖಾತಾಗಳನ್ನು…

ರಾಜ್ಯದಲ್ಲಿ ಈ ಶೈಕ್ಷಣಿಕ ವರ್ಷ ಪ್ರಾರಂಭಕ್ಕೂ ಮುನ್ನ 8 ಸಾವಿರ ಶಿಕ್ಷಕರ ನೇಮಕಾತಿ : ಸಚಿವ ಮಧುಬಂಗಾರಪ್ಪ

11/02/2026 5:54 AM

BIG NEWS : ರಾಜ್ಯಾದ್ಯಂತ ನಾಳೆ ‘ಬಿಸಿಯೂಟ’ ನೌಕರರ ಮುಷ್ಕರ : ಪರ್ಯಾಯ ವ್ಯವಸ್ಥೆಗೆ ಸರ್ಕಾರ ಆದೇಶ.!

11/02/2026 5:15 AM

BREAKING: ಬೆಂಗಳೂರಲ್ಲಿ ಅಕ್ರಮವಾಗಿ ನೆಲೆಸಿದ್ದ ಓರ್ವ ಮಹಿಳೆ ಸೇರಿ 8 ವಿದೇಶಿ ಪ್ರಜೆಗಳು ವಶಕ್ಕೆ

10/02/2026 9:33 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.