ಬೆಂಗಳೂರು: ನನ್ನ ಹನಿಟ್ರ್ಯಾಪ್ ಗೆ ಪ್ರಯತ್ನಿಸಲಾಗಿತ್ತು. ಹನಿಟ್ರ್ಯಾಪ್ ಆಗಿರೋದು ನಿಜ. ಆದರೇ ನಾನು ಒಳಗಾಗಿಲ್ಲ ಎಂಬುದಾಗಿ ಸಹಕಾರ ಸಚಿವ ಕೆ.ಎನ್ ರಾಜಣ್ಣ ಸ್ಪಷ್ಟ ಪಡಿಸಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ನನ್ನ ಹನಿಟ್ರ್ಯಾಪ್ ಗೆ ಪ್ರಯತ್ನ ನಡೆದಿದೆ. ಆದರೇ ನಾನು ಒಳಗಾಗಿಲ್ಲ. ಹನಿಟ್ರ್ಯಾಪ್ ಬಗ್ಗೆ ಸದನದಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ವಿಷಯ ಪ್ರಸ್ತಾಪಿಸಿದರು ಎಂದರು.
ಈ ರೀತಿಯ ತೇಜೋವಧೆ ಮಾಡುವುದು ಯಾರಿಗೂ ಶೋಭೆ ತರಲ್ಲ. ಇದು ಅಂತ್ಯವಾಗಲು ಉನ್ನತ ಮಟ್ಟದ ತನಿಖೆ ಆಗಬೇಕು. ಹನಿಟ್ರ್ಯಾಪ್ ನಲ್ಲಿ ಎಲ್ಲಾ ಪಕ್ಷದವರೂ ಸಿಲುಕಿದ್ದಾರೆ ಎಂಬುದಾಗಿ ತಿಳಿಸಿದರು.
ನಾನೇನೂ ಶ್ರೀರಾಮ ಚಂದ್ರನೂ ಅಲ್ಲ. ಸತ್ಯ ಹರಿಶ್ಚಂದ್ರನೂ ಅಲ್ಲ. ಹನಿಟ್ರ್ಯಾಪ್ ಬಗ್ಗೆ ಉನ್ನತ ಮಟ್ಟದ ತನಿಖೆಯಾಗಬೇಕು. ಆಗಲೇ ಸತ್ಯಾಸತ್ಯತೆ ಹೊರಬರಲಿದೆ ಎಂದರು.
BREAKING ಛತ್ತೀಸ್ ಗಢದ ಬಿಜಾಪುರದಲ್ಲಿ ಭದ್ರತಾ ಪಡೆಗಳ ಎನ್ಕೌಂಟರ್ : 22 ಮಂದಿ ನಕ್ಸಲರ ಹತ್ಯೆ | Naxal Encounter