ಬೆಂಗಳೂರು : ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ನಟಿ ರಾಧಿಕಾ ಕುಮಾರಸ್ವಾಮಿ ಅವರನ್ನು ಲೋಕಾಯುಕ್ತ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ. ವಿಚಾರಣೆಯ ವೇಳೆ ನಾನು ಸಚಿವ ಜಮೀರ್ ಅಹ್ಮದ್ ಖಾನ್ ಅವರಿಗೆ ಎರಡು ಕೋಟಿ ರೂಪಾಯಿ ಸಾಲ ನೀಡಿದ್ದು ನಿಜ ಎಂದು ಹೇಳಿಕೆ ದಾಖಲಿಸಿದ್ದಾರೆ.
ಎರಡು ಕೋಟಿ ಹಣಕಾಸು ವ್ಯವಹಾರಕ್ಕೆ ಸಂಬಂಧಿಸಿದಂತೆ ರಾಧಿಕಾ ಕುಮಾರಸ್ವಾಮಿ ವಿಚಾರಣೆಗೆ ಒಳಪಟ್ಟಿದ್ದು ಚಿತ್ರ ನಿರ್ಮಾಣದಿಂದ ಬಂದ ಹಣದಿಂದ ಜಮೀರ್ ಅಹ್ಮದ್ಗೆ ನೆರವು ನೀಡಲಾಗಿತ್ತು. ಲೋಕಾಯುಕ್ತ ಅಧಿಕಾರಿಗಳ ತನಿಖೆಯ ವೇಳೆ ಹಣಕಾಸು ವ್ಯವಹಾರ ಬೆಳಕಿಗೆ ಬಂದಿದೆ ಈ ಬಗ್ಗೆ ವಿವರಣೆ ನೀಡುವಂತೆ ಲೋಕಾಯುಕ್ತ ನೋಟಿಸ್ ನೀಡಿದೆ ನೋಟಿಸ್ ಹಿನ್ನೆಲೆ ಕಳೆದ ವಾರ ರಾಧಿಕಾ ಕುಮಾರಸ್ವಾಮಿ ವಿಚಾರಣೆಗೆ ಹಾಜರಾಗಿದ್ದರು.ಹಣಕಾಸು ವ್ಯವಹಾರದ ಬಗ್ಗೆ ರಾಧಿಕಾ ಕುಮಾರಸ್ವಾಮಿ ಹೇಳಿಕೆ ದಾಖಲಿಸಿದ್ದಾರೆ.