ಬೆಂಗಳೂರು : ಪ್ರತಿವರ್ಷ ಮ್ಯಾರಥಾನ್ ಮೂಲಕ ಡ್ರಗ್ಸ್ ಕುರಿತಂತೆ ಜಾಗೃತಿ ಮೂಡಿಸಲಾಗುತ್ತಿದೆ. ಯುವ ಸಮೂಹ ಡ್ರಗ್ಸ್ ವ್ಯಸನಿಗಳಾಗುತ್ತಿರುವುದು ದುರಾದೃಷ್ಟಕರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಕಳವಳ ವ್ಯಕ್ತಪಡಿಸಿದರು.
‘ಅನ್ನದಾತರಿಗೆ’ ಗುಡ್ ನ್ಯೂಸ್ : ಮಾರ್ಚ್ ಅಂತ್ಯದಲ್ಲಿ 5 ಲಕ್ಷ ರೈತರ ಬ್ಯಾಂಕ್ ಖಾತೆಗಳಿಗೆ ‘ಬೆಳೆ ವಿಮೆ’ ವಿತರಣೆ
ಬೆಂಗಳೂರಿನ ವಿಧಾನಸೌಧದ ಮುಂಭಾಗದಲ್ಲಿ ಡ್ರಗ್ಸ್ ಜನಜಾಗೃತಿ ಕುರಿತಂತೆ ಹಮ್ಮಿಕೊಂಡಿದ್ದ ಮ್ಯಾರಥಾನ್ ಓಟಕ್ಕೆ ಸಿಎಂ ಸಿದ್ದರಾಮಯ ಚಾಲನೆ ನೀಡಿ ಮಾತನಾಡಿದ ಅವರು, ಬೆಂಗಳೂರು ನಗರವನ್ನು ಹೆಚ್ಚು ಹಸಿರು ಕಾರಣ ಮಾಡಬೇಕು. ಪ್ರತಿವರ್ಷ ಮ್ಯಾರಥಾನ್ ಮೂಲಕ ಜಾಗೃತಿ ಮೂಡಿಸಲಾಗುತ್ತಿದೆ ಯುವ ಸಮೂಹ ಡ್ರಗ್ಸ್ ವ್ಯಸನಿಗಳಾಗುತ್ತಿರುವುದು ದುರಾದೃಷ್ಟಕರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಇಟಲಿಯಲ್ಲಿ ಪ್ರದರ್ಶನಾಲಯದಿಂದ 1.3 ಮಿಲಿಯನ್ ಡಾಲರ್ ಮೌಲ್ಯದ 49 ‘ಚಿನ್ನದ ಶಿಲ್ಪಗಳು’ ಕಳವು
ಇಂದು ಮಂಡ್ಯದಲ್ಲಿ ‘ಗ್ಯಾರಂಟಿ ಸಮಾವೇಶ
ಇಂದು ಮಂಡ್ಯಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಲಿದ್ದು, ಮಂಡ್ಯದಲ್ಲಿ ಹಮ್ಮಿಕೊಂಡ ಗ್ಯಾರಂಟಿ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗಿಯಾಗಲಿದ್ದಾರೆ ಎಂದು ತಿಳಿದುಬಂದಿದೆ.ಮಂಡ್ಯದ ವಿಶ್ವವಿದ್ಯಾಲಯ ಆವರಣದಲ್ಲಿ ಈ ಒಂದು ಗ್ಯಾರಂಟಿ ಸಮಾವೇಶ ಕಾರ್ಯಕ್ರಮ ನಡೆಯಲಿದೆ. ಇಂದು ಬೆಳಿಗ್ಗೆ 11:30ಕ್ಕೆ ಹೆಲಿಕ್ಯಾಪ್ಟರ್ ಮೂಲಕ ತೆರಲಳಿದ್ದು ಗ್ಯಾರಂಟಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈ ಒಂದು ಕಾರ್ಯಕ್ರಮಕ್ಕೆ ಅಪಾರ ಸಂಖ್ಯೆಯಲ್ಲಿ ಜನ ಸೇರುವ ನಿರೀಕ್ಷೆ ಇದೆ. ಹೀಗಾಗಿ ಸೂಕ್ತ ಪೊಲೀಸ್ ಭದ್ರತೆಯ ವ್ಯವಸ್ಥೆ ಮಾಡಲಾಗಿದೆ.
BREAKING : ಬೆಂಗಳೂರಿನ ಯೋಗೇಶ್ ಸಾವು ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : ಕೊಲೆಮಾಡಿ ಆತ್ಮಹತ್ಯೆ ಎಂದು ಬಿಂಬಿಸಿದ ತಂದೆ
ನಂತರ ಮಧ್ಯಾಹ್ನ 3.15ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹೊಸಕೋಟೆಗೆ ಭೇಟಿ ನೀಡಲಿದ್ದು, 600 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ. ಹೊಸಕೋಟೆಯ ಚೆನ್ನಬೈರೇಗೌಡ ಕ್ರೀಡಾಂಗಣದಲ್ಲಿ ಕಾಂಗ್ರೆಸ್ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ತಿಳಿದುಬಂದಿದೆ.ಕಾಮಗಾರಿ ಉದ್ಘಾಟನೆ ಜೊತೆಗೆ ಲೋಕಸಭಾ ಚುನಾವಣೆ ಗಾಗಿ ಸಿದ್ದರಾಮಯ್ಯ ಮತ ಬೇಟೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ ಇಂದು ಸಂಜೆ 4:00ಗೆ ಕಾಂಗ್ರೆಸ್ ಸಮಾವೇಶ ಆರಂಭವಾಗಲಿದೆ ಈ ನೆಲೆಯಲ್ಲಿ ಎಲ್ಲೆಡೆ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.