ಬೆಂಗಳೂರು : ಲೋಕಸಭೆ ಚುನಾವಣೆಯಲ್ಲಿ ಕೇವಲ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತ್ರವಲ್ಲ, ಕೆಪಿಸಿಸಿ ಅಧ್ಯಕ್ಷರು ಸೇರಿದಂತೆ ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡುತ್ತೇವೆ. ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರೆಸುವುದು ಅಥವಾ ಬಿಡುವುದು ಹೈಕಮಾಂಡ್ ನಿರ್ಧಾರ ಮಾಡುತ್ತದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.
ಲೋಕಸಭೆ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆದ್ದರೆ ಐದು ವರ್ಷ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಎಂಬ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ‘ಮುಖ್ಯಮಂತ್ರಿಗಳ ಕುರಿತು ನಾವು ನಿರ್ಧಾರ ಕೈಗೊಳ್ಳಲು ಆಗುವುದಿಲ್ಲ. ಲೋಕಸಭೆ ಚುನಾವಣೆಯಲ್ಲಿ ಕೇವಲ ಸಿದ್ದರಾಮಯ್ಯ ಮಾತ್ರವಲ್ಲ. ಕೆಪಿಸಿಸಿ ಅಧ್ಯಕ್ಷರೂ ಸೇರಿದಂತೆ ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡುತ್ತೇವೆ. ಲೋಕಸಭೆ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆಲ್ಲಲು ಸಂಕಲ್ಪ ಮಾಡಿದ್ದೇವೆ ಎಂದು ಹೇಳಿದರು.
ಕಾಂಗ್ರೆಸ್‌ನಲ್ಲಿ ಆಗಾಗ್ಗೆ ಮುನ್ನೆಲೆಗೆ ಚರ್ಚೆಗೆ ಬರುವ ‘ಪೂರ್ಣಾವಧಿ ಸಿಎಂ’ ವಿವಾದ ಮತ್ತೆ ಭುಗಿಲೆದ್ದಿದೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಹೆಚ್ಚು ಸ್ಥಾನ ಗಳಿಸಿದರೆ ಮುಂದಿನ ಐದು ವರ್ಷ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ ಆಗಿರುತ್ತಾರೆ ಎಂದು ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದು, ರಾಜ್ಯದ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ.
ಈ ಹೇಳಿಕೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಈ ಬಗ್ಗೆ ಪಕ್ಷದ ಹೈಕಮಾಂಡ್ ಅಂತಿಮ ನಿರ್ಧಾರ ಕೈಗೊಳ್ಳಲಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರೆಸುವುದು ಅಥವಾ ಬಿಡುವುದು ಹೈಕಮಾಂಡ್ ನಿರ್ಧಾರ ಮಾಡುತ್ತದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ. ಇದೇ ವೇಳೆ, ಯತೀಂದ್ರ ಹೇಳಿಕೆಗೆ ಹೈಕಮಾಂಡ್ ಉತ್ತರ ಕೊಡುತ್ತದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ಯತೀಂದ್ರ ಹೇಳಿಕೆ ವೈಯಕ್ತಿಕ. ಆ ಬಗ್ಗೆ ಹೈಕಮಾಂಡ್ ನಿರ್ಧರಿಸುತ್ತದೆ ಎಂದು ಲಕ್ಷ್ಮಣ ಸವದಿ ಕಲಬುರಗಿಯಲ್ಲಿ ಹೇಳಿದ್ದಾರೆ.