ಚಿತ್ರದುರ್ಗ : ಮಾಜಿ ಸಚಿವ ಹೆಚ್. ಆಂಜನೇಯ ಆಪ್ತನ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಪಾಡಿಗಟ್ಟೆ ಗ್ರಾಮದ ಮಾಜಿ ಸಚಿವ ಹೆಚ್. ಆಂಜನೇಯ ಆಪ್ತ ಹಾಗೂ ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಸುರೇಶ್ ಹಾಗೂ ಸಹೋದರ ತಿಪ್ಪೇಸ್ವಾಮಿ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಆದಾಯ ಮಿರಿ ಆಸ್ತಿ ಗಳಿಕೆ ಹಿನ್ನೆಲೆ ಹುಬ್ಬಳ್ಳಿಯಿಂದ ಐಟಿ ಅಧಿಕಾರಿಗಳು ಆಗಮಿಸಿದ್ದು, ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ ಎಂದು ತಿಳಿದು ಬಂದಿದೆ. ತಿಪ್ಪೇಸ್ವಾಮಿ ಗುತ್ತಿಗೆದಾರನಾಗಿ ಕೆಲಸ ಮಾಡುತ್ತಿದ್ದರೆ, ಸುರೇಶ್ ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿಯಾಗಿದ್ದಾರೆ. ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದ್ದು, ಈ ಬಗ್ಗೆ ಇನ್ನಷ್ಟು ಮಾಹಿತಿ ಶೀಘ್ರದಲ್ಲೇ ಅಪ್ ಡೇಟ್ ಆಗಲಿದೆ.
Skin care tips : ಚಳಿಗಾಲದಲ್ಲಿ ಮುಖದ ಕಾಂತಿ ಹೆಚ್ಚಿಸಲು ಇಲ್ಲಿವೆ ಸಿಂಪಲ್ ಮನೆಮದ್ದುಗಳು