ಚಿಕ್ಕಮಗಳೂರು: ಜಿಲ್ಲೆಯ ಕಾಂಗ್ರೆಸ್ ನಾಯಕಿ ಗಾಯತ್ರಿ ಶಾಂತೇಗೌಡ ಅವರ ಮನೆ ಮೇಲೆ ಐಟಿ ದಾಳಿ ( IT Raid ) ನಡೆಸಿದೆ.
ನಗರದ ಹೂವಿನ ಮಾರ್ಕೆಟ್ ರಸ್ತೆಯಲ್ಲಿರುವ ಗಾಯತ್ರಿ ಶಾಂತೇಗೌಡ ಅವರ ಮನೆಗೆ 10ಕ್ಕೂ ಹೆಚ್ಚು ವಾಹನಗಳಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಈ ಹಿನ್ನೆಲೆ ಶಾಂತೇಗೌಡ ಮನೆ ಮುಂದೆ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದೆ. ಬಿಜೆಪಿ ಸರ್ಕಾರವು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳನ್ನ ದುರುಪಯೋಗ ಪಡಿಸಿಕೊಳ್ಳುತ್ತಿದೆ. ಮೊದಲು ಸಿಟಿ ರವಿ ಮನೆ ಮೇಲೆ ಐಟಿ ದಾಳಿ ನಡೆಸಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅಧಿಕಾರಿಗಳು ಬಂದಿರುವ ಕಾರಿನ ಮುಂಭಾಗದ ಗ್ಲಾಸ್ ಮೇಲೆ ಮದುವೆ ಬೋರ್ಡ್ ಹಾಕಿಕೊಂಡು ಬಂದಿದ್ದು, ಯಾರಿಗೂ ಅನುಮಾನ ಬಾರದಿರಲೆಂದು ಅಭಿನವ್ ವೆಡ್ಸ್ ದೀಪಿಕಾ ಎಂಬ ಪೋಸ್ಟರ್ ಅಂಟಿಸಿಕೊಂಡಿರುವ ವಾಹನಗಳಲ್ಲಿ ಐಟಿ ಅಧಿಕಾರಿಗಳು ಬಂದಿದ್ದಾರೆ. ಗಾಯತ್ರಿ ಅವರ ಪತಿ ಶಾಂತೇಗೌಡರು ಗುತ್ತಿಗೆದಾರರು. ಕಳಸಾಪುರ ರಸ್ತೆಯಲ್ಲಿರುವ ಅವರ ಮಾಲೀಕತ್ವದ ಕ್ರಷರ್ ಮೇಲೆಯೂ ಐಟಿ ಅಧಿಕಾರಿಗಳ ದಾಳಿ ನಡೆದಿದೆ.
ಅಸ್ತಿತ್ವದ ಗುರಿ ಜಾಗೃತವಾಗಿದ್ದವರು ಕ್ರಿಯಾಶೀಲರಾಗಿರುತ್ತಾರೆ -ಸಿಎಂ ಬಸವರಾಜ ಬೊಮ್ಮಾಯಿ
BIGG NEWS: ಮುಂಬರುವ ಚುನಾವಣೆಯಲ್ಲಿ ಮತ್ತೆ ಜೆಡಿಎಸ್ ಅಧಿಕಾರಕ್ಕೆ ಬರುತ್ತದೆ : ಹೆಚ್.ಡಿ ಕುಮಾರಸ್ವಾಮಿ ವಿಶ್ವಾಸ