ಬೀದರ್ : ಸರಕಾರದ ನಿಯಮಗಳನ್ನು ಗಾಳಿಗೆ ತೂರಿ ರೈತರಿಗೆ ಲೋನ್ ಕೊಡುತ್ತಿದ್ದಾರೆಂಬ ಆರೋಪದ ಮೇಲೆಸಚಿವ ಈಶ್ವರ ಖಂಡ್ರೆ ಅವರ ಸಹೋದರರಾಗಿರುವ ಅಮರ್ ಖಂಡ್ರೆ ಅವರು ಅಧ್ಯಕ್ಷರಾಗಿರುವ ಡಿಸಿಸಿ ಬ್ಯಾಂಕ್ ಮೇಲೆ ಇಂದು 15ಕ್ಕೂ ಹೆಚ್ಚು ಐಟಿ ಅಧಿಕಾರಿಗಳ ತಂಡ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ ಎಂದು ತಿಳಿದುಬಂದಿದೆ.
ಬೆಂಗಳೂರಿನಲ್ಲಿ ಅನ್ಯ ಉದ್ದೇಶಕ್ಕೆ ಕುಡಿಯುವ ನೀರಿನ ಬಳಕೆ : ಈವರೆಗೆ ಎಷ್ಟು ದಂಡ ಸಂಗ್ರಹ? ಇಲ್ಲಿದೆ ಸಂಪೂರ್ಣ ಮಾಹಿತಿ
ಬೀದರ್ ಹೈದರಾಬಾದ್ ರಸ್ತೆಯಲ್ಲಿರುವ ಡಿಸಿಸಿ ಬ್ಯಾಂಕ್ ಮೇಲೆ ಐಟಿ ಅಧಿಕಾರಿಗಳು ಇದೀಗ ದಾಳಿ ನಡೆಸಿದ್ದಾರೆ.ಸರಕಾರದ ನಿಯಮಗಳನ್ನು ಗಾಳಿಗೆ ತೂರಿ ರೈತರಿಗೆ ಲೋನ್ ಕೊಡುತ್ತಿದ್ದಾರೆಂಬ ಆರೋಪದ ಮೇಲೆ ದಾಳಿಯಾಗಿದೆ. ಬೀದರ್ ನಗರದ ಹೈದ್ರಾಬಾದ್ ರಸ್ತೆಯಲ್ಲಿರು ಡಿಸಿಸಿ ಬ್ಯಾಂಕ್ ಮೇಲೆ 15ಕ್ಕೂ ಅಧಿಕ ಐಟಿ ಅಧಿಕಾರಿಗಳ ತಂಡ ದಾಳಿ ಮಾಡಿದ್ದು, ಬ್ಯಾಂಕ್ ಅಕೌಂಟ್ ಪರಿಶೀಲನೆ ನಡೆಸಿದ್ದಾರೆ.
ತೆಲಂಗಾಣ, ಯಾದಗಿರಿ ಕಲಬುರಗಿಯಿಂದ ಬಂದಿರುವ ಐಡಿ ಅಧಿಕಾರಿಗಳು ಬ್ಯಾಂಕ್ನ ಅಕೌಂಟ್ಸ್ಗಳನ್ನು ಪರಿಶೀನಲೆ ಮಾಡುತ್ತಿದ್ದಾರೆ. ಇನ್ನು ಅರಣ್ಯ ಸಚಿವ ಈಶ್ವರ ಖಂಡ್ರೆ ಸಹೋದರ ಅಮರ ಖಂಡ್ರೆ ಬೀದರ್ ಡಿಸಿಸಿ ಬ್ಯಾಂಕ್ನ ಅಧ್ಯಕ್ಷರಾಗಿದ್ದಾರೆ. ಬ್ಯಾಂಕ್ ಸಿಬ್ಬಂದಿಯ ಮೊಬೈಲ್ಗಳನ್ನು ಆಫ್ ಮಾಡಿಸಿ ಕೂಲಂಕುಶವಾಗಿ ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ.