ಬೆಂಗಳೂರು: 15 ದಿನಗಳ ಕಾಲ ಯಶಸ್ವಿ ಸಾರಿಗೆ ಮುಷ್ಕರ ಮಾಡಿಸಿ, ರಾಜ್ಯದ ಜನ ಬಸ್ ಸಂಚಾರ ಇಲ್ಲದೆ ಕಷ್ಟಪಟ್ಟಿದ್ದು ತಮ್ಮ ಸಾಧನೆಯೇ? ಎಂಬುದಾಗಿ ಬಿಜೆಪಿ ನಾಯಕರಿಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ತಿರುಗೇಟು ನೀಡಿದ್ದಾರೆ.
ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಬಿಜೆಪಿ ಅವರೇ ನಿಮಗೆ ಸ್ವಲ್ಪವೂ ಕೂಡ ಅಂಜಿಕೆ, ಅಳುಕು ಇಲ್ಲವೇ.. ಮನುಷ್ಯರಾದವರಿಗೆ ಯಾವುದೇ ಒಂದು ಕ್ಷಣದಲ್ಲಾದರೂ ಯಾವುದಾದರೂ ಒಂದು ಸಂದರ್ಭದಲ್ಲಿಯಾದರೂ ತಮ್ಮ ತಪ್ಪಿನ ಅರಿವಾಗಬೇಕು. ಪಾಪ ಪ್ರಜ್ಞೆ ಕಾಡಬೇಕು. ಇದ್ಯಾವುದೂ ಇಲ್ಲದೆ ಹೀಗೆ ಸುಖಾಸುಮ್ಮನೆ ದಿನಂಪ್ರತಿ ಸುಳ್ಳುಗಳನ್ನೇ ನಿಜವೆಂದು ಬಿಂಬಿಸುವಂತೆ ಟ್ಟೀಟ್ ಮಾಡಿ ಏನನ್ನು ಬಿಂಬಿಸಲು ಹೊರಟ್ಟಿದ್ದೀರಾ? ಎಂದು ಪ್ರಶ್ನಿಸಿದ್ದಾರೆ.
ತಮ್ಮ ಬಿ.ಜೆ.ಪಿ. ಸರ್ಕಾರವು ಬಿಟ್ಟು ಹೋಗಿದ್ದ ₹5900 ಕೋಟಿ ನಷ್ಟದಿಂದ ಹೊಣೆಗಾರಿಕೆ ಬಾಕಿಗಳಾದ ಡೀಸೆಲ್ ಹಣ, ಸಿಬ್ಬಂದಿಗಳ ಭವಿಷ್ಯ ನಿಧಿ, ಖರೀದಿ ಸಾಮಾಗ್ರಿಗಳ ಹಣ ಸೇರಿ ಎಲ್ಲಾ ಬಾಕಿ ಗಳನ್ನು ತೀರಿಸುವ ಹೊಣೆಗಾರಿಕೆ ಹೊತ್ತುಕೊಂಡು ನಾವು ಸಂಸ್ಥೆಗಳನ್ನು ಮುನ್ನಡೆಸ ಬೇಕಾಗಿದೆ ಎಂದಿದ್ದಾರೆ.
ಕೋವಿಡ್ ಸಮಯದಲ್ಲಿ ಬಸ್ಸುಗಳ ಕಾರ್ಯಾಚರಣೆ ಆಗದೆ ತಮ್ಮ ಸರ್ಕಾರ ಸಾರಿಗೆ ಸಿಬ್ಬಂದಿಗಳಿಗೆ ಸಂಬಳ ಮಾತ್ರ ನೀಡಿ, ಭವಿಷ್ಯ ನಿಧಿ, ಎಲ್ಐಸಿ, ಸೊಸೈಟಿ ಹಾಗೂ ಇತರೆ ಯಾವುದೇ ಕಡಿತಗಳ ಹಣವನ್ನು ಸಾರಿಗೆ ನಿಗಮಗಳಿಗೆ ಪಾವತಿ ಮಾಡಿರುವುದಿಲ್ಲ ಎಂದು ತಿಳಿಸಿದ್ದಾರೆ.
ನಮ್ಮ ಸರ್ಕಾರದ ಕೊನೆಯಲ್ಲಿ ಅಂದರೆ ಮೇ 2018ರ ಅಂತ್ಯಕ್ಕೆ ಸಾರಿಗೆ ನಿಗಮಗಳಲ್ಲಿ ಭವಿಷ್ಯ ನಿಧಿ ಮೊತ್ತ ಬಾಕಿ ಇದ್ದದ್ದು ರೂ ( ಕೋಟಿಗಳಲ್ಲಿ ) KSRTC – ₹೦.೦೦ BMTC – ₹೦.೦೦ NWKRTC – ₹13.71 KKRTC – ೦.೦೦ ಎಂಬುದಾಗಿ ಅಂಕಿ ಅಂಶವನ್ನು ಮುಂದಿಟ್ಟಿದ್ದಾರೆ.
ಅದೇ 2023ರ ಮೇ ಅಂತ್ಯಕ್ಕೆ ತಮ್ಮ ಸರ್ಕಾರ ಸಾರಿಗೆ ನಿಗಮಗಳಲ್ಲಿ ಬಾಕಿ ಇಟ್ಟು ಹೋಗಿದ್ದ ಭವಿಷ್ಯ ನಿಧಿ ಮೊತ್ತ ರೂ ( ಕೋಟಿಗಳಲ್ಲಿ) KSRTC – ₹659.57 BMTC – ₹111.47 NWKRTC – ₹609.55 KKRTC – ₹0.00 (Total ₹1380. 59 ಕೋಟಿ ಭವಿಷ್ಯ ನಿಧಿ ಮಾತ್ರ ಬಾಕಿ ) ಎಂದು ಹೇಳಿದ್ದಾರೆ.
ತಮ್ಮ ಕಾಲದಲ್ಲಿ ಸಾರಿಗೆ ಸಿಬ್ಬಂದಿಗಳಿಗೆ 2020 ಜನವರಿಯಲ್ಲಿ ಮಾಡಬೇಕಿದ್ದ ಸಂಬಳವನ್ನು ಏರಿಕೆ ಮಾಡದೆ, 15 ದಿನಗಳ ಕಾಲ ಯಶಸ್ವಿ ಸಾರಿಗೆ ಮುಷ್ಕರ ಮಾಡಿಸಿ, ರಾಜ್ಯದ ಜನ ಬಸ್ ಸಂಚಾರ ಇಲ್ಲದೆ ಕಷ್ಟಪಟ್ಟಿದ್ದು ತಮ್ಮ ಸಾಧನೆಯೇ? ಎಂದು ಪ್ರಶ್ನಿಸಿದ್ದಾರೆ.
2023 ಮಾರ್ಚ್ ನಲ್ಲಿ ಸಂಬಳ ಹೆಚ್ಚಳ ಮಾಡಿದ್ದೀರಾ ಅಂದರೆ ಬರೋಬರಿ 38 ತಿಂಗಳುಗಳ ನಂತರ ಸಂಬಳ ಏರಿಕೆ ಮಾಡಿ, ಏರಿಕೆಯಾದ ಸಂಬಳದ 38 ತಿಂಗಳ ಅರಿಯರ್ಸ್ ಸಿಬ್ಬಂದಿಗಳಿಗೆ ನೀಡದೆ, ಅದಕ್ಕೆ ಬೇಕಾದ ಅನುದಾನವನ್ನು ನೀಡದೆ ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿ ಹೋಗಿರುವ ನಿಮಗೆ ಯಾವ ನೈತಿಕತೆ ಇದೆ? ಎಂದು ಕೇಳಿದ್ದಾರೆ.
ನಾವು ಎಂದು ಸಾರಿಗೆ ಸಂಸ್ಥೆಗಳು ಲಾಭದಲ್ಲಿವೆ ಎಂದು ಹೇಳಿಲ್ಲ ಆದಾಯ ವೃದ್ದಿಯಾಗಿದೆ ಎಂದಷ್ಟೇ ಹೇಳಿರುವುದು. ಬಿ.ಜೆ.ಪಿ ಅವರಿಗೆ ಲಾಭ/ ನಷ್ಟ, ಆದಾಯ / ವೆಚ್ಚ ಇದ್ಯಾವುದರ ಬಗ್ಗೆ ಜ್ಞಾನವೇ ಇಲ್ಲದಿರುವಾಗ, ನಿಮಗೆ ನಾವು ಲೆಕ್ಕಪತ್ರ ಪಾಠ ಮಾಡಲು ಸಾಧ್ಯವೇ? ಎಂದು ಗುಡುಗಿದ್ದಾರೆ.
@BJP4Karnataka ಅವರೇ ನಿಮಗೆ ಸ್ವಲ್ಪವೂ ಕೂಡ ಅಂಜಿಕೆ, ಅಳುಕು ಇಲ್ಲವೇ.. ಮನುಷ್ಯರಾದವರಿಗೆ ಯಾವುದೇ ಒಂದು ಕ್ಷಣದಲ್ಲಾದರೂ ಯಾವುದಾದರೂ ಒಂದು ಸಂದರ್ಭದಲ್ಲಿಯಾದರೂ ತಮ್ಮ ತಪ್ಪಿನ ಅರಿವಾಗಬೇಕು. ಪಾಪ ಪ್ರಜ್ಞೆ ಕಾಡಬೇಕು.
ಇದ್ಯಾವುದೂ ಇಲ್ಲದೆ ಹೀಗೆ ಸುಖಾಸುಮ್ಮನೆ ದಿನಂಪ್ರತಿ ಸುಳ್ಳುಗಳನ್ನೇ ನಿಜವೆಂದು ಬಿಂಬಿಸುವಂತೆ ಟ್ಟೀಟ್ ಮಾಡಿ… https://t.co/LhsY94FM16
— Ramalinga Reddy (@RLR_BTM) November 25, 2024