ಬೆಂಗಳೂರು: ಫೆಬ್ರವರಿ 28ರಂದು ರಾಜ್ಯದ ಎಲ್ಲಾ ಶಾಲಾ-ಕಾಲೇಜು, ಸರ್ಕಾರಿ ಕಚೇರಿಗಳಲ್ಲಿ ರಾಷ್ಟ್ರೀಯ ವಿಜ್ಞಾನ ದಿನದ ಪ್ರಯುಕ್ತ ಪ್ರತಿಜ್ಞಾ ವಿಧಿ ಸ್ವೀಕಾರ ಕಡ್ಡಾಯಗೊಳಿಸಿ ಸರ್ಕಾರ ಆದೇಶಿಸಿದೆ.
ಶಾಂತಿ ಹಾಗೂ ಸಹೋದರತ್ವವನ್ನು ಸಮಾಜದಲ್ಲಿ ಸಾರುವ ಹಿನ್ನೆಲೆಯಲ್ಲಿ ವೈಜ್ಞಾನಿಕ ಮನೋಭಾವನೆಯನ್ನು ನಾಗರಿಕರಲ್ಲಿ ಬೆಳೆಸುವುದು ಪ್ರಸ್ತುತ ಕಾಲಘಟ್ಟದಲ್ಲಿ ಅವಶ್ಯವಾಗಿದ್ದು, ವೈಜ್ಞಾನಿಕ ಮತ್ತು ವೈಚಾರಿಕ ಮನೋಭಾವನೆಯನ್ನು ಬೆಳೆಸಿಕೊಳ್ಳುವುದು ನಮ್ಮ ಭಾರತ ಸಂವಿಧಾನದ ಮೂಲಭೂತ ಕರ್ತವ್ಯಗಳಲ್ಲಿ ಒಂದಾಗಿದೆ ಎಂದಿದೆ.
ಈ ನಿಟ್ಟಿನಲ್ಲಿ ಫೆಬ್ರವರಿ 28 ರಂದು ರಾಷ್ಟ್ರೀಯ ವಿಜ್ಞಾನ ದಿನಾಚರಣೆಯ ಸಂದರ್ಭದಲ್ಲಿ ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳು ಹಾಗೂ ಸರ್ಕಾರಿ ಕಚೇರಿಗಳಲ್ಲಿ ಏಕಕಾಲದಲ್ಲಿ ವೈಜ್ಞಾನಿಕ ಮನೋಭಾವನೆ ಹಾಗೂ ಮಾನವೀಯ ಮೌಲ್ಯಗಳನ್ನು ಮೈಗೂಡಿಸಿಕೊಳ್ಳುವಂತೆ ಪ್ರತಿಜ್ಞಾವಿಧಿ ಸ್ವೀಕರಿಸಿ, ಮೂಲಭೂತ ಕರ್ತವ್ಯಗಳನ್ನು ಪಾಲಿಸುವ ಮೂಲಕ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ.
ಆದ್ದರಿಂದ ಎಲ್ಲಾ ಶಾಲಾ-ಕಾಲೇಜು ಹಾಗೂ ಸರ್ಕಾರಿ ಕಚೇರಿಗಳಲ್ಲಿ ಈ ಪ್ರತಿಜ್ಞಾ ವಿಧಿ ಸ್ವೀಕರಿಸಲು ಕ್ರಮವಹಿಸುವಂತೆ ಈ ಮೂಲಕ ಕೋರಲಾಗಿದೆ. ಪ್ರತಿಜ್ಞಾ ವಿಧಿಯನ್ನು ದಿನಾಂಕ: 28.02.2025, ಶುಕ್ರವಾರದಂದು ಪೂರ್ವಾಹ್ನ 10.30 ಕ್ಕೆ ರಾಜಾದ್ಯಂತ ಏಕಕಾಲಕ್ಕೆ ಸ್ವೀಕರಿಸುವಂತೆ ಕೋರಲಾಗಿದೆ.
ಶಾಂತಿ ಹಾಗೂ ಸಹೋದರತ್ವವನ್ನು ಸಮಾಜದಲ್ಲಿ ಸಾರುವ ಹಿನ್ನೆಲೆಯಲ್ಲಿ ವೈಜ್ಞಾನಿಕ ಮನೋಭಾವನೆಯನ್ನು ನಾಗರಿಕರಲ್ಲಿ ಬೆಳೆಸುವುದು ಪ್ರಸ್ತುತ ಕಾಲಘಟ್ಟದಲ್ಲಿ ಅವಶ್ಯವಾಗಿದ್ದು, ವೈಜ್ಞಾನಿಕ ಮತ್ತು ವೈಚಾರಿಕ ಮನೋಭಾವನೆಯನ್ನು ಬೆಳೆಸಿಕೊಳ್ಳುವುದು ನಮ್ಮ ಭಾರತ ಸಂವಿಧಾನದ ಮೂಲಭೂತ ಕರ್ತವ್ಯಗಳಲ್ಲಿ ಒಂದಾಗಿದೆ.
ಈ ನಿಟ್ಟಿನಲ್ಲಿ ಫೆಬ್ರವರಿ 28 ರಂದು… pic.twitter.com/BdyscF0nQl
— DIPR Karnataka (@KarnatakaVarthe) February 26, 2025
ನಾನು ಹುಟ್ಟು ಕಾಂಗ್ರೆಸಿಗ, ಬಿಜೆಪಿಗೆ ಹತ್ತಿರವಾಗುತ್ತಿದ್ದೇನೆ ಎಂಬುದು ಅಪಪ್ರಚಾರದ ಭಾಗ: ಡಿ.ಕೆ.ಶಿವಕುಮಾರ್
BREAKING : ಮೈಸೂರಲ್ಲಿ ಮತ್ತೊಂದು ಅಗ್ನಿ ದುರಂತ : ಆಕಸ್ಮಿಕ ಬೆಂಕಿಯಿಂದ ಹೊತ್ತಿ ಉರಿದ 12 ಬಾಯ್ಲರ್ ಗಳು!