ಫೆ.28ರಂದು ರಾಜ್ಯದ ಶಾಲಾ-ಕಾಲೇಜು, ಸರ್ಕಾರಿ ಕಚೇರಿಗಳಲ್ಲಿ ಹೀಗೆ ಮಾಡುವುದು ಕಡ್ಡಾಯ: ಸರ್ಕಾರ ಆದೇಶ

ಬೆಂಗಳೂರು: ಫೆಬ್ರವರಿ 28ರಂದು ರಾಜ್ಯದ ಎಲ್ಲಾ ಶಾಲಾ-ಕಾಲೇಜು, ಸರ್ಕಾರಿ ಕಚೇರಿಗಳಲ್ಲಿ ರಾಷ್ಟ್ರೀಯ ವಿಜ್ಞಾನ ದಿನದ ಪ್ರಯುಕ್ತ ಪ್ರತಿಜ್ಞಾ ವಿಧಿ ಸ್ವೀಕಾರ ಕಡ್ಡಾಯಗೊಳಿಸಿ ಸರ್ಕಾರ ಆದೇಶಿಸಿದೆ. ಶಾಂತಿ ಹಾಗೂ ಸಹೋದರತ್ವವನ್ನು ಸಮಾಜದಲ್ಲಿ ಸಾರುವ ಹಿನ್ನೆಲೆಯಲ್ಲಿ ವೈಜ್ಞಾನಿಕ ಮನೋಭಾವನೆಯನ್ನು ನಾಗರಿಕರಲ್ಲಿ ಬೆಳೆಸುವುದು ಪ್ರಸ್ತುತ ಕಾಲಘಟ್ಟದಲ್ಲಿ ಅವಶ್ಯವಾಗಿದ್ದು, ವೈಜ್ಞಾನಿಕ ಮತ್ತು ವೈಚಾರಿಕ ಮನೋಭಾವನೆಯನ್ನು ಬೆಳೆಸಿಕೊಳ್ಳುವುದು ನಮ್ಮ ಭಾರತ ಸಂವಿಧಾನದ ಮೂಲಭೂತ ಕರ್ತವ್ಯಗಳಲ್ಲಿ ಒಂದಾಗಿದೆ ಎಂದಿದೆ. ಈ ನಿಟ್ಟಿನಲ್ಲಿ ಫೆಬ್ರವರಿ 28 ರಂದು ರಾಷ್ಟ್ರೀಯ ವಿಜ್ಞಾನ ದಿನಾಚರಣೆಯ ಸಂದರ್ಭದಲ್ಲಿ ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳು … Continue reading ಫೆ.28ರಂದು ರಾಜ್ಯದ ಶಾಲಾ-ಕಾಲೇಜು, ಸರ್ಕಾರಿ ಕಚೇರಿಗಳಲ್ಲಿ ಹೀಗೆ ಮಾಡುವುದು ಕಡ್ಡಾಯ: ಸರ್ಕಾರ ಆದೇಶ