ಬೆಂಗಳೂರು : ಖಾಸಗಿ ಶಾಲೆಗಳಲ್ಲಿ ನಾಡಗೀತೆ ಹಾಡುವುದು ಕಡ್ಡಾಯವಲ್ಲ ಎಂದು ಅರ್ಥ ಬರುವ ಸುತ್ತೋಲೆಯನ್ನು ಹೊರಡಿಸಿದ್ದ ರಾಜ್ಯ ಸರ್ಕಾರ ವಿವಾದದ ಬೆನ್ನಲೇ ತಿದ್ದುಪಡಿ ಆದೇಶವನ್ನು ಹೊರಡಿಸಿದೆ.
ತೆಂಗು ಬೆಳೆಗಾರರಿಗೆ ಗುಡ್ ನ್ಯೂಸ್ : ಕೊಬ್ಬರಿ ಖರೀದಿಗೆ ನೋಂದಣಿ ಪ್ರಕ್ರಿಯೆ ಶುರು!
BREAKING : ನಿರ್ಮಾಪಕನ ವಿರುದ್ಧ ‘ಗುಮ್ಮುಸ್ಕೊತಿಯ’ ಹೇಳಿಕೆ ವಿಚಾರ : ನಟ ದರ್ಶನ್ ವಿರುದ್ಧ ಫಿಲಂ ಚೇಂಬರ್ ಗೆ ದೂರು
ತಿದ್ದುಪಡಿ ಆದೇಶದಲ್ಲಿ ಇರೋದು ಏನು..?
ರಾಷ್ಟ್ರಕವಿ ಜ್ಞಾನಪೀಠ ಪುರಸ್ಕೃತರಾದ ಡಾ. ಕುವೆಂಪುರವರ “ಜಯ ಭಾರತ ಜನನಿಯ ತನುಜಾತೆ” ಕವನವನ್ನು ನಾಡಗೀತೆಯಾಗಿ ಘೋಷಿಸುವ ಕುರಿತು ಹೊರಡಿಸಲಾದ ಸರ್ಕಾರದ ಆದೇಶ ಸಂಖ್ಯೆ: ಸಂಕಇ 207 ಕಸದ 2003, ದಿನಾಂಕ:07.01.2004ರ ಆದೇಶ ಭಾಗದಲ್ಲಿನ ಮಾರ್ಗಸೂಚಿ ‘ಇ” ಅಂಶಕ್ಕೆ ಹೊರಡಿಸಲಾದ ತಿದ್ದುಪಡಿ ಆದೇಶವನ್ನು ಹಿಂಪಡೆಯಲಾಗಿದೆ.
ಮುಂದುವರೆದು ಎಲ್ಲಾ ಶಾಲೆಗಳಲ್ಲಿ ನಾಡಗೀತೆಯನ್ನು ದೈನಂದಿನ ಚಟುವಟಿಕೆಗಳು ಆರಂಭವಾಗುವ ಮುನ್ನ ಹಾಗೂ ಸರ್ಕಾರದ ಇಲಾಖೆಗಳು ಹಾಗೂ ನಿಗಮ, ಮಂಡಳಿ, ಪ್ರಾಧಿಕಾರ ಮುಂತಾದ ಅರೆ ಸರ್ಕಾರಿ ಸಂಸ್ಥೆಗಳ ಅಧಿಕೃತ ಕಾರ್ಯಕ್ರಮಗಳನ್ನು ಏರ್ಪಡಿಸುವ ಪ್ರಾರಂಭದಲ್ಲಿ ಹಾಡುವುದು” ಎಂಬುದರ ಬದಲಾಗಿ “(ಇ) ಎಲ್ಲಾ ಶಾಲೆಗಳಲ್ಲಿ (ಸರ್ಕಾರಿ, ಅನುದಾನಿತ, ಅನುದಾನ ರಹಿತ ಮತ್ತು ಖಾಸಗಿ) ನಾಡಗೀತೆಯನ್ನು ದೈನಂದಿನ ಚಟುವಟಿಕೆಗಳು ಆರಂಭವಾಗುವ ಮುನ್ನ ಹಾಗೂ ಸರ್ಕಾರದ ಇಲಾಖೆಗಳು ಹಾಗೂ ನಿಗಮ, ಮಂಡಳಿ, ಪ್ರಾಧಿಕಾರ ಮುಂತಾದ ಅರೆ ಸರ್ಕಾರಿ ಸಂಸ್ಥೆಗಳು ಅಧಿಕೃತ ಕಾರ್ಯಕ್ರಮಗಳನ್ನು ಏರ್ಪಡಿಸುವ ಪ್ರಾರಂಭದಲ್ಲಿ ಹಾಡುವುದು” ಎಂದು ತಿದ್ದಿ ಓದಿಕೊಳ್ಳತಕ್ಕದ್ದು ಎಂದು ಆದೇಶಿಸಿದೆ.