ಬೆಂಗಳೂರು : ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಿನ್ನೆ ಬಿಜೆಪಿ ಶಾಸಕ ಭೈರತಿ ಬಸವರಾಜ್ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿತು. ಇದರ ಬೆನ್ನಲ್ಲೇ ಭೈರತಿ ಬಸವರಾಜ್ ತಲೆಮರೆಸಿಕೊಂಡಿದ್ದು ಸಿಐಡಿ ಪೋಲೀಸರು ಅವರ ಬಂಧನಕ್ಕೆ ಲುಕ್ ಔಟ್ ನೋಟಿಸ್ ಜಾರಿ ಮಾಡಿದ್ದಾರೆ.
ಇದೇ ವಿಚಾರವಾಗಿ ಬೆಂಗಳೂರಿನಲ್ಲಿ ಗೃಹ ಸಚಿವ ಜಿ ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದು ಬಿಜೆಪಿ ಶಾಸಕ ಭೈರತಿ ಬಸವರಾಜ್ ತಲೆಮರೆಸಿಕೊಂಡಿದ್ದು, ಅವರಾಗಿಯೇ ಬಂದು ಸರೆಂಡರ್ ಆದರೆ ಒಳ್ಳೆಯದು ಇಲ್ಲದಿದ್ದರೆ ಪೊಲೀಸರು ಬಿಜೆಪಿ ಶಾಸಕ ಭೈರತಿ ಬಸವರಾಜ್ ಅವರನ್ನು ಹುಡುಕುತ್ತಾರೆ ಎಂದು ಎಚ್ಚರಿಕೆ ನೀಡಿದರು.








