ಬೆಂಗಳೂರು : ಬೆಂಗಳೂರು ನಗರಾಭಿವೃದ್ಧಿ ಖಾತೆ ನೀಡದ ಹಿನ್ನೆಲೆಯಲ್ಲಿ ಅಸಮಾಧಾನ ಗೊಂಡ ರಾಮಲಿಂಗಾರೆಡ್ಡಿ ಸಚಿವ ಸ್ಥಾನಕ್ಕೆ ಇಂದು ರಾಜೀನಾಮೆ ನೀಡಿದ್ದಾರೆ. ಈ ವಿಚಾರವಾಗಿ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ತಮ್ಮ ಎಕ್ಸ್ ಖಾತೆಯಲ್ಲಿ ಕಾಂಗ್ರೆಸ್ ಸರ್ಕಾರದ ಕಚ್ಛಾಟಕ್ಕೆ ತೇಪೆ ಹಚ್ಚಲು ರಾಹುಲ್ ಗಾಂಧಿ ಬೆಂಗಳೂರಲ್ಲೇ ಒಂದು ಮನೆ ಮಾಡಿ ಇದ್ದುಬಿಟ್ಟರೆ ಒಳ್ಳೆಯದು ಎಂದು ವ್ಯಂಗ್ಯವಾಡಿದ್ದಾರೆ.
ಆರ್. ಅಶೋಕ್ ತಮ್ಮ ಎಕ್ಸ್ ಖಾತೆಯಲ್ಲಿ ಕನ್ನಡಿಗರು ಬಹುಶಃ ಒಂದು ದಿನ ಸೂರ್ಯನೇ ಹುಟ್ಟದ ನೋಡಬಹುದೇನೋ, ಆದರೆ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷದ ಒಳಜಗಳ ಇಲ್ಲದ ದಿನವನ್ನ ನೋಡಲು ಸಾಧ್ಯವೇ ಇಲ್ಲ.
ಇನ್ನು ಎರಡು ವರ್ಷ ನಡೆಯಲಿರುವ @DKShivakumar ಸರ್ಕಾರದ ಈ ನಿತ್ಯ ಕಚ್ಚಾಟಕ್ಕೆ ತೇಪೆ ಹೆಚ್ಚಲು ರಾಹುಲ್ ಗಾಂಧಿ ಅವರು, ಕೆ.ಸಿ. ವೇಣುಗೋಪಾಲ್ ಅವರು, ರಣದೀಪ್ ಸೂರ್ಜೆವಾಲ ಅವರು ಬೆಂಗಳೂರಿನಲ್ಲೇ ಒಂದು ಮನೆ ಮಾಡಿಕೊಂಡು ಇಲ್ಲೇ ಇದ್ದುಬಿಟ್ಟರೆ ಒಳ್ಳೆಯದು ಎಂದು ವ್ಯಂಗ್ಯವಾಡಿದ್ದಾರೆ.
ಕನ್ನಡಿಗರು ಬಹುಶಃ ಒಂದು ದಿನ ಸೂರ್ಯನೇ ಹುಟ್ಟದ ನೋಡಬಹುದೇನೋ, ಆದರೆ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷದ ಒಳಜಗಳ ಇಲ್ಲದ ದಿನವನ್ನ ನೋಡಲು ಸಾಧ್ಯವೇ ಇಲ್ಲ.
ಇನ್ನು ಎರಡು ವರ್ಷ ನಡೆಯಲಿರುವ @DKShivakumar ಸರ್ಕಾರದ ಈ ನಿತ್ಯ ಕಚ್ಚಾಟಕ್ಕೆ ತೇಪೆ ಹೆಚ್ಚಲು ರಾಹುಲ್ ಗಾಂಧಿ ಅವರು, ಕೆ.ಸಿ. ವೇಣುಗೋಪಾಲ್ ಅವರು, ರಣದೀಪ್ ಸೂರ್ಜೆವಾಲ ಅವರು… pic.twitter.com/iiDwOIzjOG
— R. Ashoka (@RAshokaBJP) June 5, 2026








