ಹುಬ್ಬಳ್ಳಿ: 2023ರ ವಿಧಾನಸಭಾ ಚುನಾವಣೆಗೆ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ಟಿಕೆಟ್ ಗಾಗಿ ಪೈಪೋಟಿ ನಡೆಸಿದ್ದಾರೆ.
ಈ ನಡುವೆ ವಿಪಕ್ಷ ನಾಯಕ ಸಿದ್ದರಾಮಯ್ಯ ಚುನಾವಣೆಯಲ್ಲಿ ಸ್ಪರ್ಧಿಸದೇ ಇದ್ದರೆ ಸೂಕ್ತ ಎಂದು ಮಾಜಿ ಸಚಿವ ಸಂತೋಷ್ ಲಾಡ್ ಹೇಳಿಕೆ ನೀಡಿದ್ದಾರೆ. ಇದು ಭಾರಿ ಚರ್ಚೆಗೆ ಕಾರಣವಾಗಿದೆ.ನಗರದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯನವರು ರಾಜ್ಯ ಪ್ರವಾಸ ಮಾಡಲಿ, ಪಕ್ಷವನ್ನು ಅಧಿಕಾರಕ್ಕೆ ತರಲು ಶ್ರಮಿಸಲಿ ಈ ಬಾರಿ ಚುನಾವಣೆ ಅವರು ಸ್ಪರ್ಧಿಸದಿದ್ದರೆ ಸೂಕ್ತ ಎಂಬುದು ನನ್ನ ಅಭಿಪ್ರಾಯ ಎಂದು ಹೇಳಿದ್ದಾರೆ.
ಸಿದ್ದರಾಮಯ್ಯ ಈ ಬಾರಿ ಬಾದಾಮಿ ಬಿಟ್ಟು ಕೋಲಾರದಿಂದ ಸ್ಪರ್ಧೇಗೆ ಮುಂದಾಗಿದ್ದಾರೆ. ಡಿ.ಕೆ ಶಿವಕುಮಾರ್ ಅವರು ಕನಕಪುರ ಕ್ಷೇತ್ರದ ಟಿಕೆಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ಆದರೆ ಸಿದ್ದರಾಮಯ್ಯ ಈವರೆಗೆ ಟಿಕೆಟ್ ಗಾಗಿ ಇನ್ನೂ ಅರ್ಜಿ ಸಲ್ಲಿಸಿಲ್ಲ ಎನ್ನಲಾಗಿದೆ. ಈ ನಡುವೆ ಸಿದ್ದರಾಮಯ್ಯ ಅವರ ಆಪ್ತರೇ ಆಗಿರುವ ಸಂತೋಷ ಲಾಡ್ ನೀಡಿರುವ ಹೇಳಿಕೆ ಕಾಂಗ್ರೆಸ್ ನಲ್ಲಿಯೇ ಚರ್ಚೆ ಶುರುವಾಗಿದೆ.