ನವದೆಹಲಿ:ಜಿ-7 ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಇಟಲಿಯ ಪ್ರಧಾನಿ ಜಿಯೋರ್ಜಿಯಾ ಮೆಲೋನಿ ಒಟ್ಟಿಗೆ ಸೆಲ್ಫಿ ಕ್ಲಿಕ್ಕಿಸಿಕೊಂಡಿದ್ದಾರೆ. ಸುದ್ದಿ ಸಂಸ್ಥೆ ಎಎನ್ಐ ಹಂಚಿಕೊಂಡಿರುವ ಫೋಟೋದಲ್ಲಿ ಮೆಲೋನಿ ತನ್ನ ಮೊಬೈಲ್ ಫೋನ್ನಲ್ಲಿ ಪ್ರಧಾನಿ ಮೋದಿಯವರೊಂದಿಗೆ ಸೆಲ್ಫಿ ಕ್ಲಿಕ್ಕಿಸುತ್ತಿರುವುದನ್ನು ತೋರಿಸುತ್ತದೆ.
ಇದಕ್ಕೂ ಮೊದಲು, ಪಿಎಂ ಮೋದಿ ಶುಕ್ರವಾರ (ಜೂನ್ 14) ರಾತ್ರಿ ಮೆಲೋನಿಯೊಂದಿಗೆ ದ್ವಿಪಕ್ಷೀಯ ಸಭೆ ನಡೆಸಿದರು ಮತ್ತು ಭಾರತ ಮತ್ತು ಇಟಲಿ ನಡುವಿನ ರಕ್ಷಣಾ ಮತ್ತು ಭದ್ರತಾ ಸಹಕಾರದ ಬಗ್ಗೆ ಚರ್ಚಿಸಿದರು. ವಿಶೇಷವೆಂದರೆ, ಪ್ರಧಾನಿ ಮೆಲೋನಿ ಅವರ ಆಹ್ವಾನದ ಮೇರೆಗೆ ಭಾರತೀಯ ಪ್ರಧಾನಿ ಅಪುಲಿಯಾದಲ್ಲಿ ನಡೆದ ಜಿ 7 ಶೃಂಗಸಭೆಯಲ್ಲಿ ಭಾಗವಹಿಸಲು ಹೋದರು.
PM Narendra Modi and Italy’s PM Giorgia Meloni’s selfie on the sidelines of the G7 summit, in Italy. pic.twitter.com/wE1ihPHzeq
— ANI (@ANI) June 15, 2024