ಬೆಂಗಳೂರು: ಬಿಜೆಪಿ ನಾಯಕರು ( BJP Leader ) ಚುನಾವಣಾ ದಿಕ್ಸೂಚಿಯನ್ನು ಗುಜರಾತಿನ ಫಲಿತಾಂಶದಿಂದಷ್ಟೇ ( Gujarat Results ) ನೋಡುವ ಅಗತ್ಯವಿಲ್ಲ, ಹಿಮಾಚಲ ಪ್ರದೇಶದ ಫಲಿತಾಂಶದಿಂದಲೂ ನೋಡಲಿ. ಬಿಜೆಪಿಯ ದುರಾಡಳಿತವನ್ನು ಹಿಮಾಚಲ ಪ್ರದೇಶದ ಜನತೆ ಹೇಗೆ ತಿರಸ್ಕರಿಸಿದ್ದಾರೋ ಹಾಗೆಯೇ ಕರ್ನಾಟಕದಲ್ಲೂ ಬಿಜೆಪಿಯನ್ನು ಕಸದ ಬುಟ್ಟಿಗೆ ಎಸೆಯುತ್ತಾರೆ ಎಂಬುದಾಗಿ ಕರ್ನಾಟಕ ಕಾಂಗ್ರೆಸ್ ( Karnataka Congress ) ವಾಗ್ದಾಳಿ ನಡೆಸಿದೆ.
'@BJP4Karnataka ನಾಯಕರು ಚುನಾವಣಾ ದಿಕ್ಸೂಚಿಯನ್ನು ಗುಜರಾತಿನ ಫಲಿತಾಂಶದಿಂದಷ್ಟೇ ನೋಡುವ ಅಗತ್ಯವಿಲ್ಲ, ಹಿಮಾಚಲ ಪ್ರದೇಶದ ಫಲಿತಾಂಶದಿಂದಲೂ ನೋಡಲಿ.
ಬಿಜೆಪಿಯ ದುರಾಡಳಿತವನ್ನು
ಹಿಮಾಚಲ ಪ್ರದೇಶದ ಜನತೆ ಹೇಗೆ ತಿರಸ್ಕರಿಸಿದ್ದಾರೋ ಹಾಗೆಯೇ ಕರ್ನಾಟಕದಲ್ಲೂ ಬಿಜೆಪಿಯನ್ನು ಕಸದ ಬುಟ್ಟಿಗೆ ಎಸೆಯುತ್ತಾರೆ.— Karnataka Congress (@INCKarnataka) December 8, 2022
ಈ ಕುರಿತಂತೆ ಸರಣಿ ಟ್ವಿಟ್ ಮಾಡಿದ್ದು, ಗೃಹ ಇಲಾಖೆ ಭ್ರಷ್ಟಾಚಾರದ ಕೊಂಪೆಯಾಗಿದೆ, ಗೃಹ ಇಲಾಖೆಯ ಮೇಲೆ ಗೃಹಸಚಿವರಿಗೆ ಹಿಡಿತವಿಲ್ಲ ಎಂಬುದು ಹಲವು ವಿಷಯಗಳಲ್ಲಿ ಸಾಬೀತಾಗಿದೆ. ದಲಿತರಿಗೆ ಮೂತ್ರ ಕುಡಿಸಿ ವಿಕೃತಿ ಮೆರೆದ ಪೊಲೀಸರು ಈಗ ವಕೀಲರ ಮೇಲೂ ದೌರ್ಜನ್ಯ ಎಸಗುತ್ತಿದ್ದಾರೆ. ತಮ್ಮ ಇಲಾಖೆಯನ್ನು ನಿರ್ವಹಿಸಲಾಗದ ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ತಮ್ಮ ಸ್ವಗೃಹ ಸೇರುವುದು ಒಳಿತು ಎಂದಿದೆ.
ಗೃಹ ಇಲಾಖೆ ಭ್ರಷ್ಟಾಚಾರದ ಕೊಂಪೆಯಾಗಿದೆ, ಗೃಹ ಇಲಾಖೆಯ ಮೇಲೆ ಗೃಹಸಚಿವರಿಗೆ ಹಿಡಿತವಿಲ್ಲ ಎಂಬುದು ಹಲವು ವಿಷಯಗಳಲ್ಲಿ ಸಾಬೀತಾಗಿದೆ.
ದಲಿತರಿಗೆ ಮೂತ್ರ ಕುಡಿಸಿ ವಿಕೃತಿ ಮೆರೆದ ಪೊಲೀಸರು ಈಗ ವಕೀಲರ ಮೇಲೂ ದೌರ್ಜನ್ಯ ಎಸಗುತ್ತಿದ್ದಾರೆ.
ತಮ್ಮ ಇಲಾಖೆಯನ್ನು ನಿರ್ವಹಿಸಲಾಗದ@JnanendraAraga ಅವರು ತಮ್ಮ ಸ್ವಗೃಹ ಸೇರುವುದು ಒಳಿತು! pic.twitter.com/WaKxp9nVSv
— Karnataka Congress (@INCKarnataka) December 8, 2022