ಮೈಸೂರು : ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸಮಯ ಬಂದಿದೆ. ಹಾಗಾಗಿ ಹೈಕಮಾಂಡ್ ಬೆದರಿಸಲು ಸಮಾವೇಶಗಳನ್ನು ಮಾಡುತ್ತಿದ್ದಾರೆ. ಸಿಎಂ ಸ್ಥಾನ ಅಲ್ಲಾಡುತ್ತಿರುವುದರಿಂದಲೇ ಈ ರೀತಿ ಸಮಾವೇಶಗಳನ್ನು ಮಾಡಿ ಶಕ್ತಿ ಪ್ರದರ್ಶನ ಮಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ತಿಳಿಸಿದರು.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಂತ್ರ-ಕುತಂತ್ರಕ್ಕೂ ಒಂದು ಮಿತಿಯಿದೆ. ರಾಜ್ಯ ರಾಜಕೀಯದಲ್ಲಿ ಬದಲಾವಣೆ ಖಚಿತ. ನವೆಂಬರ್ ನಲ್ಲಿ ಬದಲಾವಣೆ ನಿಶ್ಚಿತ. ಬಿಜೆಪಿ ವಿಪಕ್ಷವಾಗಿ ತನ್ನ ಕೆಲಸ ಮಾಡುತ್ತದೆ. ಸಿಎಂ ಬದಲವಣೆಯಾಗುವುದು ಖಚಿತವಾಗಿದೆ ಎಂದರು.
ದೆಹಲಿಯಲ್ಲಿ ಸಿದ್ದರಾಮಯ್ಯನವರಿಗೆ ರಾಅಹುಲ್ ಗಾಂಧಿ ಭೇಟಿಗೂ ಅವಕಾಶವನ್ನು ನೀಡಿಲ್ಲ. ಈಗ ಸಾಧನಾ ಸಮಾವೇಶದ ಹೆಸರಲ್ಲಿ ಸಮಾವೇಶಗಳನ್ನು ಮಾಡುತ್ತಿದ್ದಾರೆ. ಏನು ಸಾಧನೆಗಳನ್ನು ಮಾಡಿದ್ದಾರೆ ಎಂದು ಸಮಾವೇಶ? ಯಾವ ಸಮಾವೇಶಗಳು ಈ ಬಾರಿ ಕೆಲಸ ಮಾಡುವುದಿಲ್ಲ. ರಾಜ್ಯದಲ್ಲಿ ರಾಜಕೀಯವಾಗಿ ಬೆಳವಣಿಗೆಗಳು ಆಗುತ್ತಿವೆ. ನವೆಂಬರ್ ನಲ್ಲಿ ಬದಲಾವಣೆ ನಿಶ್ಚಿತ ಎಂದು ಹೇಳಿದರು.