ವಾಷಿಂಗ್ಟನ್ (ಯುಎಸ್): ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump)ಅವರ ಮಾಜಿ ಪತ್ನಿ ಇವಾನಾ ಟ್ರಂಪ್(Ivana Trump) ಗುರುವಾರ ನಿಧನರಾಗಿದ್ದಾರೆ ಎಂದು ವರದಿಯಾಗಿದೆ.
73 ವರ್ಷದ ಇವಾನಾ ಮ್ಯಾನ್ಹ್ಯಾಟನ್ನ 10 E. 64 ನೇ ಸೇಂಟ್ನಲ್ಲಿರುವ ತನ್ನ ಮನೆಯಲ್ಲಿ ನಿನ್ನೆ ಮಧ್ಯಾಹ್ನ 12:40ರ ಸುಮಾರಿಗೆ ಶವವಾಗಿ ಪತ್ತೆಯಾಗಿದ್ದಾರೆ ಎಂದು ದಿ ನ್ಯೂಯಾರ್ಕ್ ಪೋಸ್ಟ್ ಪೊಲೀಸ್ ಮೂಲಗಳನ್ನು ಉಲ್ಲೇಖಿಸಿ ವರದಿ ಮಾಡಿದೆ.
ಮೂಲಗಳ ಪ್ರಕಾರ, ಅವರು ಹೃದಯಾಘಾತಕ್ಕೆ ಒಳಗಾಗಿದ್ದರು. ಆದ್ರೆ, ವೈದ್ಯಾಧಿಕಾರಿಗಳು ಬರುವಷ್ಟರಲ್ಲಿ ಅವರು ಸಾವನ್ನಪ್ಪಿದ್ದರು ಎನ್ನಲಾಗಿದೆ.
ಟ್ರಂಪ್ ದಂಪತಿಗೆ ಡೊನಾಲ್ಡ್ ಜೂನಿಯರ್, ಇವಾಂಕಾ ಮತ್ತು ಎರಿಕ್ ಟ್ರಂಪ್ ಎಂಬ ಮೂವರು ಮಕ್ಕಳಿದ್ದಾರೆ.
Good News : ‘ಕಾಶಿ ಯಾತ್ರೆ’ಗೆ ತೆರಳೋರಿಗೆ ಗುಡ್ ನ್ಯೂಸ್ : ಸಿಗಲಿದೆ 5 ಸಾವಿರ ಸಹಾಯ ಧನ : ಇಲ್ಲಿದೆ ಮಾಹಿತಿ
Good News: ಸ್ವಯಂ ಉದ್ಯೋಗ ನೇರ ಸಾಲಕ್ಕೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ, ಇಲ್ಲಿದೆ ಮಾಹಿತಿ