ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಜಿಲ್ಲೆಯಾಗಿ 15 ವರ್ಷಗಳು ಕಳೆದಿದ್ದು, ಜನವರಿ 7ರಿಂದ ಜಿಲ್ಲೆಯ ಸಂಸ್ಕೃತಿ ಹಾಗೂ ಪರಂಪರೆಯನ್ನು ಸಂಭ್ರಮಿಸುವ ಉತ್ಸವವನ್ನು ನಡೆಸಲು ನಿರ್ಧರಿಸಲಾಗಿದೆ .
ಚಿಕ್ಕಬಳ್ಳಾಪುರ ಉತ್ಸವ-2023’ಕ್ಕೆ ನಡೆದಿರುವ ಸಿದ್ಧತೆಗಳನ್ನು ಪರಿಶೀಲನೆ ನಡೆಸುವ ಸಲುವಾಗಿ ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಇಂದು ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಪಿಡಿಓ ಗಳು ಹಾಗೂ ಇತರ ಅಧಿಕಾರಿಗಳೊಂದಿಗೆ ಸಚಿವ ಸುಧಾಕರ್ ಸಭೆ ನಡೆಸಿದರು.
ಇದೇ ಸಂದರ್ಭದಲ್ಲಿ, ಉತ್ಸವಕ್ಕೆ ಯಾವುದೇ ಕುಂದುಕೊರತೆಗಳು ಆಗದಂತೆ ಯಶಸ್ವಿಯಾಗಿ ನಡೆಸಲು ಬೇಕಾದ ಎಲ್ಲಾ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು. ಅದೇ ರೀತಿ ಜನವರಿ 7ರಿಂದ 14ರ ವರೆಗೆ ನಡೆಯುವ ‘ಚಿಕ್ಕಬಳ್ಳಾಪುರ ಉತ್ಸವ-2023’ರ ಕ್ರೀಡೋತ್ಸವದ ಆರಂಭಿಕ ಹಂತದ ಕ್ರೀಡಾ ಸ್ಪರ್ಧೆಗಳಿಗೆ ಇಂದಿನಿಂದ ಚಾಲನೆ ದೊರೆತಿದ್ದು, ಕ್ರೀಡಾ ಸ್ಪರ್ಧೆಗಳಿಗಾಗಿ ಸಿದ್ಧಗೊಂಡಿರುವ ಕ್ರೀಡಾಂಗಣಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಚಿಕ್ಕಬಳ್ಳಾಪುರ ಜಿಲ್ಲೆಯಾಗಿ 15 ವರ್ಷ ಪೂರೈಸುತ್ತಿದೆ. ಅಲ್ಲದೆ 20 ವರ್ಷಗಳ ನಂತರ ಜಿಲ್ಲೆಯ ಎಲ್ಲ ಕೆರೆಗಳೂ ತುಂಬಿ ಕೋಡಿ ಹರಿದಿವೆ, ಈ ವೇಳೆ ಪ್ರತಿ ಗ್ರಾಮದಲ್ಲಿಯೂ ಹಬ್ಬ ಆಚರಿಸಲು ತೀರ್ಮಾನಿಸಲಾಗಿದೆ.
ಜ.5ರಿಂದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ರಾಜ್ಯ ಪ್ರವಾಸ: ಹೀಗಿದೆ ಪ್ರವಾಸದ ಸಂಪೂರ್ಣ ಪಟ್ಟಿ
ಇದೇ ಸಂದರ್ಭದಲ್ಲಿ, ಉತ್ಸವಕ್ಕೆ ಯಾವುದೇ ಕುಂದುಕೊರತೆಗಳು ಆಗದಂತೆ ಯಶಸ್ವಿಯಾಗಿ ನಡೆಸಲು ಬೇಕಾದ ಎಲ್ಲಾ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು.
2/2 pic.twitter.com/sVXwLuvipe
— Dr Sudhakar K (@mla_sudhakar) January 3, 2023
ಜನವರಿ 7ರಿಂದ 14ರ ವರೆಗೆ ನಡೆಯುವ 'ಚಿಕ್ಕಬಳ್ಳಾಪುರ ಉತ್ಸವ-2023'ರ ಕ್ರೀಡೋತ್ಸವದ ಆರಂಭಿಕ ಹಂತದ ಕ್ರೀಡಾ ಸ್ಪರ್ಧೆಗಳಿಗೆ ಇಂದಿನಿಂದ ಚಾಲನೆ ದೊರೆತಿದ್ದು, ಕ್ರೀಡಾ ಸ್ಪರ್ಧೆಗಳಿಗಾಗಿ ಸಿದ್ಧಗೊಂಡಿರುವ ಕ್ರೀಡಾಂಗಣಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಾಯಿತು.
1/2 pic.twitter.com/ZuW7FWmRyG
— Dr Sudhakar K (@mla_sudhakar) January 3, 2023