ಬೆಂಗಳೂರು ಗ್ರಾಮಾಂತರ ಜಿಲ್ಲೆ : ಜನವರಿ 27 ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆ 2022-23ರ ಉದ್ಘಾಟನಾ ಸಮಾರಂಭವನ್ನು ಜನವರಿ 31 ರಂದು ಬೆಳಿಗ್ಗೆ 10.00 ಗಂಟೆಗೆ ದೊಡ್ಡಬಳ್ಳಾಪುರದ “ಭಗತ್ ಸಿಂಗ್ ಕ್ರೀಡಾಂಗಣ”ದಲ್ಲಿ ಏರ್ಪಡಿಸಲಾಗಿದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ವೈದಕೀಯ ಶಿಕ್ಷಣ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ|| ಕೆ.ಸುಧಾಕರ್ ಅವರು ಕಾರ್ಯಕ್ರಮವನ್ನು ಉದ್ಘಾಟನೆ ಮಾಡಲಿದ್ದಾರೆ.
ಪೌರಾಡಳಿತ, ಸಣ್ಣ ಕೈಗಾರಿಕೆಗಳ ಹಾಗೂ ಸಾರ್ವಜನಿಕ ವಲಯ ಉದ್ಯಮಗಳ ಸಚಿವರು ಮತ್ತು ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ನಾಗರಾಜ್(ಎಂ.ಟಿ.ಬಿ), ರೇಷ್ಮೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರಾದ ಡಾ.ಕೆ.ಸಿ.ನಾರಾಯಣಗೌಡ ಅವರ ಘನ ಉಪಸ್ಥಿತಿಯಲ್ಲಿ ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಟಿ.ವೆಂಕಟರಮಣಯ್ಯ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸದಸ್ಯರಾದ ಬಿ.ಎನ್.ಬಚ್ಚೇಗೌಡ, ನೆಲಮಂಗಲ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ||ಕೆ.ಶ್ರೀನಿವಾಸಮೂರ್ತಿ, ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕರಾದ ನಿಸರ್ಗ ನಾರಾಯಣಸ್ವಾಮಿ.ಎಲ್.ಎನ್., ಹೊಸಕೋಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಶರತ್ ಕುಮಾರ್ ಬಚ್ಚೇಗೌಡ, ವಿಧಾನ ಪರಿಷತ್ ಸದಸ್ಯರುಗಳಾದ ಪುಟ್ಟಣ್ಣ, ಅ.ದೇವೇಗೌಡ, ಎಸ್.ರವಿ, ಕ.ನ.ನೀ.ಸ. ಮತ್ತು ಒ.ಚ. ಮಂಡಳಿಯ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಆಡಳಿತಾಧಿಕಾರಿ ಕೆ.ಪಿ.ಮೋಹನ್ ರಾಜ್, ಕರ್ನಾಟಕ ರೇಷ್ಮೆ ಮಾರಾಟ ಮಂಡಳಿ ಅಧ್ಯಕ್ಷರಾದ ಬಿ.ಸಿ.ನಾರಾಯಣಸ್ವಾಮಿ, ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರ ಅಧ್ಯಕ್ಷರಾದ ದಿಬ್ಬೂರು ಜಯಣ್ಣ, ಕರ್ನಾಟಕ ರಾಜ್ಯ ತೆಂಗಿನನಾರಿನ ಸಹಕಾರ ಮಹಾಮಂಡಳಿ ಅಧ್ಯಕ್ಷರಾದ ಎಸ್.ಎಲ್.ವೆಂಕಟೇಶ್‌ಬಾಬು, ದೊಡ್ಡಬಳ್ಳಾಪುರ ನಗರಸಭೆ ಅಧ್ಯಕ್ಷರಾದ ಎಸ್. ಸುಧಾರಾಣಿ, ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷರಾದ ಫರ್ಹಾನಾ ತಾಜ್ ಅವರು ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಾಕ್ಷ ಸಿ.ಎಸ್.ಷಡಕ್ಷರಿ, ರಾಜ್ಯ ಉಪಾಧ್ಯಕ್ಷ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಎಚ್.ಬಾಲಕೃಷ್ಣ ಸೇರಿದಂತೆ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಜಿಲ್ಲೆಯ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ, ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಹಾಗೂ ಎಲ್ಲಾ ಚುನಾಯಿತ ಪ್ರತಿನಿಧಿಗಳು, ಎಲ್ಲಾ ನಾಮ ನಿರ್ದೇಶಿತ ಸದಸ್ಯರು, ಜಿಲ್ಲೆಯ ರಾಜ್ಯ ಸರ್ಕಾರಿ ನೌಕರರ ಸಂಘದ ಎಲ್ಲಾ ಪದಾಧಿಕಾರಿಗಳು ಹಾಗೂ ಮುಂಖಡರುಗಳು ಮತ್ತು ಸಾರ್ವಜನಿಕರು ಕಾರ್ಯಕ್ರಮದಲ್ಲಿ ವಿಶೇಷ ಆಹ್ವಾನಿತರಾಗಿ ಭಾಗವಹಿಸಲಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿ ಆರ್.ಲತಾ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ರೇವಣಪ್ಪ, ಜಿಲ್ಲಾ ಪೊಲೀಸ್ ಅಧೀಕ್ಷಕ ಮಲ್ಲಿಕಾರ್ಜುನ ಬಾಲದಂಡಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಆರ್.ಗೀತಾ ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ತೇಜಸ್‌ಕುಮಾರ್, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಗೌರವಾಧ್ಯಕ್ಷ ಆರ್.ಮುನಿಶಾಮಪ್ಪ, ಪ್ರಧಾನ ಕಾರ್ಯದರ್ಶಿ ಪಿ.ಗಂಗಾಧರಪ್ಪ, ಖಜಾಂಚಿ ಮೊಹಮ್ಮದ್ ಮಿಜಾಮಿಲ್, ಹಿರಿಯ ಉಪಾಧ್ಯಕ್ಷ ರವಿಶಂಕರ್, ರಾಜ್ಯ ಪರಿಷತ್ ಸದಸ್ಯ ಅರುಳ್‌ಸಂತೋಷ್, ನೆಲಮಂಗಲ ತಾಲ್ಲೂಕು ಅಧ್ಯಕ್ಷ ವಾಸುದೇವಮೂರ್ತಿ, ದೊಡ್ಡಬಳ್ಳಾಪುರ ತಾಲ್ಲೂಕು ಅಧ್ಯಕ್ಷ ಲಕ್ಷ್ಮಿ ನರಸಿಂಹ. ಎನ್ ಅವರು ಭಾಗವಹಿಸಲಿದ್ದಾರೆ.
BREAKING NEWS : ನಟ ಡಾ. ‘ವಿಷ್ಣುವರ್ಧನ್ ಸ್ಮಾರಕ’ ಲೋಕಾರ್ಪಣೆಗೊಳಿಸಿದ ಸಿಎಂ ಬೊಮ್ಮಾಯಿ