ಬೆಂಗಳೂರು: ಚಿಕ್ಕಬಳ್ಳಾಪುರ ಸಂಸದ ಡಾ.ಕೆ.ಸುಧಾಕರ್ ಅಭಿನಂದನಾ ಸಮಾರಂಭದಲ್ಲಿ ಮದ್ಯ ವಿತರಿಸಿದ ಆರೋಪದ ಮೇಲೆ ನೆಲಮಂಗಲದ ಬಿಜೆಪಿ ಅಧ್ಯಕ್ಷ ಜಗದೀಶ್ ಚೌಧರಿ ಅವರನ್ನು ಪಕ್ಷದಿಂದ ಆರು ವರ್ಷಗಳ ಕಾಲ ಉಚ್ಚಾಟಿಸಲಾಗಿದೆ. ಆದರೇ ಅವರ ಉಚ್ಚಾಟನೆಯನ್ನು ರದ್ದುಗೊಳಿಸಲಾಗಿದ್ದು, ಈಗ ನೆಲಮಂಗಲ ಬಿಜೆಪಿ ಅಧ್ಯಕ್ಷರಾಗಿ ಜಗದೀಶ್ ಚೌಧರಿ ಅವರನ್ನು ನೇಮಕ ಮಾಡಲಾಗಿದೆ.
ಜುಲೈ 7 ರಂದು ನೆಲಮಂಗಲದಲ್ಲಿ ಆಯೋಜಿಸಲಾಗಿದ್ದ ಚಿಕ್ಕಬಳ್ಳಾಪುರ ಸಂಸದ ಡಾ. ಕೆ. ಸುಧಾಕರ್ ಸನ್ಮಾನ ಸಮಾರಂಭದಲ್ಲಿ ಘಟನೆ ನಡೆದಿತ್ತು. ಕಾರ್ಯಕ್ರಮಕ್ಕೆ ಆಗಮಿಸಿದ್ದ ಸಾರ್ವಜನಿಕರಿಗೆ ಮದ್ಯ ಹಂಚಿಕೆ ಮಾಡಲಾಗಿತ್ತು. ಅಲ್ಲದೇ, ಎಣ್ಣೆಗಾಗಿ ಸಾರ್ವಜನಿಕರು ಸಹ ಮುಗಿಬಿದ್ದಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಭಾರೀ ಟೀಕೆಗಳು ವ್ಯಕ್ತವಾಗಿದ್ದವು.
ಈ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸೂಚನೆ ಮೇರೆಗೆ ಜಗದೀಶ್ ಚೌಧರಿ ಅವರನ್ನು 6 ವರ್ಷಗಳ ಕಾಲ ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ. ಆದರೇ ಇಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರ ಸೂಚನೆಯ ಮೇರೆಗೆ ನೆಲಮಂಗಲ ಬಿಜೆಪಿ ಅಧ್ಯಕ್ಷರನ್ನಾಗಿ ಜಗದೀಶ್ ಚೌಧರಿ ಅವರನ್ನು ಮರು ನೇಮಕ ಮಾಡಿ ಆದೇಶಿಸಲಾಗಿದೆ.
ಆರ್ಟಿಕಲ್ 17ಎ ನಿಯಮ ಗಾಳಿಗೆ ತೂರಿ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ: ಸಚಿವ ಪ್ರಿಯಾಂಕ್ ಖರ್ಗೆ ಕಿಡಿ
ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್ : ಸರ್ಕಾರದಿಂದ ಸಿಗಲಿದೆ ಬಡ್ಡಿ ರಹಿತ 5 ಲಕ್ಷ ರೂ.ವರೆಗೆ ಸಾಲ!