ಬೆಂಗಳೂರು: ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಟಿಕೆಟ್ ಸಿಗದ ಕಾರಣಕ್ಕೆ ಬಿಜೆಪಿ ತೊರೆದು, ಕಾಂಗ್ರೆಸ್ ಪಕ್ಷವನ್ನು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಸೇರಿದ್ದರು. ಇಂದು ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿಯನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಸೇರ್ಪಡೆಗೊಂಡಿದ್ದರು. ಇಂತಹ ಅವರು ಇದೀಗ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆಯನ್ನು ಸಲ್ಲಿಸಿದ್ದಾರೆ.
ನವದೆಹಲಿಯಿಂದ ಬೆಂಗಳೂರಿಗೆ ಆಗಮಿಸಿದಂತ ಅವರು ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರನ್ನು ಭೇಟಿಯಾಗಿ, ತಮ್ಮ ಸ್ವ ಹಸ್ತಾಕ್ಷರದಲ್ಲಿ ಬರೆದಿರುವಂತ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ಪತ್ರವನ್ನು ಸಲ್ಲಿಸಿದರು. ಜಗದೀಶ್ ಶೆಟ್ಟರ್ ಅವರಿಂದ ರಾಜೀನಾಮೆ ಪತ್ರವನ್ನು ಸ್ವೀಕರಿಸಿದಂತ ಸಭಾಪತಿ ಬಸವರಾಜ ಹೊರಟ್ಟಿಯವರು ಅವರ ರಾಜೀನಾಮೆಯನ್ನು ಅಂಗೀಕರಿಸಿದರು.
ಅವರು ಸಭಾಪತಿ ಬಸವರಾಜ ಹೊರಟ್ಟಿಗೆ ಸಲ್ಲಿಸಿರುವಂತ ರಾಜೀನಾಮೆ ಪತ್ರದಲ್ಲಿ ನಾನು ದಿನಾಂಕ 25-01-2024ರಂದು ಪರಿಷತ್ತಿನಲ್ಲಿ ನನ್ನ ಸದಸ್ಯ ಸ್ಥಾನಕ್ಕೆ ರಾಜೀನಾಮೆಯನ್ನು ನೀಡುತ್ತಿದ್ದೇನೆ ಎಂಬುದಾಗಿ ತಿಳಿಸಿದ್ದಾರೆ.
ಮತ್ತೆ ಬಿಜೆಪಿ ಸೇರಿದ ಬಳಿಕ ‘ಮಾಜಿ ಸಿಎಂ ಜಗದೀಶ್ ಶೆಟ್ಟರ್’ ಹೇಳಿದ್ದೇನು ಗೊತ್ತಾ.?
ನವದೆಹಲಿ: ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ತೊರೆದು, ಕಾಂಗ್ರೆಸ್ ಪಕ್ಷ ಸೇರಿದ್ದಂತ ಜಗದೀಶ್ ಶೆಟ್ಟರ್ ಮತ್ತೆ ಇಂದು ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ಈ ಬಳಿಕ ಅವರು ಏನು ಹೇಳಿದ್ರು ಅಂತ ಮುಂದೆ ಓದಿ.
ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದಂತ ಜಗದೀಶ್ ಶೆಟ್ಟರ್ ಅವರು, ಬಿಜೆಪಿ ಶಾಸಕರು, ಮಾಜಿ ಶಾಸಕರು, ಮುಖಂಡರು, ಕಾರ್ಯಕರ್ತರು ನಾನು ಮತ್ತೆ ಬಿಜೆಪಿ ಸೇರಬೇಕೆಂದು ಅಪೇಕ್ಷೆ ವ್ಯಕ್ತಪಡಿಸಿದ್ದರು. ರಾಷ್ಟ್ರೀಯ ನಾಯಕರೂ ಅದೇ ಆಶಯ ವ್ಯಕ್ತಪಡಿಸಿದರು. ಬಿಜೆಪಿ ಪುನರ್ ಸೇರ್ಪಡೆ ಸಂತೋಷದ ಸಂಗತಿ ಎಂದರು.
ಕಾಂಗ್ರೆಸ್ ಪಕ್ಷದಿಂದ ವಿಧಾನ ಪರಿಷತ್ ಸದಸ್ಯತ್ವಕ್ಕೆ ಆಯ್ಕೆಯಾಗಿದ್ದು, ಆ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದೇನೆ. ಇ ಮೇಲ್ ಮೂಲಕ ಅದನ್ನು ತಿಳಿಸಿದ್ದೇನೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೂ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಕೊಟ್ಟಿದ್ದನ್ನು ಇ ಮೇಲ್ ಮೂಲಕ ಕಳಿಸಿದ್ದೇನೆ. ರಾಜೀನಾಮೆ ಪತ್ರ ಕಳಿಸುವ ವ್ಯವಸ್ಥೆ ಮಾಡಿದ್ದೇನೆ ಎಂದು ವಿವರಿಸಿದರು.
BREAKING: ಖ್ಯಾತ ಸಂಗೀತ ನಿರ್ದೇಶಕ ಇಳಯರಾಜಾ ಪುತ್ರಿ ‘ಭವತಾರಿಣಿ’ ವಿಧಿವಶ | Bhavatharini Passes Away
‘ಜ್ಞಾನವಾಪಿ’ ಮಸೀದಿಯನ್ನು ‘ಹಿಂದೂ ದೇವಾಲಯ’ದ ಮೇಲೆ ನಿರ್ಮಿಸಲಾಗಿದೆ: ASI ವರದಿ