ಬೆಂಗಳೂರು: ಹಿರಿಯ ಮುಖಂಡ ಜಗದೀಶ್ ಶೆಟ್ಟರ್ ಅವರು ಕಾಂಗ್ರೆಸ್ ಪಕ್ಷವನ್ನು ತೊರೆದು ಬಿಜೆಪಿ ಸೇರಿದ್ದರಿಂದ ಪಕ್ಷಕ್ಕೆ ಹೆಚ್ಚಿನ ಶಕ್ತಿ ಬಂದಂತಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದರು.
ದೆಹಲಿಯಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಶೆಟ್ಟರ್ ಅವರು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ, ತಮ್ಮ ವಿಧಾನಪರಿಷತ್ ಸ್ಥಾನಕ್ಕೂ ರಾಜೀನಾಮೆ ನೀಡಿ ಮತ್ತೊಮ್ಮೆ ಬಿಜೆಪಿ ಸೇರಿದ್ದಾರೆ. ಅವರ ಮನೆಗೇ ಅವರು ಮರಳಿ ಬಂದಿದ್ದಾರೆ ಎಂದು ವಿಶ್ಲೇಷಿಸಿದರು.
ರಾಜ್ಯ ಬಿಜೆಪಿ ಬೆಳವಣಿಗೆ ದೃಷ್ಟಿಯಿಂದ ಇದೊಂದು ದೊಡ್ಡ ಶಕ್ತಿ ಎಂದ ಅವರು, ಪಕ್ಷದ ಹಿರಿಯರು, ಕಾರ್ಯಕರ್ತರ ಅಪೇಕ್ಷೆ ಇದಾಗಿತ್ತು. ಈ ಕುರಿತು ಹಲವಾರು ದಿನಗಳಿಂದ ಚರ್ಚೆ ಆಗಿತ್ತು. ಇವತ್ತು ಬೆಳಿಗ್ಗೆ ಬಿಜೆಪಿ ವರಿಷ್ಠರಾದ, ಮಾನ್ಯ ಗೃಹ ಸಚಿವ ಅಮಿತ್ ಶಾ ಅವರನ್ನು ಬಿ.ಎಸ್.ಯಡಿಯೂರಪ್ಪ, ಜಗದೀಶ್ ಶೆಟ್ಟರ್ ಮತ್ತಿತರ ಹಿರಿಯರೊಂದಿಗೆ ಭೇಟಿ ಮಾಡಿ, ಚರ್ಚಿಸಿ ಯಾವುದೇ ಅಪೇಕ್ಷೆ ಇಲ್ಲದೆ ಬಿಜೆಪಿ ಸೇರಿದ್ದಾರೆ ಎಂದು ತಿಳಿಸಿದರು.
ರಾಷ್ಟ್ರೀಯ ಅಧ್ಯಕ್ಷ ನಡ್ಡಾಜೀ, ಅಮಿತ್ ಶಾಜೀ, ರಾಜ್ಯದ ಕಾರ್ಯಕರ್ತರು ಅವರ ಮರಳುವಿಕೆಗೆ ಸಂತೋಷ ವ್ಯಕ್ತಪಡಿಸಿದ್ದಾರೆ ಎಂದು ಹೇಳಿದರು.
BIGG NEWS: ʻMLC ಸ್ಥಾನ’ಕ್ಕೂ ‘ಮಾಜಿ ಸಿಎಂ ಜಗದೀಶ್ ಶೆಟ್ಟರ್’ ರಾಜೀನಾಮೆ
ಶೆಟ್ಟರ್ ಬಿಜೆಪಿಗೆ ಮರು ಸೇರ್ಪಡೆ ವಿಚಾರ : ಕಾಂಗ್ರೆಸ್ ಪಕ್ಷದಿಂದ ಯಾವುದೇ ರೀತಿಯಾಗಿ ಅನ್ಯಾಯವಾಗಿಲ್ಲ : ಸಿಎಂ ಹೇಳಿಕೆ