ಹೈದರಾಬಾದ್: ಆರಂಭಿಕ ಪ್ರವೃತ್ತಿಗಳ ಪ್ರಕಾರ, ಟಿಡಿಪಿ 127 ಸ್ಥಾನಗಳಲ್ಲಿ ಮತ್ತು ಬಿಜೆಪಿ 7 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿರುವುದರಿಂದ ಆಂಧ್ರಪ್ರದೇಶದಲ್ಲಿ ತೆಲುಗು ದೇಶಂ ಪಕ್ಷ ಮತ್ತು ಭಾರತೀಯ ಜನತಾ ಪಕ್ಷದ ಮೈತ್ರಿ ಸರ್ಕಾರ ರಚಿಸುವ ಸಾಧ್ಯತೆಯಿದೆ.
ಇನ್ನೂ ಆಂದ್ರಪ್ರದೇಶದ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ತಮ್ಮ ಸಿಎಂ ಸ್ಥಾನಕ್ಕೆ ರಾಜಿನಾಮೇ ನೀಡುವ ಸಾಧ್ಯತೆ ಇದೆ.ಕೆಲವೇ ಕ್ಷಣಗಳಲ್ಲಿ ರಾಜಪಾಲರನ್ನು ಭೇಟಿಯಾಗಿ ರಾಜೀನಾಮೆ ಸಲ್ಲಿಸುವ ಸಾಧ್ಯತೆ ಇದೆ.
ಚಂದ್ರಬಾಬು ನಾಯ್ಡು ಜೂನ್ 9 ರಂದು ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.