ಬೆಂಗಳೂರು : ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ವಿರುದ್ಧ ಆಗಾಗ ಸುಳ್ಳು ಸುದ್ದಿ ಹಾಗೂ ಅವಹೇಳನಕಾರಿ ಪ್ರಚಾರ ಮಾಡುತ್ತಿರುವವರಿಗೆ ಇದೀಗ ನಟ ಜಗ್ಗೇಶ್ ಅಂತವರಿಗೆ ಬಿಸಿ ಮುಟ್ಟಿಸಿದ್ದು, ಇಂಥವರ ವಿರುದ್ಧ ಜಗ್ಗೇಶ್ ಕೋರ್ಟ್ ಮೊರೆ ಹೋಗಿದ್ದಾರೆ. ತಮ್ಮ ವಿರುದ್ಧ ಅವಹೇಳನಾಕಾರಿ ಸುದ್ದಿ ಪ್ರಕಟ ಮಾಡದಂತೆ ತಡೆಯಾಜ್ಞೆ ತಂದಿದ್ದಾರೆ.
ಸಿಟಿ ಸಿವಿಲ್ ಹಾಗೂ ಸೆಷನ್ ನ್ಯಾಯಾಲಯದ ಆದೇಶದ ಪ್ರಕಾರ ಜಗ್ಗೇಶ್ ವಿರುದ್ಧ ಸುದ್ದಿಯನ್ನು ಅಥವಾ ಪ್ರಮಾಣಿಕರಿಸದ ಸುದ್ದಿಯನ್ನು ಮಾನಹಾನಿ ಆಗುವ ರೀತಿಯಲ್ಲಿ, ಅವಹೇಳನಕಾರಿಯಾಗಿ ಬಿತ್ತರಿಸುವಂತಿಲ್ಲ.ಇದು ತಾತ್ಕಾಲಿಕ ಆದೇಶವಾಗಿದೆ. ಏಪ್ರಿಲ್ 25ಕ್ಕೆ ಮುಂದಿನ ವಿಚಾರಣೆ ಇದೆ. ಜಗ್ಗೇಶ್ ಪರ ವಕೀಲರು ಇದನ್ನು ಎಲ್ಲರ ಗಮನಕ್ಕೆ ತಂದಿದ್ದಾರೆ.
‘ಕರ್ನಾಟಕ ದ್ರಾಕ್ಷಾರಸ ಮಂಡಳಿ’ಯ ಅಧ್ಯಕ್ಷರಾಗಿ ‘ಡಾ.ಬಿ ಯೋಗೇಶ್ ಬಾಬು’ ನೇಮಿಸಿ ‘ಸಿಎಂ ಸಿದ್ಧರಾಮಯ್ಯ’ ಆದೇಶ
ನಟ ಜಗ್ಗೇಶ್ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರು ಅಭಿಮಾನಿಗಳ ಪ್ರಶ್ನೆಗೆ ಹಲವು ಬಾರಿ ಉತ್ತರಿಸಿದ್ದಿದೆ. ಇದರ ಜೊತೆಗೆ ಅವರು ತಮ್ಮ ಸಿನಿಮಾಗಳ ಬಗ್ಗೆ, ರಾಜಕೀಯ ವಿಚಾರಗಳ ಬಗ್ಗೆ ಅಭಿಪ್ರಾಯ ಹಂಚಿಕೊಳ್ಳುತ್ತಾ ಇರುತ್ತಾರೆ. ಇದೇ ಸೋಶಿಯಲ್ ಮೀಡಿಯಾದಲ್ಲಿ ಜಗ್ಗೇಶ್ ಬಗ್ಗೆ ಕೆಲವರು ಅಪಪ್ರಚಾರ ಮಾಡಿದ್ದಿದೆ. ಕೆಲವು ಸುದ್ದಿ ಮಾಧ್ಯಮಗಳು ಜಗ್ಗೇಶ್ನ ಟೀಕಿಸಿದ್ದಿದೆ. ಇದಕ್ಕೆ ಜಗ್ಗೇಶ್ ಅವರು ತಮ್ಮದೇ ರೀತಿಯಲ್ಲಿ ಪ್ರತ್ಯುತ್ತರ ನೀಡಿದ್ದಾರೆ.