ಬೆಂಗಳೂರು: ಇತ್ತೀಚಿಗೆ ಕರ್ನಾಟಕ ಲೋಕಸೇವಾ ಆಯೋಗದ (KPSC) ವಿಳಂಬ ನೀತಿಯನ್ನು ವಿರೋಧಿಸಿ ಅನೇಕ ಅಭ್ಯರ್ಥಿಗಳು ಕಛೇರಿ ಎದುರುಗಡೆ ಮಡಕೆ ಇಟ್ಟು ಪ್ರತಿಭಟನೆ ನಡೆಸಿದ್ದರು.ಈ ವೇಳೆ ವಿದ್ಯಾರ್ಥಿ ಮುಖಂಡ ಕಾಂತಕುಮಾರ್ ಅನ್ನು ಪೊಲೀಸರು ಬಂಧಿಸಿದಕ್ಕೆ ಇದೀಗ ಅಭ್ಯರ್ಥಿಗಳು ಕಿಡಿ ಕಾರಿದ್ದಾರೆ.
ಕರ್ನಾಟಕ ಲೋಕಸೇವಾ ಆಯೋಗದ ವಿಳಂಬ ನೀತಿ ವಿರುದ್ಧ ಕಚೇರಿ ಎದುರು ಮಡಿಕೆ ಇಟ್ಟು ಪ್ರತಿಭಟನೆ ನಡೆಸಿದ ವಿದ್ಯಾರ್ಥಿ ಮುಖಂಡ ಕಾಂತಕುಮಾರ್ ಅವರನ್ನು ಬಂಧಿಸಿ ಜೈಲಿಗೆ ಕಳುಹಿಸಿರುವ ಪೊಲೀಸ್ ಕ್ರಮಕ್ಕೆ ಅಭ್ಯರ್ಥಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಶುಕ್ರವಾರ ಏಕಾಂಗಿಯಾಗಿ ಪ್ರತಿಭಟನೆ ನಡೆಸುತ್ತಿದ್ದಾಗ ಕಾಂತಕುಮಾರ್ ರನ್ನು ಎಳೆದುಕೊಂಡು ಹೋಗಿ ಜಾಮೀನು ರಹಿತ ಪ್ರಕರಣ ದಾಖಲಿಸಿರುವ ವಿಧಾನಸೌಧ ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಜಾಮೀನು ರಹಿತ ಸೆಕ್ಷೆನ್‌ಗಳ ಅಡಿ ಎಫ್‌ಐಆರ್ ದಾಖಲಿಸಿರುವ ಪೊಲೀಸರ ಕ್ರಮಕ್ಕೆ ಜಾಲತಾಣಗಳಲ್ಲಿ ಆಕಾಂಕ್ಷಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೆಪಿಎಸ್‌ಸಿ ಕಾಲಮಿತಿಯಲ್ಲಿ ಕೆಲಸ ಮಾಡಿದ್ದರೆ ಪ್ರತಿಭಟನೆ ಮಾಡುವ ಪರಿಸ್ಥಿತಿ ಬರುತ್ತಿರಲಿಲ್ಲ ಎಂದು ಆಕ್ಷಾಂಕ್ಷಿಗಳು ಬೇಸರ ವ್ಯಕ್ತಪಡಿಸಿದ್ದಾರೆ.ಅಲ್ಲದೆ ಜಾಮೀನು ರಹಿತ ಸೆಕ್ಷೆನ್‌ಗಳ ಅಡಿ ಎಫ್‌ಐಆರ್ ದಾಖಲಿಸಿರುವ ಪೊಲೀಸರ ಕ್ರಮಕ್ಕೆ ಆಕಾಂಕ್ಷಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.