ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್ ಮಂಗಳವಾರ ಬೀಜಿಂಗ್ನಲ್ಲಿ ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರನ್ನು ಭೇಟಿಯಾದರು. 2020 ರ ಜೂನ್ನಲ್ಲಿ ಗಾಲ್ವಾನ್ ಕಣಿವೆ ಘರ್ಷಣೆಯ ನಂತರ ಉಭಯ ನಾಯಕರ ನಡುವಿನ ಮೊದಲ ಸಭೆ ಇದಾಗಿದೆ.
ಶಾಂಘೈ ಸಹಕಾರ ಸಂಘಟನೆಯ ಸಭೆಯಲ್ಲಿ ಭಾಗವಹಿಸುವ ವಿದೇಶಾಂಗ ಸಚಿವರ ನಿಯೋಗದ ಭಾಗವಾಗಿ ಮಂಗಳವಾರ ಚೀನಾದ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರನ್ನು ಭೇಟಿಯಾದೆ ಎಂದು ಜೈಶಂಕರ್ ಹೇಳಿದರು.
“ನಮ್ಮ ದ್ವಿಪಕ್ಷೀಯ ಸಂಬಂಧಗಳ ಇತ್ತೀಚಿನ ಬೆಳವಣಿಗೆಯ ಬಗ್ಗೆ ಅಧ್ಯಕ್ಷ ಕ್ಸಿ ಅವರಿಗೆ ತಿಳಿಸಲಾಗಿದೆ” ಎಂದು ಜೈಶಂಕರ್ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ.