ನವದೆಹಲಿ: ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಅವರು ನವೆಂಬರ್ 7 ಮತ್ತು 8 ರಂದು ರಷ್ಯಾದ ಒಕ್ಕೂಟಕ್ಕೆ ಭೇಟಿ ನೀಡಲಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಮಾಹಿತಿ ನೀಡಿದೆ.
ಸಚಿವ ಜೈಶಂಕರ್ ಅವರು ರಷ್ಯಾದ ವಿದೇಶಾಂಗ ಸಚಿವ ಸೆರ್ಗೆ ಲಾವ್ರೊವ್ ಅವರನ್ನು ಭೇಟಿಯಾಗಲಿದ್ದಾರೆ. 2021 ರಲ್ಲಿ ನಾಯಕರು ನಾಲ್ಕು ಬಾರಿ ಭೇಟಿಯಾಗಿದ್ದರು.
ಇದರ ಜೊತೆಗೆ ಪ್ರಧಾನಿ ಮೋದಿ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಂತಹ ಇತರ ಹಿರಿಯ ಮಂತ್ರಿಗಳು ತಮ್ಮ ರಷ್ಯಾದ ಸಹವರ್ತಿಗಳನ್ನು ನಿಯಮಿತವಾಗಿ ಭೇಟಿ ಮಾಡಿದ್ದಾರೆ.
ಸಚಿವರ ಭೇಟಿಯಲ್ಲಿ ದ್ವಿಪಕ್ಷೀಯ ವಿಷಯಗಳ ಜೊತೆಗೆ ವಿವಿಧ ಪ್ರಾದೇಶಿಕ ಮತ್ತು ಅಂತಾರಾಷ್ಟ್ರೀಯ ಬೆಳವಣಿಗೆಗಳ ಕುರಿತು ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಳ್ಳುವ ನಿರೀಕ್ಷೆಯಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಪತ್ರಿಕಾ ಹೇಳಿಕೆ ತಿಳಿಸಿದೆ.
ಜೈಶಂಕರ್ ಅವರು ರಷ್ಯಾದ ಒಕ್ಕೂಟದ ಉಪ ಪ್ರಧಾನ ಮಂತ್ರಿ ಮತ್ತು ವ್ಯಾಪಾರ ಮತ್ತು ಕೈಗಾರಿಕಾ ಸಚಿವ ಎಚ್.ಇ. ಡೆನಿಸ್ ಮಂಟುರೊವ್ ಅವರನ್ನು ಭೇಟಿ ಮಾಡಲಿದ್ದು, ವ್ಯಾಪಾರ, ಆರ್ಥಿಕ, ವೈಜ್ಞಾನಿಕ, ತಾಂತ್ರಿಕ ಮತ್ತು ಸಾಂಸ್ಕೃತಿಕ ಸಹಕಾರ (IRIGC-TEC) ಕುರಿತ ಭಾರತ-ರಷ್ಯಾ ಅಂತರ-ಸರ್ಕಾರಿ ಆಯೋಗದ ದ್ವಿಪಕ್ಷೀಯ ಆರ್ಥಿಕ ಸಹಕಾರಕ್ಕೆ ಸಂಬಂಧಿಸಿದ ವಿಷಯಗಳ ಬಗ್ಗೆ ಚರ್ಚಿಸಲಿದ್ದಾರೆ ಎನ್ನಲಾಗುತ್ತಿದೆ.