ಮಂಗಳೂರು: ಸುರತ್ಕಲ್ನಲ್ಲಿ ದುಷ್ಕರ್ಮಿಗಳಿಬ್ಬರು ಜಲೀಲ್ ಹತ್ಯೆಗೈದು ಪರಾರಿಯಾಗಿದ್ದರು.
BREAKING ಮೈಸೂರಿನಲ್ಲಿ ಪ್ರಧಾನಿ ಮೋದಿ ಸಹೋದರ ಪ್ರಯಾಣಿಸುತ್ತಿದ್ದ ಕಾರು ಅಪಘಾತ, ಇಬ್ಬರಿಗೆ ಗಂಭಿರ ಗಾಯ
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಜಾಗ್ರತ ಕ್ರಮವಾಗಿ ಭಾನುವಾರ ಬೆಳಗ್ಗಿನಿಂದಲೇ ಸುರತ್ಕಲ್ ಸುತ್ತಮುತ್ತಲಿನ ನಾಲ್ಕು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಿದ್ದರು. ಇದೀಗ ಪರಿಸ್ಥಿತಿ ಇನ್ನೂ ತಿಳಿಯಾಗದೇ ಹಿನ್ನೆಲೆ ಈ ನಿಷೇಧಾಜ್ಞೆಯನ್ನು ವಿಸ್ತರಿಸಿ ಆದೇಶ ಹೊರಡಿಸಿದ್ದಾರೆ.
ಇಂದು ಬೆಳಗ್ಗೆ 6 ಗಂಟೆಯಿಂದ ಡಿ. 29ರ ಬೆಳಗ್ಗೆ 6 ಗಂಟೆಯವರೆಗೆ ಈ ನಿಷೇಧಾಜ್ಞೆ ಜಾರಿಯಲ್ಲಿರಲಿದೆ. ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಸುರತ್ಕಲ್, ಬಜಪೆ, ಕಾವೂರು ಮತ್ತು ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿಷೇದಾಜ್ಞೆಯನ್ನು ಜಾರಿಗೊಳಿಸಿ ಮಂಗಳೂರು ನಗರ ಪೊಲೀಸ್ ಕಮಿಷನರ್ ಶಶಿಕುಮಾರ್ ಆದೇಶಿಸಿದ್ದರು.