ಮಂಡ್ಯ: ಜಿಲ್ಲೆಯ ಮಳವಳ್ಳಿ ಬಾಲಕಿ ಮೇಲೆ ಅತ್ಯಾಚಾರ , ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಖಾನ್ ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ.
BIGG NEWS: ರಾಜ್ಯದಲ್ಲಿ 5 ದಿನ ರಾಜ್ಯದಲ್ಲಿ ಭಾರಿ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ
ಮಂಡ್ಯ ಜಿಲ್ಲೆ ಮಳವಳ್ಳಿ ಪಟ್ಟಣದ ಮೈಸೂರು ರಸ್ತೆಯಲ್ಲಿರುವ ಬಾಲಕಿ ನಿವಾಸಕ್ಕೆ ತೆರಳಿ ಸಾಂತ್ವನ ಹೇಳಿದ್ದಾರೆ. ಇದೇ ವೇಳೆ ಮೃತ ಬಾಲಕಿ ಕುಟುಂಬಕ್ಕೆ ಶಾಸಕ ಜಮೀರ್ 5 ಲಕ್ಷ ರೂಪಾಯಿ ಪರಿಹಾರ ನೀಡಿದ್ದಾರೆ.
ಬಳಿಕ ಮಾತನಾಡಿದ ಜಮೀರ್ ಖಾನ್, ಕೃತ್ಯ ಎಸಗಿದ ಪಾಪಿಯನ್ನು ಸಾರ್ವಜನಿಕರ ಮುಂದೆ ತುಂಡು ತುಂಡಾಗಿ ಕತ್ತರಿಸಬೇಕು. ಬಾಲಕಿ ಪೋಷಕರ ಗೋಳು ನೋಡಲಾಗುತ್ತಿಲ್ಲ. ಮನುಷ್ಯರು ಯಾರೂ ಈ ಕೃತ್ಯ ಮಾಡಲ್ಲ. ಅವನು ಮನುಷ್ಯಲ್ಲ ರಾಕ್ಷಸನಿಗಿಂತ ಹೆಚ್ಚು. ಈಗ ಕಠಿಣ ಕಾನೂನು ತರದಿದ್ರೆ ಈ ರೀತಿಯ ಘಟನೆ ನಡೆಯುತ್ತಲೇ ಇರುತ್ತದೆ. ಈ ಪ್ರಕರಣಗಳಿಗೆ ಪ್ರತ್ಯೇಕ ಕಾನೂನು ತರಬೇಕು ಎಂದು ಸರ್ಕಾರಕ್ಕೆ ಜಮೀರ್ ಒತ್ತಾಯಿಸಿದ್ದಾರೆ.