ಮಂಡ್ಯ: ಶ್ರೀರಂಗಪಟ್ಟಣದಲ್ಲಿ ಜಾಮಿಯಾ ಮಸೀದಿ ವಿವಾದಕ್ಕೆ ವಿಚಾರವಾಗಿ ಕೆಣಕಿ ಬಿಜೆಪಿ ಧರ್ಮದ ಹೆಸರಿನಲ್ಲಿ ಭಾವನಾತ್ಮಕವಾಗಿ ರಾಜಕೀಯ ಮಾಡಲು ಹೊರಟಿದೆ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.
BIGG NEWS: ಟಿ. ನರಸೀಪುರದಲ್ಲಿ ಹೆಚ್ಚಾದ ಚಿರತೆ ಹಾವಳಿ; ನಿದ್ದೆಗೆಡಿಸಿದ್ದ ಕೊನೆಗೂ ಚಿರತೆ ಸೆರೆ
ನಗರದಲ್ಲಿ ಮಾತನಾಡಿದ ಅವರು, ಬಿಜೆಪಿ ಅವರಿಗೆ ಅಭಿವೃದ್ಧಿ ಬೇಕಾಗಿಲ್ಲ. ಅವರಿಗೆ ಧರ್ಮದ ವಿಚಾರ ಬಳಕೆ ಮಾಡಿಕೊಂಡು ರಾಜಕೀಯ ಮಾಡುವುದು ಮಾತ್ರ ಗೊತ್ತು. ಆ ಕಾರಣಕ್ಕಾಗಿಯೇ ಅವರು ಶ್ರೀರಂಗಪಟ್ಟಣದ ಜಾಮಿಯಾ ಮಸೀದಿ ವಿವಾದವನ್ನು ಕೆಣಕುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಮಂಡ್ಯ ಜಿಲ್ಲೆ ಕರಾವಳಿ ಪ್ರದೇಶವಲ್ಲ, ಕರಾವಳಿ ಪ್ರದೇಶದ ಜನರ ಜೀವನ ಶೈಲಿ ಹಾಗೂ ವಾತಾವರಣ ಬೇರೆ. ಮಂಡ್ಯ ಜಿಲ್ಲೆಯ ಜನರ ಜೀವನ ಶೈಲಿ ಮತ್ತು ವಾತಾವರಣವೇ ಬೇರೆ ಹೇಳಿದ್ದಾರೆ.