ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ನ ಗುಡಾರ್ ಅರಣ್ಯ ಪ್ರದೇಶದಲ್ಲಿ ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಯ ಸಂದರ್ಭದಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಎನ್ಕೌಂಟರ್ನಲ್ಲಿ ಭಾರತೀಯ ಸೇನಾ ಯೋಧ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರ ಪೊಲೀಸ್, ಭಾರತೀಯ ಸೇನೆ ಮತ್ತು ಸಿಆರ್ಪಿಎಫ್ ಸಿಬ್ಬಂದಿ ಜಂಟಿ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದಾರೆ ಎಂದು ಕಾಶ್ಮೀರ ವಲಯ ಪೊಲೀಸರು ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ.