ನವದೆಹಲಿ : ಅಕ್ರಮ ಗಣಿ ಹಗರಣ ಪ್ರಕರಣ ಎದುರಿಸುತ್ತಿರುವ ಗಣಿಧಣಿ ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿ ಬಳ್ಳಾರಿಗೆ ಹೋಗಲು ಅವಕಾಶ ಕೊಡಿ ಎಂದು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ.
ಈ ಕುರಿತು ಕೋರ್ಟ್ ಗೆ ಮನವಿ ಮಾಡಿರುವ ‘ಗಾಲಿ ಜನಾರ್ಧನ ರೆಡ್ಡಿ’ಕೆಲವು ದಿನಗಳಲ್ಲೇ ತನ್ನ ಮಗಳಿಗೆ ಹೆರಿಗೆಯಾಗಲಿದೆ. ಇಂತಹ ಪರಿಸ್ಥಿತಿಯಲ್ಲಿ ಕನಿಷ್ಠ ಒಂದು ತಿಂಗಳಾದರೂ ತನಗೆ ಬಳ್ಳಾರಿಗೆ ಹೋಗಲು ಅನುಮತಿ ನೀಡುವಂತೆ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಸುಪ್ರೀಂ ಕೋರ್ಟ್ಗೆ ಮನವಿ ಮಾಡಿದ್ದಾರೆ.
ಸಿಬಿಐ ಎರಡು ತಿಂಗಳ ಕಾಲ ಜನಾರ್ದನ ರೆಡ್ಡಿ ಬಳ್ಳಾರಿಯಲ್ಲಿ ವಾಸ್ತವ್ಯ ಹೂಡಲು ಆಕ್ಷೇಪ ವ್ಯಕ್ತಪಡಿಸಿತ್ತು. ಇನ್ನು ನ್ಯಾ. ಎಂಆರ್.ಶಾ ನೇತೃತ್ವದ ದ್ವಿಸದಸ್ಯ ಪೀಠವು ಅರ್ಜಿ ವಿಚಾರಣೆಯನ್ನು ಕೈಗೆತ್ತಿಕೊಂಡಿದ್ದು, ಇಂದು ಶುಕ್ರವಾರ ವಿಚಾರಣೆ ನಡೆಸಲಿದೆ.
ಬಹುಕೋಟಿ ಗಣಿ ಹಗರಣಕ್ಕೆ ಸಂಬಂಧಿಸಿದಂತೆ 2009ರಲ್ಲಿ ಗಾಲಿ ಜನಾರ್ದನ ರೆಡ್ಡಿಗೆ ಜಾಮೀನು ನೀಡಿದ್ದ ಸುಪ್ರೀಂ ಕೋರ್ಟ್ ಕರ್ನಾಟಕದ ಬಳ್ಳಾರಿ, ಆಂಧ್ರಪ್ರದೇಶದ ಕಡಪಾ ಮತ್ತು ಅನಂತಪುರ ಜಿಲ್ಲೆಗಳಿಗೆ ಪ್ರವೇಶಿಸದಂತೆ ಕಠಿಣ ನಿರ್ಬಂಧ ಹೇರಿತ್ತು, ಈ ಹಿನ್ನೆಲೆ ಗಾಲಿ ಜನಾರ್ಧನ ರೆಡ್ಡಿ ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಿದ್ದಾರೆ.
ಸರ್ಕಾರವೇ ಕೆಲವು ಸಂಘಟನೆಗಳಿಗೆ ತ್ರಿಶೂಲ ಕೊಟ್ಟು ತರಬೇತಿ ನೀಡುತ್ತಿದೆ : H.D ಕುಮಾರಸ್ವಾಮಿ