ಬೆಂಗಳೂರು :ರಾಜ್ಯದಲ್ಲಿ ಲೋಕಸಭೆ ಚುನಾವಣೆ ಕಾವು ದಿನದಿಂದ ದಿನಕ್ಕೆ ಏರತೊಡಗಿದೆ. ಇದರ ಮಧ್ಯೆ ಬಿಜೆಪಿ ಹೈಕಮಾಂಡ್, ಕೆಆರ್ಪಿಪಿ ಸಂಸ್ಥಾಪಕ, ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರನ್ನು ಮರಳಿ ಬಿಜೆಪಿಗೆ ಸೇರಿಸಿಕೊಳ್ಳಲು ಗ್ರೀನ್ ಸಿಗ್ನಲ್ ನೀಡಿದೆ.
ವಿಧಾನಸಭೆ ಚುನಾವಣೆ ವೇಳೆ ಪಕ್ಷದಲ್ಲಿ ‘ಗುಂಪುಗಾರಿಕೆ’ ಇತ್ತು : ಸ್ಪೋಟಕ ಹೇಳಿಕೆ ನೀಡಿದ ಡಿವಿ ಸದಾನಂದಗೌಡ
KRPP ಸಂಸ್ಥಾಪಕ ಜನಾರ್ಧನ ರೆಡ್ಡಿ ನಾಳೆ ಬಿಜೆಪಿ ಸೇರ್ಪಡೆ ಹಿನ್ನೆಲೆ, ಬೆಂಗಳೂರಿನಲ್ಲಿ ಇಂದು ತಮ್ಮ ನಿವಾಸದಲ್ಲಿ ಮಹತ್ವದ ಸಭೆ ಕರೆಡಿದ್ದಾರೆ. ಜನಾರ್ಧನ ರೆಡ್ಡಿ ಬೆಂಬಲಿಗರು, ಪದಾಧಿಕಾರಿಗಳು, ಆಪ್ತರ ಜೊತೆ ಜನಾರ್ದನ ರೆಡ್ಡಿ ಸಭೆ ನಡೆಸಲಿದ್ದಾರೆ.ಈ ವೇಳೆ ಜನಾರ್ದನ ರೆಡ್ಡಿ ಬಿಜೆಪಿ ಸೇರುವ ಬಗ್ಗೆ ಬೆಂಬಲಿಗರ ಅಭಿಪ್ರಾಯವನ್ನು ಪಡೆಯಲಿದ್ದಾರೆ ಎಂದು ತಿಳಿದುಬಂದಿದೆ.
ಯಾವುದೇ ‘ಆಸ್ತಿ ತೆರಿಗೆ’ಯನ್ನು ಹೆಚ್ಚಳ ಮಾಡುತ್ತಿಲ್ಲ, ಹರಿದಾಡುತ್ತಿರುವ ‘ಸುದ್ದಿ ಸುಳ್ಳು’- ಬಿಬಿಎಂಪಿ ಸ್ಪಷ್ಟನೆ
ಇತ್ತೀಚೆಗಷ್ಟೇ ಈ ಬಗ್ಗೆ ಚರ್ಚಿಸಲು ಹೈಕಮಾಂಡ್, ಶ್ರೀರಾಮುಲು ಅವರನ್ನು ಕರೆಯಿಸಿಕೊಂಡು ಮಾತುಕತೆ ನಡೆಸಿತ್ತು. ಬಳಿಕ ಖುದ್ದು ಅಮಿತ್ ಶಾ, ಜನಾದರ್ನ ರೆಡ್ಡಿಯನ್ನು ದೆಹಲಿಗೆ ಕರೆಯಿಸಿಕೊಂಡು ಅಂತಿಮ ಸುತ್ತಿನ ಮಾತುಕತೆ ನಡೆಸಿದ್ದರು. ಇದೀಗ ರೆಡ್ಡಿಯನ್ನು ಬಿಜೆಪಿಗೆ ಸೇರಿಸಿಕೊಳ್ಳಲು ಮುಹೂರ್ತ ಸಹ ಫಿಕ್ಸ್ ಆಗಿದೆ. ನಾಳೆ ಜನಾರ್ದನ ರೆಡ್ಡಿ ಬಿಜೆಪಿ ಸೇರಲಿದ್ದಾರೆ ಎಂದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಈ ಬಗ್ಗೆ ತಮ್ಮ ಬೆಂಬಲಿಗರಿಗೆ ತಿಳಿಸಲು ಇಂದು ಸಂಜೆ ಮಹತ್ವದ ಸಭೆ ಕರೆದಿದ್ದಾರೆ.