ಸುಭಾಷಿತ :

Tuesday, January 28 , 2020 2:08 PM

ಮೈತ್ರಿ ಸರ್ಕಾರ ಬೀಳಿಸುವ ಸಂಚುರೂಪಿಸಿದ ಸಿಎಂ ಯಡಿಯೂರಪ್ಪ, ಅಮಿತಾ ಶಾ ರಾಜೀನಾಮೆಗೆ ಜನಾರ್ಧನ ಪೂಜಾರಿ ಆಗ್ರಹ


Friday, November 8th, 2019 3:07 pm

ಮಂಗಳೂರು : ಜನಾದೇಶವನ್ನು ಧಿಕ್ಕರಿಸಿ, ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರವನ್ನು ಕೆಳಗಿಸುವ ಮೂಲಕ ಬಿಜೆಪಿ ಸರ್ಕಾರ ರಚಿಸಿದೆ. ಇಂತಹ ಸರ್ಕಾರ ನೈತಿಕತೆ ಇದ್ದರೇ, ಪ್ರಜಾಪ್ರಭುತ್ವದ ಮೇಲೆ ನಂಬಿಕೆ ಇದ್ದರೇ ಸಂಚು ರೂಪಿಸಿದ್ದ ಸಿಎಂ ಯಡಿಯೂರಪ್ಪ, ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜೀನಾಮೆ ನೀಡಬೇಕು ಎಂದು ಹಿರಿಯ ಕಾಂಗ್ರೆಸ್ ನಾಯಕ ಜನಾರ್ಧನ ಪೂಜಾರಿ ಒತ್ತಾಯಿಸಿದ್ದಾರೆ.

ನಗರದಲ್ಲಿ ಸುದ್ದಿಘೋಷ್ಠಿ ಉದ್ದೇಶಿಸಿ ಮಾತನಾಡಿ ಹಿರಿಯ ಕಾಂಗ್ರೆಸ್ ನಾಯಕ ಬಿ ಜನಾರ್ಧನ ಪೂಜಾರಿ, ಸಿಎಂ ಯಡಿಯೂರಪ್ಪ ಅವರು ಆಪರೇಷನ್ ಕಮಲದ ಬಗ್ಗೆ ಮಾತನಾಡಿದ ಆಡಿಯೋ ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆ ನಡೆಯುತ್ತಿದೆ. ಸುಪ್ರೀಂ ಕೋರ್ಟ್ ಸಾಕ್ಷಿಯಾಗಿ ಪರಿಗಣಿಸಿರುವುದು ಸ್ವಾಗತಾರ್ಹ ಎಂದು ಹೇಳಿದರು.

ಇನ್ನೂ ರಾಜ್ಯದಲ್ಲಿ ಆಡಳಿತ ನಡೆಸುತ್ತಿದ್ದ ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಸರ್ಕಾರವನ್ನು ಆಪರೇಷನ್ ಕಮನದ ಮೂಲಕ ಜನಾದೇಶದ ವಿರುದ್ಧ ಬೀಳಿಸಿದ್ದೇ ಬಿಜೆಪಿಯ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ. ಇಂತಹವರು ಪ್ರಜಾಪ್ರಭುತ್ವದ ಮೇಲೆ ನೈತಿಕ ನಂಬಿಕೆ ಇದ್ದರೇ ರಾಜೀನಾಮೆ ನೀಡಲಿ ಎಂದು ಒತ್ತಾಯಿಸಿದರು.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions