ಬೆಂಗಳೂರು: ವಿಧಾನಸಭೆ ಉಪಸಭಾಪತಿ ಆನಂದ ಮಾಮನಿ ಅವರ ಅಕಾಲಿಕ ನಿಧನವು ಪಕ್ಷಕ್ಕೆ ಆಘಾತ ನೀಡಿದೆ ಎಂದು ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್ ( MLC N Ravikumar ) ಅವರು ಬೇಸರ ವ್ಯಕ್ತಪಡಿಸಿದ್ದಾರೆ.
ಇಂದು ಚಿತ್ತಾಪುರ ಮತ್ತು ಅಳಂದಗಳಲ್ಲಿ ನಡೆಸಲುದ್ದೇಶಿಸಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದ ‘ಜನಸಂಕಲ್ಪ’ ಯಾತ್ರೆಯನ್ನು ಆನಂದ ಮಾಮನಿ ಅವರ ನಿಧನದ ಹಿನ್ನೆಲೆಯಲ್ಲಿ ಮುಂದೂಡಲಾಗಿದೆ ಎಂದು ಈ ಯಾತ್ರೆಯ ಸಂಯೋಜಕರೂ ಆಗಿರುವ ಎನ್.ರವಿಕುಮಾರ್ ಅವರು ತಿಳಿಸಿದ್ದಾರೆ.
BIGG NEWS : ರಾಜ್ಯಕ್ಕೆ ಒಂದು ವರ್ಷದಲ್ಲಿ ಮಹದಾಯಿ ನೀರು ಬರಲಿದೆ : ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ