ಬೆಂಗಳೂರು: ರಾಜ್ಯ ಸರ್ಕಾರದಿಂದ ದೊಡ್ಡಬಳ್ಳಾಪುರದಲ್ಲಿ ನಾಳೆಯ ಬಿಜೆಪಿ ಜನೋತ್ಸವ ಕಾರ್ಯಕ್ರಮವನ್ನು ( BJP Janotsava Program ) ಆಯೋಜಿಸಲಾಗಿತ್ತು. ನಿನ್ನೆ ರಾತ್ರಿ ಸಚಿವ ಉಮೇಶ್ ಕತ್ತಿ ( Minister Umesh Katti ) ನಿಧನರಾದ ಹಿನ್ನಲೆಯಲ್ಲಿ, ನಾಳೆ ನಡೆಯಬೇಕಿದ್ದಂತ ಜನೋತ್ಸವ ಕಾರ್ಯಕ್ರಮ ಭಾನುವಾರಕ್ಕೆ ಮುಂದೂಡಿಕೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ತಿಳಿಸಿದ್ದಾರೆ.
ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ನಮ್ಮ ಸಂಪುಟದ ಸಹೋದ್ಯೋಗಿ ಅರಣ್ಯ ಸಚಿವ ಉಮೇಶ್ ಕತ್ತಿಯವರು ಕಳೆದ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರ ಅಂತಿಮ ಸಂಸ್ಕಾರಕ್ಕೆ ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಈ ಹಿನ್ನಲೆಯಲ್ಲಿ ನಾಳೆ ಬಿಜೆಪಿ ಪಕ್ಷದಿಂದ ದೊಡ್ಡಬಳ್ಳಾಪುರದಲ್ಲಿ ಆಯೋಜಿಸಿದ್ದಂತ ಜನೋತ್ಸವ ಕಾರ್ಯಕ್ರಮವನ್ನು ಭಾನುವಾರಕ್ಕೆ ಮುಂದೂಡಿಕೆ ಮಾಡಲಾಗಿದೆ ಎಂಬುದಾಗಿ ತಿಳಿಸಿದ್ದಾರೆ.
BREAKING NEWS : ಸ್ವಗ್ರಾಮಕ್ಕೆ ಕತ್ತಿ ಪಾರ್ಥೀವ ಶರೀರ ಏರ್ ಲಿಫ್ಟ್ : ಬೆಲ್ಲದ ಬಾಗೇವಾಡಿಯಲ್ಲಿ ಅಂತಿಮ ಸಂಸ್ಕಾರ
ಅಂದಹಾಗೇ ಹೃದಯಾಘಾತದಿಂದ ಸಚಿವ ಉಮೇಶ್ ಕತ್ತಿಯವರು ನಿನ್ನೆ ನಿಧನರಾಗಿದ್ದರು. ಅವರ ಅಂತ್ಯಕ್ರಿಯೆಯನ್ನು ಇಂದು ಸ್ವಗ್ರಾಮದಲ್ಲಿ ನೆರವೇರಿಸಲಾಗುತ್ತಿದೆ. ಅವರ ನಿಧನದ ಹಿನ್ನಲೆಯಲ್ಲಿ ರಾಜ್ಯ ಸರ್ಕಾರದಿಂದ ಮೂರು ದಿನಗಳ ಕಾಲ ರಾಜ್ಯಾಧ್ಯಂತ ಶೋಕಾಚರಣೆ ಘೋಷಣೆ ಮಾಡಲಾಗಿದೆ. ಈ ಹಿನ್ನಲೆಯಲ್ಲಿಯೇ ನಾಳೆ ದೊಡ್ಡಬಳ್ಳಾಪುರದಲ್ಲಿ ನಡೆಯಬೇಕಿದ್ದಂತ ಬಿಜೆಪಿಯ ಜನೋತ್ಸವ ಕಾರ್ಯಕ್ರಮವನ್ನು ಭಾನುವಾರಕ್ಕೆ ಮುಂದೂಡಿಕೆ ಮಾಡಲಾಗಿದೆ.