ಬೆಂಗಳೂರು/ಶಿವಮೊಗ್ಗ: ನಾಳೆ ದೇಶದ 2ನೇ ಅತೀ ಉದ್ದದ ಕೇಬಲ್ ಸೇತುವೆಯಾದಂತ ಅಂಬಾರಗೋಡ್ಲು-ಕಳಸವಳ್ಳಿ ಸೇತುವೆ ಉದ್ಘಾಟನೆಯಾಗುತ್ತಿದೆ. ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ನಾಳೆ ಲೋಕಾರ್ಪಣೆ ಮಾಡಲಿದ್ದಾರೆ. ಇಂತಹ ಸೇತುವೆ ಉದ್ಘಾಟನೆ ಕಾರ್ಯಕ್ರಮಕ್ಕೆ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಹಾಜರಾದರೇ, ಸಾಗರದಲ್ಲಿ ನಡೆಯುವಂತ ವೇದಿಕೆ ಕಾರ್ಯಕ್ರಮದಿಂದ ದೂರವೇ ಉಳಿಯಲಿದ್ದಾರೆ ಎಂಬುದಾಗಿ ತಿಳಿದು ಬಂದಿದೆ.
ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಅವರ ನಾಳೆಯ ಕಾರ್ಯಕ್ರಮದ ಅಧಿಕೃತ ಪಟ್ಟಿ ನಿಮ್ಮ ಕನ್ನಡ ನ್ಯೂಸ್ ನೌಗೆ ಲಭ್ಯವಾಗಿದೆ. ಅದರಲ್ಲಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಪ್ರವಾಸ ಕಾರ್ಯಕ್ರಮ ಪಟ್ಟಿಯಂತೆ ನಾಳೆ ಬೆಳಗ್ಗೆ 10 ಗಂಟೆಗೆ ಶಿವಮೊಗ್ಗ ಪ್ರವಾಸಿ ಮಂದಿರದಲ್ಲಿ ಸಾರ್ವಜನಿಕರ ಭೇಟಿಯನ್ನು ಮಾಡಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ಶರಾವತಿ ಹಿನ್ನೀರಿನಲ್ಲಿ ನೂತನವಾಗಿ ನಿರ್ಮಿಸಿರುವ ಸೇತುವೆಯ ಉದ್ಘಾಟನಾ ಸಮಾರಂಭದಲ್ಲಿ ಭಾಗಿ ಎಂದಿದೆ. ಮಧ್ಯಾಹ್ನ 1.30ರಿಂದ 2.15ರವರೆಗಿನ ಕಾರ್ಯಕ್ರಮಗಳನ್ನು ಕಾಯ್ದಿರಿಸಲಾಗಿದೆ ಎಂಬುದಾಗಿ ತಿಳಿಸಲಾಗಿದೆ.
ಇನ್ನೂ ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಅವರ ಪ್ರವಾಸದ ವಿವರದಲ್ಲಿ ನಾಳೆ ಮಧ್ಯಾಹ್ನ 12 ಗಂಟೆಗೆ ಕಳಸವಳ್ಳಿ-ಅಬರಗೋಡ್ಲು ನೂತನ ಸೇತುವೆ ಉದ್ಘಾಟನ ಕಾರ್ಯಕ್ರಮ, ಕಳಸವಳ್ಳಿ ಗ್ರಾಮ ಎಂದಿದೆ. ಇದಲ್ಲದೇ ಸಂಜೆ 4.30ಕ್ಕೆ ಶಕ್ತಿ ಯೋಜನೆ ಮೂಲಕ ಕೆ ಎಸ್ ಆರ್ ಟಿ ಸಿ ಬಸ್ಸಿನಲ್ಲಿ ರಾಜ್ಯದಲ್ಲಿ 500 ಕೋಟಿ ಮಹಿಳೆಯರು ಪ್ರಯಾಣಿಸಿದ್ದರ ಪ್ರಯುಕ್ತ ಸಾಗರ ಬಸ್ ನಿಲ್ದಾಣದಲ್ಲಿ ಭಾಗಿಯಾಗುವ ವಿವರ ಮಾತ್ರವೇ ಇದೆ.
ಒಟ್ಟಾರೆಯಾಗಿ ನಾಳೆ ಸಿಗಂದೂರು ಸೇತುವೆಯ ಉದ್ಘಾಟನೆಯ ಕಾರ್ಯಕ್ರಮದಲ್ಲಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಸಾಗರ ಕ್ಷೇತ್ರ ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಮಾತ್ರವೇ ಭಾಗಿಯಾಗಲಿದ್ದಾರೆ. ಮಧ್ಯಾಹ್ನ 2 ಗಂಟೆಯಿಂದ ಸಾಗರದ ನೆಹರು ಮೈದಾನದಲ್ಲಿ ನಡೆಯುವಂತ ವೇದಿಕೆ ಕಾರ್ಯಕ್ರಮದಿಂದ ದೂರವೇ ಉಳಿಯಲಿದ್ದಾರೆ ಎನ್ನಲಾಗುತ್ತಿದೆ. ಅದರೇ ಸತೀಶ್ ಜಾರಕಿಹೊಳಿ ಅವರು ಸಾಗರದಲ್ಲಿನ ಸಿಗಂದೂರು ಸೇತುವೆ ಉದ್ಘಾಟನಾ ವೇದಿಕೆ ಕಾರ್ಯಕ್ರಮದಲ್ಲಿ ಭಾಗಿಯಾದ್ರೇ, ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಭಾಗಿಯಾಗಲಿದ್ದಾರೆ ಎಂಬುದಾಗಿಯೂ ಉನ್ನತ ಮೂಲಗಳಿಂದ ತಿಳಿದು ಬಂದಿದೆ. ಆ ಬಗ್ಗೆ ನಾಳೆಯವರೆಗೂ ಕಾದು ನೋಡಬೇಕಿದೆ.
ವರದಿ; ವಸಂತ ಬಿ ಈಶ್ವರಗೆರೆ.., ಸಂಪಾದಕರು
BIG NEWS: ‘ಸಿಗಂದೂರು ಸೇತುವೆ’ಗಾಗಿ ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಯಡಿಯೂರಪ್ಪಗೆ ಬರೆದಿದ್ದ ಪತ್ರ ವೈರಲ್
GOOD NEWS: ‘ಸಾರಿಗೆ ಬಸ್ ಪ್ರಯಾಣಿಕ’ರಿಗೆ ಗುಡ್ ನ್ಯೂಸ್: ಇನ್ಮುಂದೆ ಈ ವಸ್ತು ಸಾಗಿಸಲು ಅವಕಾಶ, ಈ ದರ ನಿಗದಿ