ನವದೆಹಲಿ: ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಅಧ್ಯಕ್ಷರಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಕಾರ್ಯದರ್ಶಿ ಜಯ್ ಶಾ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಆಗಸ್ಟ್ 27 ರಂದು (ಮಂಗಳವಾರ) ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕದಂದು ಶಾ ಐಸಿಸಿ ಉನ್ನತ ಹುದ್ದೆಗೆ ಆಯ್ಕೆಯಾಗುತ್ತಾರೆ ಎಂಬ ಸುದ್ದಿಯನ್ನು ದೃಢಪಡಿಸಲಾಯಿತು.
ಜಗಮೋಹನ್ ದಾಲ್ಮಿಯಾ, ಶರದ್ ಪವಾರ್, ಎನ್ ಶ್ರೀನಿವಾಸನ್ ಮತ್ತು ಶಶಾಂಕ್ ಮನೋಹರ್ ನಂತರ ಈ ಹುದ್ದೆಯನ್ನು ಅಲಂಕರಿಸಿದ ಐದನೇ ಭಾರತೀಯ ಎಂಬ ಹೆಗ್ಗಳಿಕೆಗೆ ಶಾ ಪಾತ್ರರಾಗಿದ್ದಾರೆ.