ಬೆಂಗಳೂರು: ಲಂಚ- ಮಂಚದ ಸರ್ಕಾರ ಎಂದು ಆರೋಪ ಮಾಡಿದ್ದ ಮಾಜಿ ಸಚಿವ ಪ್ರಿಯಾಂಕ ಖರ್ಗೆಯವರಿಗೆ ( Priyank Kharge ) “ತಮ್ಮ ಮನೆಯ ಹೆಂಚು ತೂತು” ಎಂಬುದೇ ಗೊತ್ತಿಲ್ಲ. ಇವರು ಆರೋಪ ಮಾಡಿದ ಬೆನ್ನಲ್ಲೆ ಜಯಮಾಲಾ ಅವರ ಲಂಚದ ಹಗರಣ ಬಯಲಾಗಿದೆ. ಹಾಗಾದರೆ ಲಂಚದ ಸರ್ಕಾರ ಯಾರದ್ದು? ಎಂಬುದಾಗಿ ಬಿಜೆಪಿ ಕರ್ನಾಟಕ( BJP Karnataka), ಕಾಂಗ್ರೆಸ್ ( Congress ) ವಿರುದ್ಧ ವಾಗ್ಧಾಳಿ ನಡೆಸಿದೆ.
ಲಂಚ- ಮಂಚದ ಸರ್ಕಾರ ಎಂದು ಆರೋಪ ಮಾಡಿದ್ದ ಮಾಜಿ ಸಚಿವ ಪ್ರಿಯಾಂಕ ಖರ್ಗೆಯವರಿಗೆ "ತಮ್ಮ ಮನೆಯ ಹೆಂಚು ತೂತು" ಎಂಬುದೇ ಗೊತ್ತಿಲ್ಲ.
ಇವರು ಆರೋಪ ಮಾಡಿದ ಬೆನ್ನಲ್ಲೆ ಜಯಮಾಲಾ ಅವರ ಲಂಚದ ಹಗರಣ ಬಯಲಾಗಿದೆ. ಹಾಗಾದರೆ ಲಂಚದ ಸರ್ಕಾರ ಯಾರದ್ದು?#ಮಹಿಳಾವಿರೋಧಿಕಾಂಗ್ರೆಸ್ pic.twitter.com/MQSd9gB8bc
— BJP Karnataka (@BJP4Karnataka) August 13, 2022
ಕಾಂಗ್ರೆಸ್ ನಾಯಕರ ರಾತ್ರಿ ಬದುಕಿನ ರಂಗ-ಬಿರಂಗಿ ಬಗ್ಗೆ ಸಾಕಷ್ಟು ದಂತಕತೆಗಳು ಮಾತ್ರವಲ್ಲ, ಗುಪ್ತಸಿಡಿಗಳೂ ಇವೆ. ಜೂನಿಯರ್ ಖರ್ಗೆ ಅವರೇ, ಸಭ್ಯಸ್ಥರ ಮುಖವಾಡ ಹಾಕಿ ಸಮಾಜದ ಕಣ್ಣಿಗೆ ಗಣ್ಯರೆಂದು ಬಿಂಬಿಸಿಕೊಂಡ ಕಾಂಗ್ರೆಸ್ ಗೋಮುಖ ವ್ಯಾಘ್ರಗಳ ಪಟ್ಟಿ ನೀಡಿದರೆ ಸಮರ್ಥನೆ ಮಾಡಿಕೊಳ್ಳುವುದಕ್ಕೂ ನಿಮಗೆ ಕಷ್ಟವಾಗಬಹುದು ಎಂದು ವ್ಯಂಗ್ಯವಾಡಿದೆ.
ಕಾಂಗ್ರೆಸ್ ನಾಯಕರ ರಾತ್ರಿ ಬದುಕಿನ ರಂಗ-ಬಿರಂಗಿ ಬಗ್ಗೆ ಸಾಕಷ್ಟು ದಂತಕತೆಗಳು ಮಾತ್ರವಲ್ಲ, ಗುಪ್ತಸಿಡಿಗಳೂ ಇವೆ.
ಜೂನಿಯರ್ ಖರ್ಗೆ ಅವರೇ, ಸಭ್ಯಸ್ಥರ ಮುಖವಾಡ ಹಾಕಿ ಸಮಾಜದ ಕಣ್ಣಿಗೆ ಗಣ್ಯರೆಂದು ಬಿಂಬಿಸಿಕೊಂಡ ಕಾಂಗ್ರೆಸ್ ಗೋಮುಖ ವ್ಯಾಘ್ರಗಳ ಪಟ್ಟಿ ನೀಡಿದರೆ ಸಮರ್ಥನೆ ಮಾಡಿಕೊಳ್ಳುವುದಕ್ಕೂ ನಿಮಗೆ ಕಷ್ಟವಾಗಬಹುದು.#ಮಹಿಳಾವಿರೋಧಿಕಾಂಗ್ರೆಸ್
— BJP Karnataka (@BJP4Karnataka) August 13, 2022
ಸಾವಿರಾರು ಮಹಿಳೆಯರು, ಪ್ರತಿಭಾವಂತರು, ವಿದ್ಯಾವಂತರು ಕಷ್ಟಪಟ್ಟು, ಅನೇಕ ಪರೀಕ್ಷೆಗಳನ್ನು ಉತ್ತೀರ್ಣರಾಗಿ, ಕೆಲಸ ಗಿಟ್ಟಿಸಿಕೊಳ್ಳುತ್ತಾರೆ. ಪ್ರಿಯಾಂಕ ಖರ್ಗೆ ಅವರೇ ನಿಮ್ಮ ಈ ಮಾತುಗಳು, ಅಷ್ಟು ಜನ ಮಹಿಳೆಯರಿಗೆ ಅವಮಾನ ಮಾಡಿದಂತಲ್ಲವೇ? ಕೂಡಲೇ ಕ್ಷಮೆಯಾಚಿಸಿ ಎಂದು ಒತ್ತಾಯಿಸಿದೆ.
ಸಾವಿರಾರು ಮಹಿಳೆಯರು, ಪ್ರತಿಭಾವಂತರು, ವಿದ್ಯಾವಂತರು ಕಷ್ಟಪಟ್ಟು, ಅನೇಕ ಪರೀಕ್ಷೆಗಳನ್ನು ಉತ್ತೀರ್ಣರಾಗಿ, ಕೆಲಸ ಗಿಟ್ಟಿಸಿಕೊಳ್ಳುತ್ತಾರೆ.
ಪ್ರಿಯಾಂಕ ಖರ್ಗೆ ಅವರೇ ನಿಮ್ಮ ಈ ಮಾತುಗಳು, ಅಷ್ಟು ಜನ ಮಹಿಳೆಯರಿಗೆ ಅವಮಾನ ಮಾಡಿದಂತಲ್ಲವೇ?
ಕೂಡಲೇ ಕ್ಷಮೆಯಾಚಿಸಿ.#ಮಹಿಳಾವಿರೋಧಿಕಾಂಗ್ರೆಸ್ pic.twitter.com/lTpZkAvNwr
— BJP Karnataka (@BJP4Karnataka) August 13, 2022