ಬೆಳಗಾವಿ: ರಾಜ್ಯದಲ್ಲಿ ಬೇರೆ ಕಡೆ ಪಂಚಮಸಾಲಿ ಸಮಾವೇಶ ಮಾಡೋದು ಸುಲಭ, ಆದ್ರೇ ಗೋಕಾಕ್ ನಲ್ಲಿ ಪಂಚಮಸಾಲಿ ಸಮಾವೇಶ ಮಾಡೋದಕ್ಕೆ ಎಂಟೆದೆ ಬೇಕು ಎಂಬುದಾಗಿ ಕೂಡಲಸಂಗಮ ಪೀಠದ ಜಗದ್ಗುರು ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ.

BIG BREAKING NEWS: ಈ ಬಾರಿ ಬಾದಾಮಿ ಕ್ಷೇತ್ರದಿಂದ ಸ್ಪರ್ಧಿಸುವುದಿಲ್ಲ – ಮಾಜಿ ಸಿಎಂ ಸಿದ್ಧರಾಮಯ್ಯ ಘೋಷಣೆ | Siddaramaiah

ಇಂದು ಗೋಕಾಕ್ ನಗರದಲ್ಲಿ ನಡೆದಂತ ಅಖಿಲ ಭಾರತ ಪಂಚಮಸಾಲಿ ಮಹಾಸಭಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದಂತ ಅವರು, ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಕಲ್ಪಿಸುವಂತೆ ಒತ್ತಾಯಿಸಿ ಹೋರಾಟ ಮಾಡಲಾಗುತ್ತಿದೆ. ಈಗಾಗಲೇ ಸಾವಿರಾರು ಕಿಲೋಮೀಟರ್ ಪಾದಯಾತ್ರೆ ಮಾಡಿ ರಾಜ್ಯ ಸರ್ಕಾರಕ್ಕೆ ಹಕ್ಕೊತ್ತಾಯ ಮಾಡಲಾಗಿದೆ ಎಂದರು.

ರಾಜ್ಯದ ಆಟೋ, ಟ್ಯಾಕ್ಸಿ ಚಾಲಕರ ಮಕ್ಕಳಿಗೆ ಭರ್ಜರಿ ಗುಡ್ ನ್ಯೂಸ್: ಸರ್ಕಾರದಿಂದ ರೂ.11 ಸಾವಿರ ‘ವಿದ್ಯಾಸಿರಿ ವಿದ್ಯಾರ್ಥಿವೇತನ’ ಘೋಷಣೆ

ರಾಜ್ಯ ಸರ್ಕಾರಕ್ಕೆ ಬೆಂಗಳೂರಿನಲ್ಲಿ ಹತ್ತು ಲಕ್ಷ ಜನ ಸೇರಿಸಿ ಸಮಾವೇಶ ಮಾಡಿದರು ಪಂಚಮಸಾಲಿ ಸಮುದಾಯದ ಮೀಸಲಾತಿ ಕೂಗು ಕೇಳಿಸುತ್ತಿಲ್ಲ. ಈ ಹಿಂದಿನ ಸಿಎಂ ಬಿಎಸ್ ಯಡಿಯೂರಪ್ಪ ಆರು ತಿಂಗಳಲ್ಲಿ ಮೀಸಲಾತಿ ಕೊಡುವುದಾಗಿ ಹೇಳಿದ್ದರು, ಬಳಿಕ ಅವರೇ ಸಿಎಂ ಸ್ಥಾನದಿಂದ ಕೆಳಗಿಳಿದರು. ಬೊಮ್ಮಾಯಿ ಮೂರು ತಿಂಗಳ ಕಾಲಾವಕಾಶ ಕೇಳಿ ಮಾತು ತಪ್ಪಿದ್ದಾರೆ ಎಂದು ಗುಡುಗಿದರು.

ನಿಜಕ್ಕೂ ಇದು KSRTC ಬಸ್ ನಿರ್ವಾಹಕನ ಕರ್ತವ್ಯ ಪ್ರಜ್ಞೆ, ಪ್ರಯಾಣಿಕರ ಸುರಕ್ಷತೆ ಅಂದರೆ: ಅಂತದ್ದೇನು ಅಂತ ಈ ಸುದ್ದಿ ಓದಿ.!

ಸರ್ಕಾರದ ವಿಳಂಬ ನೀತಿಯಿಂದ ಪಂಚಮಸಾಲಿ ಸಮುದಾಯದವರಿಗೆ ನೋವಾಗಿದೆ. ಬೆಂಗಳೂರಿನಲ್ಲಿ ಬೃಹತ್ ಪಂಚಮಸಾಲಿ ವಿರಾಟ ಶಕ್ತಿ ಪ್ರದರ್ಶನ ಮಾಡಲಾಗುತ್ತದೆ. ಡಿಸೆಂಬರ್ 12ರಂದು ಪಂಚಮಸಾಲಿ ಸಮುದಾಯವನ್ನು 2ಎ ಮೀಸಲಾತಿಗೆ ಸೇರಿಸುವಂತೆ ಒತ್ತಾಯಿಸಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಲಾಗುತ್ತದೆ ಎಂಬುದಾಗಿ ಹೇಳಿದರು.

Share.
Exit mobile version