Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : `NEET UG’ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್ : ಪರೀಕ್ಷಾ ಸಮಯ 195 ನಿಮಿಷಕ್ಕೆ ವಿಸ್ತರಣೆ, ರಫ್ ವರ್ಕ್ ಗೆ 4 ಪುಟಗಳ ಅವಕಾಶ!

ಮೊದಲ ಬಾರಿಗೆ ಮನೆ ಖರೀದಿಸುವವರು ತಿಳಿಯಲೇಬೇಕಾದ ವಿಷಯಗಳಿವು.!

BREAKING : ‘RSS’ ಮುಖ್ಯಸ್ಥ ಮೋಹನ್ ಭಾಗವತ್ ಚಲಿಸುತ್ತಿದ್ದ ರೈಲಿನ ಮೇಲೆ ಕಿಡಿಗೇಡಿಗಳಿಂದ ಕಲ್ಲುತೂರಾಟ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮಂಡ್ಯದ ಮದ್ದೂರಲ್ಲಿ ಬೆಳ್ಳಂಬೆಳಿಗ್ಗೆ ಜೆಸಿಬಿ ಘರ್ಜನೆ : ನಗರಸಭಾ ಅಧಿಕಾರಿಗಳಿಂದ ಪುಟ್ ಪಾತ್ ಒತ್ತುವರಿ ತೆರವು
KARNATAKA

ಮಂಡ್ಯದ ಮದ್ದೂರಲ್ಲಿ ಬೆಳ್ಳಂಬೆಳಿಗ್ಗೆ ಜೆಸಿಬಿ ಘರ್ಜನೆ : ನಗರಸಭಾ ಅಧಿಕಾರಿಗಳಿಂದ ಪುಟ್ ಪಾತ್ ಒತ್ತುವರಿ ತೆರವು

By ವಸಂತ ಬಿ ಈಶ್ವರಗೆರೆ

ಮಂಡ್ಯ : ಮದ್ದೂರು ನಗರದ ಪೇಟೆ ಬೀದಿಯ ಪುಟ್ ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ನಡೆಯಿತು.

ಪೇಟೆ ಬೀದಿ ರಸ್ತೆಯ ಕೊಲ್ಲಿ ವೃತ್ತದಿಂದ ಪ್ರವಾಸಿ ಮಂದಿರದ ವೃತ್ತದವರೆಗೆ ತೆರವು ಕಾರ್ಯಾಚರಣೆಯಲ್ಲಿ ನಗರಸಭೆ, ಲೋಕೋಪಯೋಗಿ ಹಾಗೂ ಮದ್ದೂರು ಪೋಲೀಸ್ ಠಾಣೆಯ ಇನ್ಸ್ಪೆಕ್ಟರ್ ನವೀನ್ ಅವರ ನೇತೃತ್ವದಲ್ಲಿ ಬಿಗಿ ಭದ್ರತೆಯಲ್ಲಿ ಅಂಗಡಿ ಮುಂಗಟ್ಟುಗಳ ಸರಕು, ತಗಡಿನಶೀಟ್ ಮತ್ತು ಇತರೆ ವಸ್ತುಗಳನ್ನು ಫುಟ್‌ಪಾತ್ ಮೇಲೆ ಹಾಕಿದ್ದನ್ನು ತೆರವುಗೊಳಿಸಿದರು.

ಇದೇ ವೇಳೆ ನಗರಸಭಾ ಪೌರಾಯುಕ್ತರಾದ ರಾಧಿಕಾ ಅವರು ಮಾತನಾಡಿ, ಮದ್ದೂರು ನಗರದ ಪೇಟೆ ಬೀದಿ ರಸ್ತೆಯಲ್ಲಿ ಅಡ್ಡಾದಿಡ್ಡಿ ವಾಹನ ಪಾರ್ಕಿಂಗ್ ಮಾಡುವುದು. ಬಹುತೇಕ ಅಂಗಡಿಯವರು ತಮ್ಮ ಅಂಗಡಿಗಳ ಸರಕನ್ನು ಪುಟ್ ಪಾತ್ ಒತ್ತುವರಿ ಮಾಡಿಕೊಂಡು ಹಾಕುವುದರಿಂದ ವಾಹನ ಹಾಗೂ ಸಾರ್ವಜನಿಕರು ಸಂಚಾರ ಮಾಡುವುದು ಕಷ್ಟವಾಗುತ್ತದೆ ಎಂದು ನಗರಸಭೆಗೆ ಈ ಬಗ್ಗೆ ನಾಗರಿಕರು ಹಲವು ಬಾರಿ ಮನವಿ ಮಾಡಿದ್ದರು.

ಈ ಹಿನ್ನಲೆ ಎಲ್ಲಾ ಸಿಬ್ಬಂದಿಯೊಂದಿಗೆ ತೆರವು ಕಾರ್ಯಾಚರಣೆ ಮಾಡಲಾಗುತ್ತಿದೆ. ಪಾದಚಾರಿ ಮಾರ್ಗದಲ್ಲಿ ಯಾವುದೇ ನಾಮಫಲಕ ಅಂಗಡಿ ಸರಕುಗಳನ್ನು ಇಡದೆ ವಾಹನಗಳು ಹಾಗೂ ಪಾದಚಾರಿಗಳು ಸುಗಮವಾಗಿ ಸಂಚರಿಸಲು ಅಂಗಡಿ ಮಾಲೀಕರು ಸಾರ್ವಜನಿಕರು ಸಹಕರಿಸಬೇಕು ಎಂದು ಮನವಿ ಮಾಡಿದರು.

ನಗರಸಭೆ ಅಧಿಕಾರಿಗಳೊಂದಿಗೆ ಮಾತಿನ ಚಕಮಕಿ

ಪುಟ್ ಪಾತ್ ಮೇಲೆ ಅನಧಿಕೃತವಾಗಿ ಶೆಡ್ ನಿರ್ಮಿಸಿ ವ್ಯಾಪಾರ ನಡೆಸುತ್ತಿರುವ ಬೀದಿ ಬದಿ ವ್ಯಾಪಾರಿಗಳಿಗೆ ಶೆಡ್ ತೆರವುಗೊಳಿಸುವಂತೆ ನಗರಸಭೆ ವತಿಯಿಂದ ಹಲವು ಬಾರಿ ಸೂಚಿಸಲಾಗಿತ್ತು‌. ಆದ್ರೆ ವ್ಯಾಪಾರಿಗಳು ಮಾತ್ರ ಕ್ಯಾರೆ ಎನ್ನದೆ ವ್ಯಾಪಾರ ಮುಂದುವರೆಸಿದ್ದರು‌. ಗುರುವಾರ ಬೆಳ್ಳಂಬೆಳಿಗ್ಗೆ ನಗರಸಭಾ ಅಧಿಕಾರಿಗಳು ತೆರವು ಕಾರ್ಯಾಚರಣೆಗೆ ಮುಂದಾಗುತ್ತಿದ್ದಂತೆ ಆತಂಕಗೊಂಡ ವ್ಯಾಪಾರಿಗಳು ನಗರಸಭಾ ಅಧಿಕಾರಿಗಳೊಂದಿಗೆ ಮಾತಿನ ಚಕಮಕಿ ನಡೆಸಿದ ಘಟನೆಯೂ ನಡೆಯಿತು.

ಬಳಿಕ ನಾವೇ ಅಂಗಡಿ ತೆರವು ಮಾಡುತ್ತೇವೆ. ಸಮಯಾವಕಾಶ ನೀಡುವಂತೆ ಮನವಿ ಕೂಡ ಮಾಡಿದರು.ಆದರೆ, ಯಾವುದೇ. ಮನವಿಗೂ ಮನ್ನಣೆ ನೀಡದ ಅಧಿಕಾರಿಗಳು ಅಂಗಡಿಗಳಲ್ಲಿದ್ದ ವಸ್ತುಗಳನ್ನು ತೆರವುಗೊಳಿಸಿ ಜೆಸಿಬಿ ಮೂಲಕ
ಶೆಡ್, ತಗಡಿನ ಶೀಟ್ ಹಾಗೂ ಬೋರ್ಡ್ ಗಳನ್ನು ತೆರವುಗೊಳಿಸಿದರು.

ವರದಿ : ಗಿರೀಶ್ ರಾಜ್, ಮಂಡ್ಯ

Share. Facebook Twitter LinkedIn WhatsApp Email

Related Posts

ಮೊದಲ ಬಾರಿಗೆ ಮನೆ ಖರೀದಿಸುವವರು ತಿಳಿಯಲೇಬೇಕಾದ ವಿಷಯಗಳಿವು.!

2 Mins Read

ನೆಲ, ಜಲ, ಭಾಷೆ ವಿಚಾರದಲ್ಲಿ ರಾಜಿ ಇಲ್ಲ : ಮೇಕೆದಾಟು ಯೋಜನೆಗೆ ಸಿಎಂ ವಿಜಯ್ ವಿರೋಧಕ್ಕೆ ಪ್ರಿಯಾಂಕ್ ಖರ್ಗೆ ತೀರುಗೇಟು!

2 Mins Read

ಬೆಂಗಳೂರಲ್ಲಿ ಮತ್ತೊಂದು ಭೀಕರ ಅಪಘಾತ : ‘KSRTC’ ಬಸ್ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ದುರ್ಮರಣ!

1 Min Read
Recent News

BREAKING : `NEET UG’ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್ : ಪರೀಕ್ಷಾ ಸಮಯ 195 ನಿಮಿಷಕ್ಕೆ ವಿಸ್ತರಣೆ, ರಫ್ ವರ್ಕ್ ಗೆ 4 ಪುಟಗಳ ಅವಕಾಶ!

ಮೊದಲ ಬಾರಿಗೆ ಮನೆ ಖರೀದಿಸುವವರು ತಿಳಿಯಲೇಬೇಕಾದ ವಿಷಯಗಳಿವು.!

BREAKING : ‘RSS’ ಮುಖ್ಯಸ್ಥ ಮೋಹನ್ ಭಾಗವತ್ ಚಲಿಸುತ್ತಿದ್ದ ರೈಲಿನ ಮೇಲೆ ಕಿಡಿಗೇಡಿಗಳಿಂದ ಕಲ್ಲುತೂರಾಟ!

ನೆಲ, ಜಲ, ಭಾಷೆ ವಿಚಾರದಲ್ಲಿ ರಾಜಿ ಇಲ್ಲ : ಮೇಕೆದಾಟು ಯೋಜನೆಗೆ ಸಿಎಂ ವಿಜಯ್ ವಿರೋಧಕ್ಕೆ ಪ್ರಿಯಾಂಕ್ ಖರ್ಗೆ ತೀರುಗೇಟು!

State News
KARNATAKA

ಮೊದಲ ಬಾರಿಗೆ ಮನೆ ಖರೀದಿಸುವವರು ತಿಳಿಯಲೇಬೇಕಾದ ವಿಷಯಗಳಿವು.!

By kannadanewsnow57 KARNATAKA 2 Mins Read

ಸ್ವಂತ ಮನೆ ಹೊಂದುವುದು ಪ್ರತಿಯೊಬ್ಬರ ಜೀವನದ ದೊಡ್ಡ ಕನಸು ಮತ್ತು ಪ್ರಮುಖ ನಿರ್ಧಾರಗಳಲ್ಲೊಂದಾಗಿದೆ. ಆದರೆ, ಮೊದಲ ಬಾರಿಗೆ ಮನೆ ಖರೀದಿಸುವಾಗ…

ನೆಲ, ಜಲ, ಭಾಷೆ ವಿಚಾರದಲ್ಲಿ ರಾಜಿ ಇಲ್ಲ : ಮೇಕೆದಾಟು ಯೋಜನೆಗೆ ಸಿಎಂ ವಿಜಯ್ ವಿರೋಧಕ್ಕೆ ಪ್ರಿಯಾಂಕ್ ಖರ್ಗೆ ತೀರುಗೇಟು!

ಬೆಂಗಳೂರಲ್ಲಿ ಮತ್ತೊಂದು ಭೀಕರ ಅಪಘಾತ : ‘KSRTC’ ಬಸ್ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ದುರ್ಮರಣ!

ಧರ್ಮಸ್ಥಳ ಕೇಸ್ : ನಟ ಪ್ರಕಾಶ್ ರಾಜ್ ಹೆಸರು ಉಲ್ಲೇಖವಾದ ತಕ್ಷಣ ಅವರು ಕ್ರಿಮಿನಲ್ ಆಗಲ್ಲ : ಗೃಹ ಸಚಿವ ಪ್ರಿಯಾಂಕ್ ಖರ್ಗೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.